HomeKarnatakaBREAKING : 'AICC' ಯಿಂದ 20 ನೂತನ ಸಚಿವರ ಪಟ್ಟಿ ಪ್ರಕಟ, ಇಂದು ಸಂಜೆ 4...

BREAKING : ‘AICC’ ಯಿಂದ 20 ನೂತನ ಸಚಿವರ ಪಟ್ಟಿ ಪ್ರಕಟ, ಇಂದು ಸಂಜೆ 4 ಗಂಟೆಗೆ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಕರ್ನಾಟಕ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಅನುಮೋದನೆ ನೀಡಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಸಾಮಾನ್ಯ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕಳುಹಿಸಿರುವ ಪತ್ರದಲ್ಲಿ, ಸಚಿವ ಸಂಪುಟಕ್ಕೆ 20 ಮಂದಿಯನ್ನು ಸೇರ್ಪಡೆಗೊಳಿಸುವ ಪ್ರಸ್ತಾವನೆಗೆ ಕಾಂಗ್ರೆಸ್ ಅಧ್ಯಕ್ಷರು ಒಪ್ಪಿಗೆ ನೀಡಿರುವುದಾಗಿ ತಿಳಿಸಿದ್ದಾರೆ.

ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿರುವವರ ಪಟ್ಟಿಯಲ್ಲಿ ಪಿ.ಎಂ. ನರೇಂದ್ರಸ್ವಾಮಿ, ಶಿವರಾಜ್ ತಂಗಡಗಿ, ರುದ್ರಪ್ಪ ಲಮಾಣಿ, ಕೆ.ಎಸ್. ಬಸವಂತಪ್ಪ, ಬಿ. ನಾಗೇಂದ್ರ, ಟಿ. ರಘುಮೂರ್ತಿ, ಬಿ.ಝೆಡ್. ಜಮೀರ್ ಅಹ್ಮದ್ ಖಾನ್, ರಿಜ್ವಾನ್ ಅರ್ಷದ್, ಸಂತೋಷ್ ಲಾಡ್, ಮಧು ಬಂಗಾರಪ್ಪ, ಪುತ್ತರಂಗಶೆಟ್ಟಿ, ಮಂಕಾಳ ವೈದ್ಯ, ಡಾ. ಅಜಯ್ ಸಿಂಗ್, ಎನ್. ಚಲುವರಾಯಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಎಚ್.ಸಿ. ಬಾಲಕೃಷ್ಣ, ಗಾಯತ್ರಿ ಶಾಂತೇಗೌಡ, ಬಸವರಾಜ ರಾಯರೆಡ್ಡಿ, ವಿಜಯಾನಂದ ಕಾಶಪ್ಪನವರ ಹಾಗೂ ಲಕ್ಷ್ಮಣ ಸವದಿ ಅವರ ಹೆಸರುಗಳಿವೆ.

ಇದೇ ಪತ್ರದಲ್ಲಿ ಕರ್ನಾಟಕ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಪ್ರಮುಖ ಹುದ್ದೆಗಳಿಗೂ ಕಾಂಗ್ರೆಸ್ ಅಧ್ಯಕ್ಷರು ಅನುಮೋದನೆ ನೀಡಿರುವುದಾಗಿ ತಿಳಿಸಲಾಗಿದೆ. ಅದರಂತೆ ಜಿ.ಎಸ್. ಪಾಟೀಲ್ ಅವರನ್ನು ವಿಧಾನಸಭೆಯ ಸಭಾಧ್ಯಕ್ಷರಾಗಿ, ಎ.ಎಸ್. ಪೊನ್ನಣ್ಣ ಅವರನ್ನು ಉಪಸಭಾಧ್ಯಕ್ಷರಾಗಿ, ಸಲೀಂ ಅಹ್ಮದ್ ಅವರನ್ನು ವಿಧಾನ ಪರಿಷತ್ತಿನ ಸಭಾಪತಿಯಾಗಿ ಹಾಗೂ ಉಮಾಶ್ರೀ ಅವರನ್ನು ವಿಧಾನ ಪರಿಷತ್ತಿನ ಉಪಸಭಾಪತಿಯಾಗಿ ನೇಮಕ ಮಾಡಲು ಒಪ್ಪಿಗೆ ನೀಡಲಾಗಿದೆ. ಆದರೆ ಕೊನೆಯ ಕ್ಷಣದಲ್ಲಿ ಮಂಕಾಳು ವೈದ್ಯರನ್ನು ಪಟ್ಟಿಯಿಂದ ತೆಗೆದು ಎಸ್ ಎಸ್ ಮಲ್ಲಿಕಾರ್ಜುನ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎನ್ನಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆ.ಸಿ. ವೇಣುಗೋಪಾಲ್ ಅವರು ಪತ್ರದ ಕೊನೆಯಲ್ಲಿ, ಈ ನಿರ್ಧಾರಗಳ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್‌ನ ಈ ಅಧಿಕೃತ ಅನುಮೋದನೆಯೊಂದಿಗೆ ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ವಿಧಾನಮಂಡಲದ ಪ್ರಮುಖ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ವೇಗ ಸಿಗುವ ನಿರೀಕ್ಷೆಯಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular