HomeKarnatakaಕಾನ್ಸ್ಟೇಬಲ್ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಗೊಂದಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಸಿ.ಟಿ.ರವಿ ಆಗ್ರಹ

ಕಾನ್ಸ್ಟೇಬಲ್ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ಗೊಂದಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಸಿ.ಟಿ.ರವಿ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಭಾನುವಾರ ನಡೆದ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಉಂಟಾದ ಗೊಂದಲದ, ಅಭ್ಯರ್ಥಿಗಳಿಗೆ ತೊಂದರೆ ಹಿನ್ನೆಲೆಯಲ್ಲಿ ಬಿಜೆಪಿ ಪರಿಷತ್‌ ಸದಸ್ಯ ಸಿ.ಟಿ ರವಿ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಕಾನ್ಸ್ ಟೇಬಲ್ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ OMR ಶೀಟ್ ಗೊಂದಲ ಮತ್ತು ಅಸಮರ್ಥ ವ್ಯವಸ್ಥೆಯಿಂದ ಸಾವಿರಾರು ಅಭ್ಯರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದೆ ಎಂದು ಸಿ.ಟಿ.ರವಿ ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಭ್ಯರ್ಥಿಗಳು ನಡೆಸಿರುವ ಪ್ರತಿಭಟನೆ ರಾಜ್ಯ ಸರ್ಕಾರದ ವೈಫಲ್ಯಕ್ಕೆ ನೀಡಿರುವ ಇನ್ನೊಂದು ಸರ್ಟಿಫಿಕೇಟ್. ರಾಜ್ಯದ ಗೃಹ ಸಚಿವರು ಬೇರೆಯವರಿಗೆ ಸರ್ಟಿಫಿಕೇಟ್ ಕೊಡುತ್ತಾ, ತನ್ನ ಇಲಾಖೆಯ ಕೆಲಸವನ್ನು ಕಡೆಗಣಿಸಿದ್ದರಿಂದ ಇಂತಹ ಸ್ಥಿತಿ ಬಂದಿದೆ ಎಂದು ಟೀಕಿಸಿದ್ದಾರೆ.

ಗೊಂದಲ ಉಂಟಾದ ಪರೀಕ್ಷಾ ಕೇಂದ್ರಗಳ ಅಭ್ಯರ್ಥಿಗಳಿಗೆ ಯಾವುದೇ ವಿಳಂಬ ಮಾಡದೆ ಮರು ಪರೀಕ್ಷೆ ನಡೆಸಬೇಕು. ಜೊತೆಗೆ, ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ದೆಹಲಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಬೆಂಬಲ ನೀಡಿದ ಮುಖ್ಯಮಂತ್ರಿಗಳು ರಾಜ್ಯದ ಯುವಕರಿಗೆ ನ್ಯಾಯ ಒದಗಿಸಬೇಕು. ಈ ಗೊಂದಲಕ್ಕೆ ನೈತಿಕ ಹೊಣೆ ಹೊತ್ತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular