HomeLatest Newsವೇದಿಕೆ ಏರಲು ನಿರಾಕರಿಸಿದ ಪೊಲಿಸ್ ಸಿಬ್ಬಂದಿ ಮೇಲೆ ಶಾಸಕರ ಮಗನ ಬೆಂಬಲಿಗರಿಂದ ಮಾರಣಾಂತಿಕ ಹಲ್ಲೆ

ವೇದಿಕೆ ಏರಲು ನಿರಾಕರಿಸಿದ ಪೊಲಿಸ್ ಸಿಬ್ಬಂದಿ ಮೇಲೆ ಶಾಸಕರ ಮಗನ ಬೆಂಬಲಿಗರಿಂದ ಮಾರಣಾಂತಿಕ ಹಲ್ಲೆ

ಶಿವಮೊಗ್ಗ: ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೇದಿಕೆ ಹಂಚಿಕೊಳ್ಳಲು ನಿರಾಕರಿಸಿದ ಕಾರಣಕ್ಕೆ ಪೊಲೀಸ್ ಸಿಬ್ಬಂದಿ ಶಾಸಕರ ಪುತ್ರನ ಕಡೆಯವರು ಮಾರಣಾಂತಿಕ ಹಲ್ಲೆ ನಡೆಸಿರುವ ಅಘಾತಕಾರು ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದ ಜನ್ನಾಪುರದಲ್ಲಿರುವ ಮಲ್ಲೇಶ್ವರ ಸಭಾಭವನದಲ್ಲಿ ಖ್ಯಾತ ಗಾಯಕಿ ಎಸ್. ಜಾನಕಿ ಅವರ ಸ್ಮರಣಾರ್ಥ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಪೊಲೀಸ್ ಸಿಬ್ಬಂದಿ ಉಮೇಶ್ ವೇದಿಕೆ ಏರಲು ನಿರಾಕರಿಸಿದ್ದಾರೆ. ಈ ವೇಳೆ ಪೊಲೀಸ್ ಸಿಬ್ಬಂದಿ ಉಮೇಶ್ ಹಾಗೂ ಅವರ ಸಹೋದರನ ಪುತ್ರ ಸುಹಾಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.

ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿ ಉಮೇಶ್ ಅವರು ಸಾರ್ವಜನಿಕರಿಗೆ ಅನ್ನದಾನ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಇದೇ ವೇಳೆ ಭದ್ರಾವತಿ ಶಾಸಕರ ಮಗ ಗಣೇಶ್ ಅವರು ಕೂಡ ವೇದಿಕೆಯಲ್ಲಿದ್ದರು. ಅನ್ನದಾನ ಮಾಡುತ್ತಿದ್ದ ಉಮೇಶ್ ಅವರನ್ನು ವೇದಿಕೆ ಮೇಲೆ ಬರುವಂತೆ ಆಯೋಜಕರು ಹಾಗೂ ಶಾಸಕರ ಮಗ ಗಣೇಶ್ ಆಹ್ವಾನ ನೀಡಿದ್ದರು. ಆದರೆ, ಈ ಆಹ್ವಾನವನ್ನು ಉಮೇಶ್ ಸಮ್ಮತಿಸಲಿಲ್ಲ. ಭ್ರಷ್ಟರ ಜೊತೆ ನಾನು ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಹೇಳಿ ಉಮೇಶ್ ವೇದಿಕೆ ಏರಲು ನೇರವಾಗಿ ನಿರಾಕರಿಸಿದರು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಮೇಶ್ ಅವರ ಈ ಹೇಳಿಕೆಯಿಂದ ಆಕ್ರೋಶಗೊಂಡ ಶಾಸಕ ಗಣೇಶ್ ಅವರ ಬೆಂಬಲಿಗರು ಮತ್ತು ಉಮೇಶ್ ನಡುವೆ ವಾಗ್ವಾದ ನಡೆದಿದೆ. ತೀವ್ರ ಮಾತಿನ ಚಕಮಕಿ ಆರಂಭವಾಗಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ಶಾಸಕರ ಬೆಂಬಲಿಗರು ಪೊಲೀಸ್ ಉಮೇಶ್ ಹಾಗೂ ಅವರ ಜೊತೆಯಲ್ಲಿದ್ದ ಸಹೋದರನ ಮಗ ಸುಹಾಸ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.

ಪ್ರಕರಣದ ಬೆನ್ನಲ್ಲೇ ಹಲ್ಲೆಗೊಳಗಾದ ಪೊಲೀಸ್ ಸಿಬ್ಬಂದಿ ಉಮೇಶ್ ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿಯ ಮೇಲೆಯೇ ನಡೆದ ಹಲ್ಲೆ ಪ್ರಕರಣಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular