HomeLatest Newsಜಂತರ್‌ ಮಂತರ್ ರೀತಿಯೇ ಜಾರ್ಖಂಡ್‌ನಲ್ಲಿ ಉಲ್ಬಣಗೊಂಡ ಉದ್ಯೋಗಾರ್ಥಿಗಳ ಆಕ್ರೋಶ; ವಿದ್ಯಾರ್ಥಿಗಳ ಬೇಡಿಕೆಗಳೇನು?

ಜಂತರ್‌ ಮಂತರ್ ರೀತಿಯೇ ಜಾರ್ಖಂಡ್‌ನಲ್ಲಿ ಉಲ್ಬಣಗೊಂಡ ಉದ್ಯೋಗಾರ್ಥಿಗಳ ಆಕ್ರೋಶ; ವಿದ್ಯಾರ್ಥಿಗಳ ಬೇಡಿಕೆಗಳೇನು?

ರಾಂಚಿ- ಜಾರ್ಖಂಡ್‌ನಲ್ಲಿ ಸ್ಪರ್ಧಾತ್ಮಕ ನೇಮಕಾತಿ ಪರೀಕ್ಷೆಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮಗಳು ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ತೀವ್ರ ಸ್ವರೂಪ ಪಡೆದುಕೊಂಡಿವೆ.

14ನೇ ಜಾರ್ಖಂಡ್ ಲೋಕಸೇವಾ ಆಯೋಗ (ಜೆಪಿಎಸ್‌ಸಿ) ಪ್ರಾಥಮಿಕ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ರಾಜ್ಯದ ವಿದ್ಯಾರ್ಥಿ ನಾಯಕ ದೇವೇಂದ್ರ ನಾಥ್ ಮಹಾತೋ ​​ಅವರು ರಾಂಚಿಯ ಜೈಪಾಲ್ ಸಿಂಗ್ ಮುಂಡಾ ಕ್ರೀಡಾಂಗಣದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.

14ನೇ ಜೆಪಿಎಸ್‌ಸಿ ಪ್ರಾಥಮಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿ ಒಂದು ತಿAi ಕಳೆದ Sೌದೆಯೂ, ಸರ್ಕಾರದ ಕಡೆಯಿಂದ ಸೂಕ್ತ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ನಾಯಕ ದೇವೇಂದ್ರ ನಾಥ್ ಮಹಾತೋ ​​ಆಹಾರತ್ಯಾಗ ಮಾಡಿ ಅನಿರ್ದಿಷ್ಟಾವಧಿ ಹೋರಾಟಕ್ಕೆ ಇಳಿದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿಭಟನಾಕಾರರ ಪ್ರಮುಖ ಆಗ್ರಹಗಳು

ಏಪ್ರಿಲ್ 19 ರಂದು ನಡೆದ 14ನೇ ಜೆಪಿಎಸ್‌ಸಿ ಪ್ರಾಥಮಿಕ (ಪಿಟಿ) ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು.ಜೆಪಿಎಸ್‌ಸಿ ಮತ್ತು ಜೆಎಸ್‌ಎಸ್‌ಸಿ (JSSC-CGL) ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಿಬಿಐ (CBI) ಮತ್ತು ಜಾರಿ ನಿರ್ದೇಶನಾಲಯದಿಂದ (ED) ಉನ್ನತ ಮಟ್ಟದ ತನಿಖೆ ನಡೆಸಬೇಕು.

ವಿವಾದಿತ ಹಾಗೂ ಕಪ್ಪುಪಟ್ಟಿಗೆ ಸೇರಿಸಲಾಗಿರುವ ಟಿಡಿಪಿಎಲ್ (TDPL) ಸಂಸ್ಥೆ ನಡೆಸುವ ಎಲ್ಲಾ ಪರೀಕ್ಷೆಗಳನ್ನು ಪರಿಶೀಲಿಸಿ ರದ್ದುಪಡಿಸಬೇಕು.ನೇಮಕಾತಿ ವ್ಯವಸ್ಥೆಯಲ್ಲಿ ಆಮ್ರಾಗ್ರ ಸುಧಾರಣೆಗಳನ್ನು ತಂದು, ಒಎಂಆರ್ (OMR) ಶೀಟ್‌ಗಳಲ್ಲಿ ಐದನೇ “ಪ್ರಯತ್ನಿಸಲಾಗಿಲ್ಲ” ಆಯ್ಕೆಯನ್ನು ಪರಿಚಯಿಸಬೇಕು.

ರಾಜಕೀಯ ಪಕ್ಷಗಳ ಬೆಂಬಲ

ವಿದ್ಯಾರ್ಥಿಗಳ ಈ ನ್ಯಾಯಯುತ ಹೋರಾಟಕ್ಕೆ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಸಂಘಟನೆಗಳು ಬೆಂಬಲ ಸೂಚಿಸಿವೆ. ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ಪ್ರತಿಭಟನಾ ನಿರತ ವಿದ್ಯಾರ್ಥಿಗಳೊಂದಿಗೆ ನೇರವಾಗಿ ಮಾತನಾಡಿದ್ದು, ಜಾರ್ಖಂಡ್‌ನ ಪ್ರತಿಯೊಬ್ಬ ವಿದ್ಯಾರ್ಥಿಯೊಂದಿಗೆ ಪಕ್ಷವು ದೃಢವಾಗಿ ನಿಲ್ಲಲಿದೆ ಎಂದು ಘೋಷಿಸಿದ್ದಾರೆ.

ಮತ್ತೊಂದೆಡೆ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಮರ್ ಕುಮಾರ್ ಬೌರಿ, ಪರೀಕ್ಷಾ ವ್ಯವಸ್ಥೆಯ ವೈಫಲ್ಯಕ್ಕೆ ನೇರ ಹೊಣೆ ಹೊತ್ತು ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಆಕ್ರೋಶದ ಹಿನ್ನೆಲೆ

ಜಾರ್ಖಂಡ್‌ನಲ್ಲಿ ಪದೇ ಪದೇ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗುತ್ತಿರುವುದು ಮತ್ತು ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಇಲ್ಲದಿರುವುದು ವಿದ್ಯಾರ್ಥಿಗಳ ಶ್ರಮವನ್ನು ವ್ಯರ್ಥ ಮಾಡುತ್ತಿದೆ ಎಂದು ಆಕಾಂಕ್ಷಿಗಳು ಆರೋಪಿಸಿದ್ದಾರೆ. “ಸರ್ಕಾರ ಮತ್ತು ಆಯೋಗದ ಮೌನ ಹಾಗೂ ನಿರ್ಲಕ್ಷ್ಯ ಧೋರಣೆ ವಿದ್ಯಾರ್ಥಿಗಳ ನೈತಿಕ ಸ್ಥೈರ್ಯವನ್ನು ಕುಗ್ಗಿಸುತ್ತಿದೆ. ಮುಖ್ಯಮಂತ್ರಿಗಳು ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವವರೆಗೂ ಈ ಹೋರಾಟವನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ” ಎಂದು ಮುಖಂಡ ಮಹಾತೋ ​​ಎಚ್ಚರಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular