HomeLive NewsBIG NEWS: ರಾಜಕೀಯಕ್ಕಿಂತ ರಾಜ್ಯದ ರೈತರ, ಜನರ ಹಿತ ಮುಖ್ಯ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್...

BIG NEWS: ರಾಜಕೀಯಕ್ಕಿಂತ ರಾಜ್ಯದ ರೈತರ, ಜನರ ಹಿತ ಮುಖ್ಯ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ವ ಪಕ್ಷಗಳ ಸಭೆ ಕರೆದಿದ್ದು, ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ಆರಂಭವಾಗಿದೆ.

ಸಭೆಯಲ್ಲಿ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಕಾವೇರಿ ವಿವಾದವನ್ನು ನಾವೆಲ್ಲ ಮೈಗೆ ಅಂಟಿಸಿಕೊಂಡೇ ಬೆಳೆದಿದ್ದೇವೆ. ರಾಜಕೀಯಕ್ಕಿಂತ ರಾಜ್ಯದ ರೈತರ,‌ ಜನರ ಹಿತ ಮುಖ್ಯ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕಾರಣವನ್ನು ಪಕ್ಕಕ್ಕಿಟ್ಟು ರಾಜ್ಯದ ಹಿತಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳೂ ಒಟ್ಟಿಗೇ ನಿಂತಿರುವ ಚರಿತ್ರೆ ನಮ್ಮ ರಾಜ್ಯಕ್ಕೆ ಇದೆ. ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು ಎನ್ನುವ ನಿಲುವು ನಮ್ಮದಾಗಿದೆ. ನಮ್ಮ ಈ ನಿಲುವಿಗೆ ತಾವೆಲ್ಲರೂ ಸಂಪೂರ್ಣ ಸಹಮತ ಹೊಂದಿದ್ದೀರಿ ಎನ್ನುವುದು ನನಗೆ ಗೊತ್ತಿದೆ ಎಂದರು.

ನಾನು CWRC, CWMA ಮೀಟಿಂಗ್​ಗೆ ಮೊದಲೇ ಕೇಂದ್ರ ಸಚಿವರಾದ ಸಿಆರ್​ ಪಾಟೀಲ್​, ಪ್ರಹ್ಲಾದ್ ಜೋಶಿ, ಸೋಮಣ್ಣ, ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿ ವಿಚಾರ ಮನವರಿಕೆ ಮಾಡಿಕೊಟ್ಟಿದ್ದೆ. ಅವರು ಕೂಡ ಕೇಂದ್ರದಲ್ಲಿ ರಾಜ್ಯದ ಪರ ಮಾತಾಡಿದ್ದಾರೆ. ಅವರಿಗೆ ಧನ್ಯವಾದಗಳನ್ನು ಹೇಳುತ್ತೇನೆ ಎಂದು ತಿಳಿಸಿದರು.

ದೆಹಲಿಯಲ್ಲಿ ನಡೆದ ಸಂಸತ್​ ಸದಸ್ಯರ ಸಭೆಯಲ್ಲಿ ಪಕ್ಷಬೇಧ ಮರೆತು ಎಲ್ಲರೂ ರಾಜ್ಯದ ಪರ ನಿಲ್ಲುವ ಮಾತು ಕೊಟ್ಟಿದ್ದಾರೆ. ಅವರಿಗೂ ಧನ್ಯವಾದ ಹೇಳುತ್ತೇನೆ ಎಂದರು. ಸದ್ಯಕ್ಕೆ ಕುಡಿಯುವ ನೀರಿಗಾಗುವಷ್ಟು ನೀರು ಸಂಗ್ರಹವಿದೆ. ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನೀರು ಸಂಗ್ರಹಿಸಿದ್ದೇವೆ. ಈಗ ಮಳೆ ಬರುತ್ತಿದೆ. ಆದರೆ ಮುಂದಿನ ದಿನಗಳಲ್ಲಿ ಮತ್ತೆ ಸಮಸ್ಯೆಯಾಗಬಹುದು. ಈ ನಿಟ್ಟಿನಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕಿದೆ ಎಂದರು.

ತಮಿಳುನಾಡು ಸಿಎಂ ವಿಜಯ್ ಮಾತುಕತೆಗೆ ಬರುವುದಾಗಿ ತಿಳಿಸಿದ್ದರು. ಆದರೆ ಕಾವೇರಿ ನದಿ ವಿಚಾರವಾಗಿ ಇಲ್ಲಿನ ಪರಿಸ್ಥಿತಿ ಸುಧಾರಿಸಿದ ಬಳಿಕ ಬರುವಂತೆ ಹೇಳಿದ್ದೇನೆ್ ಎಂದು ತಿಳಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಸರ್ವಪಕ್ಷ ಸಭೆಯಲ್ಲಿ ಬಿಜೆಪಿ, ಜೆಡಿಎಸ್ ನಾಯಕರು ಭಾಗಿಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಹೆಚ್​.ಡಿ. ಕುಮಾರಸ್ವಾಮಿ, ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ಸಚಿವರಾದ ರಾಮಲಿಂಗಾ ರೆಡ್ಡಿ, ಕೃಷ್ಣ ಭೈರೇಗೌಡ, ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್​, ನವದೆಹಲಿಯಲ್ಲಿ ಕರ್ನಾಟಕದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಸಂಸತ್​ ಸದಸ್ಯ ಗೋವಿಂದ ಕಾರಜೋಳ, ವಿರೋಧ ಪಕ್ಷದ ನಾಯಕ ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಹೆಚ್.ಕೆ. ಪಾಟೀಲ್, ಬಿ.ಕೆ. ಹರಿಪ್ರಸಾದ್, ನಿವೃತ್ತ ನ್ಯಾಯಾಧೀಶ ನಾಗಮೋಹನದಾಸ್, ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಮುಖ್ಯಮಂತ್ರಿಯವರ ವಿಶೇಷ ಸಲಹೆಗಾರ ಜಿ.ಸಿ. ಚಂದ್ರಶೇಖರ್, ಆರ್ಥಿಕ ಸಲಹೆಗಾರ ಎಲ್.ಕೆ. ಅತೀಕ್​, ಅಪರ ಮುಖ್ಯಕಾರ್ಯದರ್ಶಿ ತುಷಾರ್​ ಗಿರಿನಾಥ್​ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular