HomeKarnataka4ನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶಿವರಾಜ ತಂಗಡಗಿ

4ನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಶಿವರಾಜ ತಂಗಡಗಿ

ಕನಕಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಜ್ ಎಸ್. ತಂಗಡಗಿ ಅವರು ಆಗಸ್ಟ್ 3ರಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೂತನ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವ ಮೂಲಕ 4ನೇ ಬಾರಿಗೆ ಸಚಿವರಾಗಿದ್ದಾರೆ.

ಬೆಂಗಳೂರಿನ ಲೋಕಭವನ ಆವರಣದಲ್ಲಿನ ಗಾಜಿನಮನೆಯಲ್ಲಿ ಆಗಸ್ಟ್ 3ರಂದು ಸಂಜೆ ನಡೆದ ಸಚಿವರ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಶಾಸಕರಿಗೆ ಪ್ರಮಾಣ ವಚನ ಬೋಧಿಸಿದರು.

ಶಿವರಾಜ ತಂಗಡಗಿ ಅವರು ಈ ಹಿಂದೆ 2008, 2013 ಮತ್ತು 2023ರಲ್ಲಿ ಸಚಿವರಾಗಿದ್ದ ವೇಳೆಯಲ್ಲಿ ಕೃಷಿ ಮಾರುಕಟ್ಟೆ ಇಲಾಖೆ, ಸಣ್ಣ ನೀರಾವರಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿನ್ನೆಲೆ: 10-06-1971ರಲ್ಲಿ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನಲ್ಲಿ ಜನಿಸಿರುವ ಶಿವರಾಜ ತಂಗಡಗಿ ಅವರು ಪ್ರಾಥಮಿಕ, ಪ್ರೌಢ ಹಾಗೂ ಪಿಯು ಮತ್ತು ಪದವಿ ಶಿಕ್ಷಣವನ್ನು ಇಳಕಲ್‌ನಲ್ಲಿ ಪೂರೈಸಿದ್ದಾರೆ. ಕಾಲೇಜು ದಿನಗಳಲ್ಲೇ ನಾಯಕತ್ವ ಗುಣಗಳನ್ನು ಹೊಂದಿ 25ನೇ ವಯಸ್ಸಿಗೆ ರಾಜಕೀಯ ಪ್ರವೇಶ ಮಾಡಿದರು. ಜನನಾಯಕರಾಗಿ ಮೊದಲಿಗೆ ಇಳಕಲ್ ಪುರಸಭೆಗೆ ಅವಿರೋಧವಾಗಿ ಆಯ್ಕೆಯಾದರು. ಮುಂದೆ ಕನಕಗಿರಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಗೆಲುವಿನ ನಗೆ ಬೀರಿದರು. ಅದೇ ವೇಳೆ ಕ್ಯಾಬಿನೆಟ್ ಸಚಿವರಾದರು. ಮುಂದೆ 2013ರಲ್ಲಿ ಹಾಗೂ 2023ರಲ್ಲಿ ಸಹ ವಿಧಾನಸಭೆ ಪ್ರವೇಶಿಸಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular