HomeKarnatakaಆ. 7, 8ರಂದು ಬೃಹತ್ ಉದ್ಯೋಗ ಮೇಳ: ಅಭ್ಯರ್ಥಿಗಳ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶ

ಆ. 7, 8ರಂದು ಬೃಹತ್ ಉದ್ಯೋಗ ಮೇಳ: ಅಭ್ಯರ್ಥಿಗಳ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶ

ಶಿವಮೊಗ್ಗ: ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 16 ನೇ ಆವೃತ್ತಿಯ `ಆಳ್ವಾಸ್ ಪ್ರಗತಿ’ ಬೃಹತ್ ಉದ್ಯೋಗ ಮೇಳವನ್ನು ಆ.7 ಮತ್ತು 8 ರಂದು ಆಳ್ವಾಸ್‌ನ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರತಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ತಿಳಿಸಿದರು.

ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2007 ರಲ್ಲಿ ಆರಂಭಗೊAಡ ಆಳ್ವಾಸ್ ಪ್ರಗತಿ ಇಂದಿ ದೇಶದ ಅತಿದೊಡ್ಡ ಉದ್ಯೋಗ ಮೇಳವಾಗಿ ಬೆಳೆದಿದೆ. ವಿವಿಧ ಕ್ಷೇತ್ರಗಳ ಪ್ರಮುಖ ಉದ್ಯೋಗದಾತ ಕಂಪನಿಗಳು ಮತ್ತು ಪ್ರತಿಭಾವಂತ ಉದ್ಯೋಗಾಕಾಂಕ್ಷಿಗಳನ್ನು ಒಂದೇ ವೇದಿಕೆಯಲ್ಲಿ ಸಂಪರ್ಕಿಸುವ ಯಶಸ್ವಿ ಉದ್ಯೋಗ ಮೇಳವಾಗಿದೆ ಎಂದರು.

ಈ ಉದ್ಯೋಗ ಮೇಳವು ಅಭ್ಯರ್ಥಿಗಳು ಹಾಗೂ ಉದ್ಯೋಗದಾತರಿಗೆ ಸಂಪೂರ್ಣ ಉಚಿತವಾಗಿರುತ್ತದೆ. ವಿಶೇಷವಾಗಿ ಗ್ರಾಮೀಣ ಭಾಗದ ಹಾಗೂ ಅವಕಾಶ ವಂಚಿತ ಪ್ರತಿಭಾವಂತ ಯುವಕರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಮೇಳವನ್ನು ಆಯೋಜಿಸಲಾಗಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಲ್ಲಿಯವರೆಗೆ ಆಳ್ವಾಸ್ ಆಯೋಜಿಸಿದ್ದ ಒಟ್ಟು 23 ಉದ್ಯೋಗ ಮೇಳಗಳ ಮೂಲಕ 40,848 ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ಉದ್ಯೋಗ ದೊರಕಿದೆ. 66, 432 ಅಭ್ಯರ್ಥಿಗಳಿಗೆ ವಿವಿಧ ಕಂಪನಿಗಳಲ್ಲಿ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ. ನೇಮಕಾತಿ ಪ್ರಕ್ರಿಯೆನ್ನು ಇನ್ನಷ್ಟು ಸುಗಮ, ಪಾರದರ್ಶಕ ಹಾಗೂ ಡಿಜಿಟಲ್ ರೂಪದಲ್ಲಿ ನಡೆಸುವ ಉದ್ದೇಶದಿಂದ ಎಲ್ಲಾ ಅಭ್ಯರ್ಥಿಗಳಿಗೆ ಆನ್‌ಲೈನ್ ನೊಂದಣಿ ಕಡ್ಡಾಯಗೊಳಿಸಲಾಗಿದೆ. ಅಭ್ಯರ್ಥಿಗಳು https://alvaspragati.com/candidate-registration ಮೂಲಕ ಉಚಿತವಾಗಿ ನೊಂದಯಿಸಿಕೊಳ್ಳಬಹುದು ಎಂದರು.

ಇದುವರೆಗೂ 342 ಕಂಪನಿಗಳು ತಮ್ಮ ಭಾವಹಿಸುವಿಕೆಯನ್ನು ಖಚಿತಪಡಿಸಿಕೊಂಡಿದ್ದು, ಈ ಬಾರಿ 350ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುವ ನಿರೀಕ್ಷೆ ಇದೆ. ಈ ವರ್ಷದ ಆಳ್ವಾಸ್ ಪ್ರಗತಿಯಲ್ಲಿ 24,298 ಕ್ಕೂ ಹೆಚ್ಚು ಉದ್ಯೋಗ ಅವಕಾಶಗಳು ಲಭ್ಯವಿದೆ. ಈ ಬಾರಿ ಉದ್ಯೋಗ ಮೇಳದಲ್ಲಿ ವಿಶೇಷ `ಎಐ’ ಆಧಾರಿತ ಚಾಟ್‌ಬಾಟ್ ವ್ಯವಸ್ಥೆ ಪರಿಚಯಿಸಲಾಗುತ್ತಿದೆ ಎಂದರು.

ಅಭ್ಯರ್ಥಿಗಳ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಗಳು ದೊರಯಲಿದೆ. ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಆ.6 ರಿಂದ ಉಚಿತ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಐಟಿಐ ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ ಒದಗಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ:9611750531, 9741440490, 9008907716, 7975223865ಗೆ ಸಂಪರ್ಕಿಸಬಹುದು ಎಂದರು.

ಸುದ್ದಿಗೋಷ್ಠಿಯಲ್ಲಿ ಆಳ್ವಾಸ್ ಪ್ರಗತಿಯ ಸಂಯೋಜಕ ಶ್ರೀನಿವಾಸ್ ಸಿ.ಎಸ್, ಶಿವಮೊಗ್ಗ ಜಿಲ್ಲಾ ಸಂಚಾಲಕ ಟಿ.ಡಿ.ಮೇಘರಾಜ್ ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular