HomeKarnatakaಪ್ರಯಾಣಿಕರ ಗಮನಕ್ಕೆ: ಮಣ್ಣು ತೆರವು ಕಾರ್ಯಾಚರಣೆ ಪೂರ್ಣ: ರೈಲು ಸಂಚಾರ ಪುನರಾರಂಭ

ಪ್ರಯಾಣಿಕರ ಗಮನಕ್ಕೆ: ಮಣ್ಣು ತೆರವು ಕಾರ್ಯಾಚರಣೆ ಪೂರ್ಣ: ರೈಲು ಸಂಚಾರ ಪುನರಾರಂಭ

ಹಾಸನ: ಭಾರಿ ಮಳೆ ಅವಾಂತರದಿಂದಾಗಿ ರೈಲು ಹಳಿಗಳ ಮೇಲೆ ಗುಡ್ಡ ಕುಸಿತವಾಗಿ ರಾಜ್ಯದ ವಿವಿಧ ಭಾಗಗಳಲ್ಲಿ ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. ಮಣ್ಣು ತೆರವು ಗೊಳಿಸಿದ ಬೆನ್ನಲ್ಲೇ ಕೆಲವೆಡೆ ರೈಲು ಸಂಚಾರ ಪುಅನರಾರಂಭಗೊಂಡಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಎಡಕುಮಾರಿ ಹಾಗೂ ಶಿರವಾಗಿಲು ನಡುವೆ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ರೈಲ್ವೆ ಹಳಿ ಮೇಲೆ ಸಂಭವಿಸಿದ್ದ ಭೀಕರ ಗುಡ್ಡ ಕುಸಿತಕ್ಕೆ ಸಂಬಂಧಿಸಿದಂತೆ, ರೈಲ್ವೆ ಇಲಾಖೆ ಯಶಸ್ವಿಯಾಗಿ ಮಣ್ಣು ತೆರವುಗೊಳಿಸಿದ್ದು ಈ ಮಾರ್ಗದಲ್ಲಿ ರೈಲು ಸಂಚಾರವನ್ನು ಪುನರಾರಂಭಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶನಿವಾರ ರಾತ್ರಿ ಭಾರೀ ಮಳೆಯಿಂದಾಗಿ ಬೆಟ್ಟದ ಮಣ್ಣು ಮತ್ತು ಬಂಡೆಕಲ್ಲುಗಳು ರೈಲ್ವೆ ಹಳಿಯ ಮೇಲೆ ಕುಸಿದುಬಿದ್ದಿದ್ದವು. ಇದರಿಂದಾಗಿ ಬೆಂಗಳೂರಿನಿಂದ ಕರಾವಳಿ ಮತ್ತು ಕೇರಳ ಭಾಗವನ್ನು ಸಂಪರ್ಕಿಸುವ ಪ್ರಮುಖ ರೈಲುಗಳ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು.

ತಕ್ಷಣ ಕಾರ್ಯಪ್ರವೃತ್ತರಾದ ರೈಲ್ವೆ ಇಲಾಖೆಯ ತಾಂತ್ರಿಕ ತಂಡ ಮತ್ತು ಕಾರ್ಮಿಕರು, ಪ್ರತಿಕೂಲ ವಾತಾವರಣದ ನಡುವೆಯೂ ಸತತ ಮೂರು ದಿನಗಳ ಕಾಲ ಹಗಲಿರುಳು ಮಣ್ಣು ತೆರವು ಕಾರ್ಯಾಚರಣೆ ನಡೆಸಿದರು. ಪ್ರಸ್ತುತ ಹಳಿಯ ಮೇಲಿದ್ದ ರಾಶಿಗಟ್ಟಲೆ ಮಣ್ಣನ್ನು ಸಂಪೂರ್ಣವಾಗಿ ತೆರವುಗೊಳಿಸಿ, ಮಾರ್ಗವನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular