HomeLatest Newsಯಾವುದೇ ತಪ್ಪು ನಡೆದಿಲ್ಲ: ಪಿಸಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಹಾಗೂ ಒಎಂಆರ್ ಸಂಖ್ಯೆ ಹೊಂದಾಣಿಕೆ ಇಲ್ಲ ಎಂದು...

ಯಾವುದೇ ತಪ್ಪು ನಡೆದಿಲ್ಲ: ಪಿಸಿ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಹಾಗೂ ಒಎಂಆರ್ ಸಂಖ್ಯೆ ಹೊಂದಾಣಿಕೆ ಇಲ್ಲ ಎಂದು ಕಿಡಿಕಾರಿದ ಅಭ್ಯರ್ಥಿಗಳು ನಿಯಮ ಓದದೇ ನಾಲಿಗೆಹರಿಬಿಟ್ರಾ?

ಬೆಂಗಳೂರು- ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅತ್ಯಂತ ಪಾರದರ್ಶಕವಾಗಿ ನಡೆಸಿದ ಲಿಖಿತ ಪರೀಕ್ಷೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಾದ-ವಿವಾದಗಳಿಗೆ ಪ್ರಾಧಿಕಾರವು ಅಧಿಕೃತ ಸ್ಪಷ್ಟನೆ ನೀಡಿದೆ.

ಪರೀಕ್ಷೆಯ ಸಂದರ್ಭದಲ್ಲಿ ವಿತರಿಸಲಾದ ಓಎಂಆರ್ (OMR) ಮತ್ತು ಪ್ರಶ್ನೆ ಪತ್ರಿಕೆಯ ಕ್ರಮಸಂಖ್ಯೆಗಳು (Serial Numbers) ಒಂದೇ ಆಗಿಲ್ಲವೆಂದು ಕೆಲವರು ಸೃಷ್ಟಿಸಿರುವ ಗೊಂದಲವು ಸಂಪೂರ್ಣ ಸುಳ್ಳು ಮತ್ತು ಆಧಾರರಹಿತ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆಗಸ್ಟ್ 02, 2026 ರಂದು ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗೊಂದಲ ಮತ್ತು ಸುಳ್ಳು ಸುದ್ದಿಗಳ ಹಿನ್ನೆಲೆ

ಪರೀಕ್ಷೆ ನಡೆಯುತ್ತಿದ್ದ ವೇಳೆ ಓಎಂಆರ್ ಹಾಗೂ ಪ್ರಶ್ನೆಪತ್ರಿಕೆಯ ಕ್ರಮಸಂಖ್ಯೆಗಳು ಒಂದೇ ಆಗಿಲ್ಲವೆಂದು ಕೆಲವು ಅಭ್ಯರ್ಥಿಗಳು ಗೊಂದಲ ಸೃಷ್ಟಿಸಿದ್ದು, ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಅಭ್ಯರ್ಥಿಗಳನ್ನು ತಪ್ಪುದಾರಿಗೆಳೆಯುವ ಯತ್ನ ನಡೆದಿತ್ತು.

ಓಎಂಆರ್ ಮತ್ತು ಪ್ರಶ್ನೆಪತ್ರಿಕೆಯ ಕ್ರಮಸಂಖ್ಯೆಗಳು ಒಂದೇ ಇರಬೇಕು ಅಥವಾ ಇರುತ್ತವೆ ಎಂದು ಪ್ರಾಧಿಕಾರವು ತನ್ನ ಯಾವುದೇ ಅಧಿಕೃತ ಪ್ರಕಟಣೆ, ಸೂಚನೆ ಅಥವಾ ಮಾಧ್ಯಮಗಳಲ್ಲಿ ತಿಳಿಸಿರುವುದಿಲ್ಲ

ಓಎಂಆರ್ ಮತ್ತು ಪ್ರಶ್ನೆಪತ್ರಿಕೆ ಕ್ರಮಸಂಖ್ಯೆ: ನಿಯಮಗಳ ವಿವರಣೆ

​ಓಎಂಆರ್ ಉತ್ತರ ಪತ್ರಿಕೆಯಲ್ಲಿ ಅಭ್ಯರ್ಥಿಗಳು ತಮ್ಮ ಪ್ರಶ್ನೆಪತ್ರಿಕೆಯ ಕ್ರಮಸಂಖ್ಯೆ (Question Paper Serial Number) ಹಾಗೂ ವರ್ಷನ್ ಕೋಡ್ (Version Code) ಅನ್ನು ನಮೂದಿಸಲು ಪ್ರತ್ಯೇಕವಾಗಿ ಅವಕಾಶ ಕಲ್ಪಿಸಲಾಗಿರುತ್ತದೆ. ಒಂದು ವೇಳೆ ಓಎಂಆರ್ ಮತ್ತು ಪ್ರಶ್ನೆಪತ್ರಿಕೆಯ ಕ್ರಮಸಂಖ್ಯೆಗಳು ಕಡ್ಡಾಯವಾಗಿ ಒಂದೇ ಆಗಿರಬೇಕು ಎಂದಿದ್ದರೆ, ಓಎಂಆರ್ ಶೀಟ್‌ನಲ್ಲಿ ಪ್ರತ್ಯೇಕವಾಗಿ ಪ್ರಶ್ನೆಪತ್ರಿಕೆ ಕ್ರಮಸಂಖ್ಯೆಯನ್ನು ಬರೆಯಲು ಅವಕಾಶ ಅಥವಾ ಸೂಚನೆ ನೀಡುವ ಅಗತ್ಯವೇ ಇರುತ್ತಿರಲಿಲ್ಲ ಎಂದು ಪ್ರಾಧಿಕಾರವು ಸ್ಪಷ್ಟಪಡಿಸಿದೆ.

ಅಭ್ಯರ್ಥಿಗಳಿಗೆ ಎಚ್ಚರಿಕೆ

ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿಯ ಅನಗತ್ಯ ಮತ್ತು ಸುಳ್ಳು ಸುದ್ದಿಗಳನ್ನು ಹರಡಿ ಅಭ್ಯರ್ಥಿಗಳಲ್ಲಿ ಆತಂಕ ಮೂಡಿಸದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರು ಕಟ್ಟುನಿಟ್ಟಾಗಿ ಕೋರಿದ್ದಾರೆ. ಅಭ್ಯರ್ಥಿಗಳು ಯಾವುದೇ ವದಂತಿಗಳಿಗೆ ಕಿವಿಗೊಡದೆ ಅಧಿಕೃತ ಮಾಹಿತಿಗಾಗಿ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ ಅನ್ನು ಮಾತ್ರ ಅವಲಂಬಿಸುವಂತೆ ಸೂಚಿಸಲಾಗಿದೆ.

​

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular