HomeKarnatakaRAIN ALERT: ಮುಂಗಾರು ಚುರುಕು: ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

RAIN ALERT: ಮುಂಗಾರು ಚುರುಕು: ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಮುಂದಿನ 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದ್ದು, ಭಾರತೀಯ ಹವಾಮಾನ ಇಲಾಖೆ ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.

ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಬಿರುಗಾಳಿ ಸಹಿತ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದ್ದು, ಜನರು ಮುಂಜಾಗೃತೆ ವಹಿಸುವಂತೆ ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಭಾಗಗಳಲ್ಲಿ ನದಿಗಳು ಉಕ್ಕಿ ಹರಿಯುವ ಮತ್ತು ಗುಡ್ಡ ಕುಸಿಯುವ ಭೀತಿಯಿರುವುದರಿಂದ ಸಾರ್ವಜನಿಕರು ಎಚ್ಚರವಹಿಸುವಂತೆ ಸೂಚಿಸಲಾಗಿದೆ.

ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿಯೂ ಮಳೆ ಅಬ್ಬರ ಜೋರಾಗಿರಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಭಾಗದಲ್ಲಿ ಗಂಟೆಗೆ 50 ರಿಂದ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಧಾರಾಕಾರ ಮಳೆಯಾಗಲಿದೆ.

ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಲಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ತಗ್ಗು ಪ್ರದೇಶಗಳ ನಿವಾಸಿಗಳು ಹಾಗೂ ಮಲೆನಾಡಿನ ಪ್ರಯಾಣಿಕರು ಗರಿಷ್ಠ ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ.

ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಗಂಟೆಗೆ 50 ರಿಂದ 60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಟ್ಟವಾದ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular