HomeKarnatakaBREAKING NEWS : ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ರಾಜೀನಾಮೆ ಸಲ್ಲಿಕೆ

BREAKING NEWS : ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ರಾಜೀನಾಮೆ ಸಲ್ಲಿಕೆ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ವಿಜಯಪುರ ಜಿಲ್ಲೆಯ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ತಮ್ಮ ರಾಜೀನಾಮೆ ಪತ್ರವನ್ನು ಅವರು ಕರ್ನಾಟಕ ವಿಧಾನಸಭೆ ಸ್ಪೀಕರ್ ರುದ್ರಪ್ಪ ಲಮಾಣಿ ಅವರಿಗೆ ಸಲ್ಲಿಸಿದ್ದಾರೆ. ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಯಶವಂತರಾಯಗೌಡ ಅವರು ರಾಜೀನಾಮೆ ನೀಡುವುದಾಗಿ ಈ ಹಿಂದೆ ಘೋಷಿಸಿದ್ದರು. ಅದರಂತೆ ಇದೀಗ ಶಾಸಕ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯಲ್ಲಿ ತಮ್ಮನ್ನು ಕಡೆಗಣಿಸಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ್ದ ಅವರು, “ಹಿರಿತನಕ್ಕೂ ಗೌರವ ಇಲ್ಲ. ನಿಷ್ಠಾವಂತರು ಹಾಗೂ ಪ್ರಾಮಾಣಿಕರಿಗೆ ಇಲ್ಲಿ ಬೆಲೆ ಇಲ್ಲ. ಈ ವ್ಯವಸ್ಥೆಯಲ್ಲಿ ಮುಂದುವರಿಯಲು ಇಷ್ಟವಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಶವಂತರಾಯಗೌಡ ಅವರ ರಾಜೀನಾಮೆಯಿಂದ ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಸಚಿವ ಸ್ಥಾನ ಕೈತಪ್ಪಿದ ಇತರೆ ಅಸಮಾಧಾನಿತ ಶಾಸಕರ ಮುಂದಿನ ನಡೆ ಏನಾಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ.

ರಾಜೀನಾಮೆಗೂ ಮುನ್ನ ಯಶವಂತರಾಯಗೌಡ ಹೇಳಿದ್ದೇನು..?

“ಸಚಿವ ಸ್ಥಾನ ಸಿಗಲಿದೆ ಎಂದು ನಿನ್ನೆ ಕರೆ ಮಾಡಿ ಸಿದ್ಧರಿರಲು ತಿಳಿಸಿದ್ದರು. ಆದರೆ ಇಂದು ಕೊನೆಯ ಕ್ಷಣದಲ್ಲಿ ಅನ್ಯಾಯ ಮಾಡಿದ್ದಾರೆ. ಈ ರೀತಿಯ ವ್ಯವಸ್ಥೆಯಲ್ಲಿ ಇರಲು ನನಗೆ ಇಷ್ಟವಿಲ್ಲ. ಮನಸ್ಸಿಗೆ ತುಂಬಾ ನೋವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು. “ಹಿರಿತನಕ್ಕೂ ಗೌರವವಿಲ್ಲದಿದ್ದರೆ ರಾಜಕಾರಣದಲ್ಲಿ ಇರುವುದಕ್ಕೆ ಅರ್ಥವೇನು? ಶಾಸಕ ಸ್ಥಾನ ಯಾಕೆ ಬೇಕು? ರಾಜೀನಾಮೆ ಪತ್ರ ಸಿದ್ಧವಾಗಿದೆ. ಇಂದೇ ಸ್ಪೀಕರ್ಗೆ ರಾಜೀನಾಮೆ ಸಲ್ಲಿಸುತ್ತೇನೆ” ಎಂದು ತಿಳಿಸಿದ್ದಾರೆ.ಸಚಿವ ಸಂಪುಟ ವಿಸ್ತರಣೆಯಲ್ಲಿ ಹಲವು ಸಚಿವಾಕಾಂಕ್ಷಿಗಳಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ನಲ್ಲಿ ಅಸಮಾಧಾನದ ಹೊಗೆ ಎದ್ದಿದ್ದು, ಯಶವಂತರಾಯಗೌಡ ಅವರ ರಾಜೀನಾಮೆ ಘೋಷಣೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular