HomeKarnatakaಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ: ರೈತರು ಆತಂಕಪಡುವ ಅಗತ್ಯವಿಲ್ಲ: ಸಿಎಂ ಡಿ.ಕೆ.ಶಿವಕುಮಾರ್

ಕಾವೇರಿ ವಿಚಾರದಲ್ಲಿ ರೈತರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ: ರೈತರು ಆತಂಕಪಡುವ ಅಗತ್ಯವಿಲ್ಲ: ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಾವೇರಿ ನದಿ ನೀರು ವಿಚಾರದಲ್ಲಿ ರೈತರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸರ್ವಪಕ್ಷ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಸರ್ಕಾರ ಹಾಗೂ ನಾನು ರೈತರ ರಕ್ಷಣೆಗೆ ಬದ್ಧವಾಗಿದ್ದೇವೆ. ನಾನೂ ಕೂಡ ಒಬ್ಬ ರೈತನ ಮಗ. ಜನರ ಹಿತ ಕಾಯುತ್ತೇವೆ. ಏಳುವರೆ ಕೋಟಿ ಜನತೆಗೆ ಯಾವುದೇ ಅನುಮಾನಬೇಡ. ಯಾರಿಗೂ ಅನ್ಯಾಯವಾಗದಂತೆ ಆಡಳಿತ ನಡೆಸುತ್ತೇವೆ ಎಂದು ಹೇಳಿದರು.

ಕಾವೇರಿ ನದಿ ನೀರು ವಿಚಾರವಾಗಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಕಾನೂನು ತಜ್ಞರ ಜೊತೆ ನಡೆಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆರೆಗಳನ್ನು ತುಂಬಿಸಲು ನೀರು ಬಿಡುಗಡೆ ಮಾಡಿದ್ದೇವೆ. ಕುಡಿಯುವ ನೀರು ಸಂಗ್ರಹಕ್ಕೆ ನೀರು ಬಿಟ್ಟಿದ್ದೇವೆ. ಕೆ.ಆರ್ ಎಸ್ ಹಾಗೂ ಹೇಮಾವತಿ ಜಲಾಶಯಗಳಲ್ಲಿ ನೀರು ಕೊಂಚ ಸುಧಾರಣೆಯಾಗಿದೆ. ಹಾಗಾಗಿ ಕುಡಿಯುವ ನೀರಿಗಾಗಿ ಕೆರೆ ಕಟ್ಟೆಗಳಿಗೆ ನೀರು ಬಿಡಲಾಗಿದೆ ಎಂದರು.

ಸರ್ವಪಕ್ಷ ಸಭೆಯಲ್ಲಿ ಕಾವೇರಿ ನದಿ ನೀರು ವಿಚಾರವಾಗಿ ಮೇಕೆದಾಟು ಯೋಜನೆಯೊಂದೇ ಪರಿಹಾರ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಮೇಕೆದಾಟು ಯೋಜನೆಯಿಂದ ಕರ್ನಾಟಕ ಹಾಗೂ ತಮಿಳುನಾಡು ಎರಡೂ ರಾಜ್ಯಗಳಿಗೂ ಅನುಕೂಲವಾಗಲಿದೆ. ಹಾಗಾಗಿ ಈ ಯೋಜನೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ವಿಪಕ್ಷ ನಾಯಕರು ತಿಳಿಸಿದ್ದಾರೆ ಎಂದು ಹೇಳಿದರು.

ಇನ್ನು ಕಾವೇರಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಕರೆ ನೀಡಿವೆ. ಬಂದ್ ಮಾಡುವುದರಿಂದ ನಮಗೆ ಯಾವುದೇ ಪ್ರಯೋಜನವಾಗುವುದಿಲ್ಲ. ಇದರಿಂದ ಜನಸಾಮಾನ್ಯರಿಗೆ ಮತ್ತಷ್ಟು ತೊಂದರೆಯಾಗುತ್ತದೆ. ಹಾಗಾಗಿ ದಯವಿಟ್ಟು ಬಂದ್ ನಿರ್ಧಾರ ಕೈಬಿಡುವಂತೆ ಮನವಿ ಮಾಅಡುವುದಾಗಿ ಹೇಳಿದರು. ಈ ಬಗ್ಗೆ ಕನ್ನಡ ಪರ ಸಂಘಟನೆಗಳ ಮುಖಂಡರೊಂದಿಗೂ ಮಾತನಾಡುವುದಾಗಿ ಸಿಎಂ ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular