HomeKarnatakaರಾಜ್ಯದ ಹಲವೆಡೆ ಗುಡ್ಡ ಕುಸಿತ: 7 ರೈಲುಗಳ ಸಂಚಾರ ಸ್ಥಗಿತ

ರಾಜ್ಯದ ಹಲವೆಡೆ ಗುಡ್ಡ ಕುಸಿತ: 7 ರೈಲುಗಳ ಸಂಚಾರ ಸ್ಥಗಿತ

ಬೆಂಗಳೂರು: ರಾಜ್ಯದ ಹಲವೆಡೆ ಭಾರಿ ಮಳೆಯಿಂದಾಗಿ ಅವಾಂತರಗಳು ಸಂಭವಿಸಿದ್ದು, ವಿವಿಧೆಡೆ ಗುಡ್ದ ಕುಸಿತ, ಭೂಕುಸಿತದಿಂದಾಗಿ ರೈಲು ಸಂಚಾರ ಸ್ಥಗಿತಗೊಂಡಿದೆ. ರೈಲ್ವೆ ಹಳಿಗಳ ಮೇಲೆ ಗುಡ್ದ ಕುಸಿತವಾಗಿರುವುದರಿಂದ ರಾಜ್ಯದ 7 ರೈಲುಗಳ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

ಮೈಸೂರು ವಿಭಾಗದ ಯಡಕುಮಾರಿ–ಶ್ರೀವಾಗಿಲು ರೈಲು ನಿಲ್ದಾಣಗಳ ನಡುವಿನ ಹಳಿಯಲ್ಲಿ ಶನಿವಾರ ರಾತ್ರಿ ಸುಮಾರು 8.45ರ ವೇಳೆಗೆ ಭೂಕುಸಿತ ಸಂಭವಿಸಿದೆ. ಘಟನೆಯ ಪರಿಣಾಮ ಕರಾವಳಿ ಮತ್ತು ಬೆಂಗಳೂರು ಸಂಪರ್ಕಿಸುವ ಹಲವು ರೈಲುಗಳ ಸಂಚಾರಕ್ಕೆ ಅಡಚಣೆ ಉಂಟಾಗಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ರೈಲುಗಳ ಸಂಚಾರ ವ್ಯತ್ಯಯ:

ಆಗಸ್ಟ್​​ 01ರಂದು ಬೆಂಗಳೂರಿನಿಂದ ಹೊರಟಿದ್ದ ರೈಲು ಸಂಖ್ಯೆ 16585 SMVT ಬೆಂಗಳೂರು – ಮುರುಡೇಶ್ವರ ಎಕ್ಸ್‌ಪ್ರೆಸ್ ರೈಲಿನ ಪ್ರಯಾಣ ಹಾಸನದಲ್ಲಿ ಭಾಗಶಃ ರದ್ದಾಗಿದೆ.
ರೈಲು ಸಂಖ್ಯೆ 16511 KSR ಬೆಂಗಳೂರು – ಕೋಝಿಕ್ಕೋಡ್ ಎಕ್ಸ್‌ಪ್ರೆಸ್ ಪ್ರಯಾಣ ಕೂಡ ಹಾಸನದಲ್ಲಿ ಭಾಗಶಃ ರದ್ದಾಗಿದೆ.ನಿನ್ನೆ ವಿಜಯಪುರದಿಂದ ಆರಂಭವಾಗಿದ್ದ ರೈಲು ಸಂಖ್ಯೆ 17377 ವಿಜಯಪುರ – ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲಿನ ಪ್ರಯಾಣದಲ್ಲಿಯೂ ವ್ಯತ್ಯಯವಾಗಿದೆ.
ರೈಲು ಸಂಖ್ಯೆ 16595 ಕೆಎಸ್‌ಆರ್ ಬೆಂಗಳೂರು – ಕಾರವಾರ ಎಕ್ಸ್‌ಪ್ರೆಸ್ ರೈಲಿನ ಸಂಚಾರ ಸಕಲೇಶಪುರದಿಂದ ಕಾರವಾರ ನಡುವೆ ಭಾಗಶಃ ರದ್ದಾಗಿದೆ.
ರೈಲು ಸಂಖ್ಯೆ 16586 ಮುರುಡೇಶ್ವರ – SMVT ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನ ಸಂಚಾರ ಕೂಡ ಸುಬ್ರಹ್ಮಣ್ಯ ರಸ್ತೆ ಮತ್ತು SMVT ಬೆಂಗಳೂರಿನ ನಡುವೆ ಭಾಗಶಃ ರದ್ದಾಗಿದೆ.
ಆಗಸ್ಟ್​​ 01ರಂದು ಕೋಝಿಕ್ಕೋಡ್​​ನಿಂದ ಆರಂಭವಾದ ರೈಲು ಸಂಖ್ಯೆ 16512 ಕೋಝಿಕ್ಕೋಡ್ – ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ ಪ್ರಯಾಣವು ಬೆಂಗಳೂರು ನಿಲ್ದಾಣದ ಬದಲಿಗೆ ಕಬಕ ಪುತ್ತೂರಿನಲ್ಲಿ ಭಾಗಶಃ ರದ್ದಾಗಿದೆ.
ಮಂಗಳೂರು ಸೆಂಟ್ರಲ್ ನಿಂದ ಆರಂಭವಾದ ರೈಲು ಸಂಖ್ಯೆ 17378 ಮಂಗಳೂರು ಸೆಂಟ್ರಲ್ – ವಿಜಯಪುರ ಎಕ್ಸ್‌ಪ್ರೆಸ್ ಪ್ರಯಾಣವು ವಿಜಯಪುರ ನಿಲ್ದಾಣದ ಬದಲಿಗೆ ಸುಬ್ರಹ್ಮಣ್ಯ ರಸ್ತೆಯಲ್ಲಿ ಭಾಗಶಃ ರದ್ದಾಗಿದೆ.
ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್ – ಯಶವಂತಪುರ ಎಕ್ಸ್‌ಪ್ರೆಸ್ ಮತ್ತು ರೈಲು ಸಂಖ್ಯೆ 16575 ಯಶವಂತಪುರ – ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್​​ನ ಸಂಚಾರ ಕೂಡ ರದ್ದಾಗಿದೆ.

ನೈಋತ್ಯ ರೈಲ್ವೆ ಅಧಿಕಾರಿಗಳು ನಿರಂತರವಾಗಿ ಪರಿಸ್ಥಿತಿ ಮೇಲ್ವಿಚಾರಣೆ ಮಾಡುತ್ತಿದ್ದು, ಪ್ರಯಾಣಿಕರಿಗೆ ಅನಾನುಕೂಲತೆ ಉಂಟಾಗಿದ್ದಕ್ಕೆ ತೀವ್ರವಾಗಿ ವಿಷಾದಿಸುತ್ತೇವೆ ಎಂದು ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular