HomeKarnatakaಪಕ್ಷ ವಿರೋಧಿ ಚಟುವಟಿಕೆ ನಡೆಸಿದವರಿಗೆ ಸಚಿವ ಸ್ಥಾನ ಸಿಕ್ಕಿದೆ: ನಂಬಿಕೆ ದ್ರೋಹವಾಗಿದೆ, ನನಗೆ ನಿರಾಸೆಯಾಗಿದೆ: ಶಾಸಕ...

ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರಿಗೆ ಸಚಿವ ಸ್ಥಾನ ಸಿಕ್ಕಿದೆ: ನಂಬಿಕೆ ದ್ರೋಹವಾಗಿದೆ, ನನಗೆ ನಿರಾಸೆಯಾಗಿದೆ: ಶಾಸಕ ತನ್ವೀರ್ ಸೇಠ್ ಅಸಮಾಧಾನ

ಮೈಸೂರು: ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಶಾಸಕ ತನ್ವೀರ್ ಸೇಠ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನನಗೆ ನಂಬಿಕೆ ದ್ರೋಹ ಮಾಡಿದ್ದಾರೆ. ನಿರಾಸೆಯಾಗಿದೆ. 6 ಬಾರಿ ಶಾಸಕಾಗಿ ಆಯ್ಕೆಯಾಗಿದ್ದಾನೆ ಹಿರಿತನವನ್ನೂ ಪರಿಗಣಿಸದೇ ಸಚಿವ ಸ್ಥಾನ ವಂಚಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ತನ್ವೀರ್ ಸೇಠ್, ಈ ಹಿಂದೆ ನಿಮ್ಮ ಮೈಸೂರು ಜಿಲ್ಲೆಯವರೇ ಆದ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿರುವುದರಿಂದ ಮತ್ತೆ ನಿಮ್ಮ ಜಿಲ್ಲೆಗೆ, ನಿಮಗೆ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ. ಮುಂದಿನ ಬಾರಿ ಸಚಿವ ಸ್ಥಾನ ಖಚಿತ ಎಂದು ವರೆಗೆ ನಂಬಿಸಿದ್ದರು. ಆದರೆ ಈಗ ನಮ್ಮ ಜಿಲ್ಲೆಯವರು ಮುಖ್ಯಮಂತ್ರಿಯಾಗಿಲ್ಲ. ಹಾಗಾಗಿ ನನಗೆ ಸಚಿವ ಸ್ಥಾನ ಕೊಡಬೇಕಿತ್ತು. ಆದರೆ ಸಚಿವ ಸ್ಥಾನ ನೀಡಿಲ್ಲ. ಇದು ನಂಬಿಕೆ ದ್ರೋಹದ ಕೆಲಸ ಎಂದು ಅಳಲು ತೋಡಿಕೊಂಡರು.

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದವರಿಗೆ ಸಚಿವ ಸ್ಥಾನ ನೀಡಲಾಗಿದೆ. ಹಿಂದೆ ರಾಹುಲ್ ಗಾಂಧಿ ವಿರುದ್ಧ ಮಾತನಾಡಿದರು ಎಂದು ಕೆ.ಎನ್.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ತೆಗೆದರು. ಆದರೆ ನಾನು ಯಾರ ವಿರುದ್ಧವೂ ಮಾತನಾಡಿಲ್ಲ. ಪಕ್ಷಕ್ಕೆ ನಿಷ್ಠನಾಗಿ ಕೆಲಸ ಮಾಡಿದ್ದೇನೆ. ನಿರಂತರವಾಗಿ ಆರು ಬಾರಿ ಶಾಕನಾಗಿ ಆಯ್ಕೆಯಾಗಿದ್ದೇನೆ. ಆದಾಗ್ಯೂ ಸಚಿವ ಸ್ಥಾನ ನೀಡದಿರುವುದು ನೋವುಂಟುಮಾಡಿದೆ. ನೂತನ ಸಚಿವರನ್ನು ಯಾವ ಮಾನದಂದದ ಮೇಲೆ ಆಯ್ಕೆ ಮಾಡಿದ್ದಾರೆ? ಎಂಬುದನ್ನು ಸ್ಪಷ್ಟಪಡಿಸಲಿ. ಈ ವಗ್ಗೆ ಹೈಕಮಾಂಡ್ ನಾಯಕರ ಜೊತೆ ಮಾತನಾಡುತ್ತೇನೆ. ಕಾರ್ಯಕರ್ತರ ಜೊತೆಯೂ ಚರ್ಚಿಸುತ್ತೇನೆ. ಮುಂದಿನ ನಡೆ ಬಗ್ಗೆ ಕಾರ್ಯಕರ್ತರು, ಬೆಂಬಲಿಗರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular