HomeKarnatakaBIG NEWS: ರಾಜ್ಯಾದ್ಯಂತ ಯಶಸ್ವಿಯಾಗಿ ನಡೆದ ಪೊಲೀಸ್ ನೇಮಕಾತಿ ಪರೀಕ್ಷೆ: ಒಎಂಆರ್ ಶೀಟ್ ಗೊಂದಲ ಬಗ್ಗೆ...

BIG NEWS: ರಾಜ್ಯಾದ್ಯಂತ ಯಶಸ್ವಿಯಾಗಿ ನಡೆದ ಪೊಲೀಸ್ ನೇಮಕಾತಿ ಪರೀಕ್ಷೆ: ಒಎಂಆರ್ ಶೀಟ್ ಗೊಂದಲ ಬಗ್ಗೆ ಕೆಇಎ ಸ್ಪಷ್ಟನೆ

ಬೆಂಗಳೂರು: ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯನ್ನು ಅತ್ಯಂತ ಯಶಸ್ವಿಯಾಗಿ ಇಂದು ರಾಜ್ಯದಾದ್ಯಂತ ನಡೆಸಲಾಯಿತು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಕೆಲವರು ಸಾಮಾಜಿಕ ಮಾಧ್ಯಮದಲ್ಲಿ ಒಎಂಆರ್ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಯ ಕ್ರಮ ಸಂಖ್ಯೆ ಹೊಂದಾಣಿಕೆ ಆಗುತ್ತಿಲ್ಲವೆಂದು ಗೊಂದಲ ಸೃಷ್ಟಿಸುವ ಕೆಲಸವನ್ನು ವಿಜಯಪುರದ ತಿಕೋಟಾ ಪರೀಕ್ಷಾ ಕೇಂದ್ರದಲ್ಲಿ ಮಾಡಿದ್ದಾರೆ.

ಇಷ್ಟಕ್ಕೂ ಕೆಇಎ ತನ್ನ ಪ್ರಕಟಣೆಯಲ್ಲಾಗಲಿ ಅಥವಾ ಅಧಿಸೂಚನೆಯಲ್ಲಾಗಲಿ ಒಎಂಆರ್ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಯ ಕ್ರಮ ಸಂಖ್ಯೆ ಒಂದೇ ಇರಬೇಕು(ಹೊಂದಾಣಿಕೆ ಆಗಬೇಕು) ಎಂದು ಎಲ್ಲೂ ಹೇಳಿಲ್ಲ. ಹೀಗಾಗಿ ಗೊಂದಲ ಏಕೆ?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ(KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು #KeaVikasana ಯೂಟ್ಯೂಬ್ ಚಾನಲ್ ಜತೆ ಮಾತನಾಡಿದ್ದಾರೆ. ಒಮ್ಮೆ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ನೋಡಿ.

ಸ್ಪಷ್ಟೀಕರಣ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿನ ಖಾಲಿರುವ ಮಿಕ್ಕುಳಿದ ವೃಂದ ಮತ್ತು ಸ್ಥಳೀಯ ವೃಂದದ ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಪ್ರಾಧಿಕಾರದ ವತಿಯಿಂದ ಅತ್ಯಂತ ಪಾರದರ್ಶಕವಾಗಿ ಲಿಖಿತ ಪರೀಕ್ಷೆಯನ್ನು 02-08-2026 ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಡೆಸಲಾಗಿದೆ.

ಕೆಲವು ಅಭ್ಯರ್ಥಿಗಳು ಪರೀಕ್ಷೆ ನಡೆಯುತ್ತಿದ್ದ ಸಮಯದಲ್ಲಿ ವಿತರಿಸಲಾಗಿದ್ದ ಓಎಂಆರ್ ಮತ್ತು ಪ್ರಶ್ನೆ ಪತ್ರಿಕೆಯ ಕ್ರಮಸಂಖ್ಯೆಗಳು ಒಂದೇ ಆಗಿಲ್ಲವೆಂದು ಗೊಂದಲ ಸೃಷ್ಟಿಸಿರುವುದು ಹಾಗೂ ಇದರ ಬಗ್ಗೆ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಕಳುಹಿಸಿ ಅಭ್ಯರ್ಥಿಗಳನ್ನು ತಪ್ಪುದಾರಿಗೆ ಎಳೆಯಲು ಪ್ರಯತ್ನಿಸಿರುವುದು ತಿಳಿದುಬಂದಿದೆ.

ಈ ವಿಚಾರದಲ್ಲಿ ಸ್ಪಷ್ಟಿಕರಣ ನೀಡುವುದೇನೆಂದರೆ, ಪ್ರಾಧಿಕಾರವು ಯಾವುದೇ ಪ್ರಕಟಣೆಯಲ್ಲಾಗಲೀ, ಸೂಚನೆಗಳಲ್ಲಾಗಲೀ ಅಥವಾ ಮಾಧ್ಯಮಗಳ ಮೂಲಕವಾಗಿ ಓಎಂಆರ್ ಮತ್ತು ಪ್ರಶ್ನೆಪತ್ರಿಕೆಯ ಕ್ರಮ ಸಂಖ್ಯೆ ಒಂದೇ ಇರುತ್ತದೆ ಅಥವಾ ಇರಬೇಕು ಎಂದು ಹೇಳಿರುವುದಿಲ್ಲ.

ಓಎಂಆರ್ ಉತ್ತರ ಪತ್ರಿಕೆಯಲ್ಲಿ ಪ್ರಶ್ನೆ ಪತ್ರಿಕೆ ಕ್ರಮ ಸಂಖ್ಯೆ ಮತ್ತು ಪ್ರಶ್ನೆ ಪತ್ರಿಕೆ ವರ್ಷನ್ ಕೋಡ್ ತುಂಬಲು ಅವಕಾಶ ಕಲ್ಪಿಸಲಾಗಿರುತ್ತದೆ. ಓಎಂಆರ್ ಮತ್ತು ಪ್ರಶ್ನೆಪತ್ರಿಕೆ ಕ್ರಮ ಸಂಖ್ಯೆ ಒಂದೇ ಇರಬೇಕೆಂದು ತಿಳಿಸಿದ್ದರೆ ಓಎಂಆರ್‌ನಲ್ಲಿ ಪ್ರಶ್ನೆಪತ್ರಿಕೆ ಕ್ರಮಸಂಖ್ಯೆ ಬರೆಯಲು ತಿಳಿಸುವ ಅಗತ್ಯವೇ ಇರಲಿಲ್ಲ.

ಆದ್ದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ಅನಗತ್ಯ ಸುಳ್ಳು ಸುದ್ದಿಗಳನ್ನು ಹರಡದಂತೆ ಕೋರಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular