ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್.ಬಿ.ಐ.) ಹಣಕಾಸು ನೀತಿ ಸಮಿತಿ ಸಭೆ ಸೋಮವಾರ ಆರಂಭವಾಗಲಿದೆ.
ಹಣಕಾಸು ನೀತಿ ಸಮಿತಿ ಪರಿಶೀಲನಾ ಸಭೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ರೆಪೊ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಹಣದುಬ್ಬರದ ಅಪಾಯ, ಕಚ್ಚಾ ತೈಲ ಬೆಲೆ ಏರಿಕೆ, ಭೌಗೋಳಿಕ ರಾಜಕೀಯ ಉದ್ವಿಗ್ನತೆ ಮತ್ತು ಮುಂಗಾರು ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಆರ್.ಬಿ.ಐ. ಸದ್ಯಕ್ಕೆ ಕಾದು ನೋಡುವ ಕ್ರಮ ಅನುಸರಿಸುವ ಸಾಧ್ಯತೆ ಇದೆ. ಆಗಸ್ಟ್ 3ರಿಂದ 5ರವರೆಗೆ ಆರ್.ಬಿ.ಐ. ಹಣಕಾಸು ನೀತಿ ಸಮಿತಿ ಸಭೆ ನಡೆಯಲಿದ್ದು, ರೆಪೊ ದರವನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಳ್ಳಬಹುದು ಎಂದು ಹೇಳಲಾಗಿದೆ.
ಕಳೆದ ವರ್ಷದಿಂದ ಆರ್.ಬಿ.ಐ. ಒಟ್ಟು ಶೇಕಡ 1.25 ರಷ್ಟು ರೆಪೊ ದರ ಇಳಿಕೆ ಮಾಡಿದೆ. ಈ ಬಾರಿ ಯಥಾಸ್ಥಿತಿ ಕಾಯ್ದುಕೊಳ್ಳಲಿದೆ ಎಂದು ತಜ್ಞರು ಅಂದಾಜಿಸಿದ್ದಾರೆ.

