HomeKarnatakaಕಂಟೇನರ್ ಹಾಗೂ ವೋಲ್ವೋ ಬಸ್ ನಡುವೆ ಭೀಕರ ಅಪಘಾತ: ಟೆಕ್ಕಿ ಯುವತಿ ಸ್ಥಳದಲ್ಲೇ ಸಾವು

ಕಂಟೇನರ್ ಹಾಗೂ ವೋಲ್ವೋ ಬಸ್ ನಡುವೆ ಭೀಕರ ಅಪಘಾತ: ಟೆಕ್ಕಿ ಯುವತಿ ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಕಂಟೇನರ್ ಹಾಗೂ ವೋಲ್ವೋ ಬಸ್ ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಟೆಕ್ಕಿ ಯುವತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44ರ ಅಗಲಗುರ್ಕಿ ಬಳಿ ನಡೆದಿದೆ.

ಹೈದರಾಬಾದ್‌ನಿಂದ ಬೆಂಗಳೂರಿನತ್ತ ಬರುತ್ತಿದ್ದ ಖಾಸಗಿ ವೋಲ್ವೋ ಬಸ್, ಕಂಟೇನರ್‌ ವಾಅಹನಕ್ಕೆ ಹಿಂಭಾಗದಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನ ಪಕ್ಕದ ಬಾಗಿಲಿನ ಬಳಿ ಕುಳಿತಿದ್ದ ಯುವತಿ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅನಂತಪುರ ಜಿಲ್ಲೆಯ ಚಿಲ್ಲಮತ್ತೂರು ಮೂಲದ 28 ವರ್ಷದ ಕೌಸರ್ ತಾಜ್ ಮೃತ ಯುವತಿ. ಅಪಘಾತದ ತೀವ್ರತೆಗೆ ಮೃತದೇಹ ಬಸ್‌ನ ಕಬ್ಬಿಣದ ಅವಶೇಷಗಳ ನಡುವೆ ಸಿಲುಕಿಕೊಂಡಿದ್ದರಿಂದ, ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಕ್ರೇನ್ ಸಹಾಯದಿಂದ ಬಸ್‌ನ ಮುಂಭಾಗವನ್ನು ತೆರವುಗೊಳಿಸಿ ಮೃತದೇಹವನ್ನು ಹೊರತೆಗೆದಿದ್ದಾರೆ.

ಶವವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಯಿತು. ಮೃತ ಯುವತಿ ಕೊಡಿಕೊಂಡ ಚೆಕ್‌ಪೋಸ್ಟ್ ಬಳಿ ಬಸ್ ಹತ್ತಿದ್ದು, ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಬಸ್ಸಿನಲ್ಲಿ ಸುಮಾರು 40 ಮಂದಿ ಪ್ರಯಾಣಿಕರಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ಪರಿಣಾಮ ಕೆಲಕಾಲ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular