HomeLatest Newsವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಟಿ.ಬಿ. ಜಯಚಂದ್ರ ನೇಮಕ

ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಟಿ.ಬಿ. ಜಯಚಂದ್ರ ನೇಮಕ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರನ್ನು ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರಾಗಿ (ಪ್ರೊ-ಟೆಮ್ ಸ್ಪೀಕರ್) ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ನೇಮಕ ಮಾಡಿದ್ದಾರೆ. ಈ ಸಂಬಂಧ ಅಧಿಕೃತ ಆದೇಶ ಹೊರಡಿಸಲಾಗಿದ

ಭಾರತ ಸಂವಿಧಾನದ ಅನುಚ್ಛೇದ 180(1)ರ ಅಡಿಯಲ್ಲಿ ರಾಜ್ಯಪಾಲರಿಗೆ ಇರುವ ಅಧಿಕಾರವನ್ನು ಚಲಾಯಿಸಿ ಈ ನೇಮಕ ಮಾಡಲಾಗಿದೆ. ವಿಧಾನಸಭೆಯ ನೂತನ ಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಟಿ.ಬಿ. ಜಯಚಂದ್ರ ಅವರು ಹಂಗಾಮಿ ಸಭಾಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಈ ಅವಧಿಯಲ್ಲಿ ನೂತನ ಸದಸ್ಯರಿಗೆ ಪ್ರಮಾಣವಚನ ಬೋಧನೆ, ಸಭಾಧ್ಯಕ್ಷರ ಚುನಾವಣೆಯ ಪ್ರಕ್ರಿಯೆ ನಡೆಸುವುದು ಸೇರಿದಂತೆ ಸಭಾಧ್ಯಕ್ಷರ ಅಧಿಕಾರ ವ್ಯಾಪ್ತಿಯ ಅಗತ್ಯ ಸಂಸದೀಯ ಕಾರ್ಯಗಳನ್ನು ಅವರು ನಿರ್ವಹಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಜಿ. ಶ್ರೀಧರ್ ಅವರು ವಿಶೇಷ ರಾಜ್ಯಪತ್ರ (ಗೆಜೆಟ್) ಮೂಲಕ ಪ್ರಕಟಿಸಿದ್ದಾರೆ.

ವಿಧಾನಸಭೆಯಲ್ಲಿ ಶೀಘ್ರದಲ್ಲೇ ನೂತನ ಸಭಾಧ್ಯಕ್ಷರ ಆಯ್ಕೆ ನಡೆಯಲಿದ್ದು, ಅಲ್ಲಿಯವರೆಗೆ ಸದನದ ಕಾರ್ಯಚಟುವಟಿಕೆಗಳನ್ನು ಸುಗಮವಾಗಿ ನಡೆಸುವ ಹೊಣೆಗಾರಿಕೆಯನ್ನು ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರು ವಹಿಸಿಕೊಳ್ಳಲಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular