HomeLatest Newsಅಸ್ಸಾಂನಲ್ಲಿ ಮುಂದುವರಿದ ಪ್ರವಾಹ ಭೀಕರತೆ: ಮೃತರ ಸಂಖ್ಯೆ 87ಕ್ಕೆ ಏರಿಕೆ!

ಅಸ್ಸಾಂನಲ್ಲಿ ಮುಂದುವರಿದ ಪ್ರವಾಹ ಭೀಕರತೆ: ಮೃತರ ಸಂಖ್ಯೆ 87ಕ್ಕೆ ಏರಿಕೆ!

ಗುವಾಹತಿ- ಅಸ್ಸಾಂ ರಾಜ್ಯದಲ್ಲಿ ಮಳೆ ಹಾಗೂ ಪ್ರವಾಹದ ಅಬ್ಬರ ಮುಂದುವರಿದಿದ್ದು, ಪರಿಸ್ಥಿತಿ ತೀವ್ರ ಆತಂಕಕಾರಿಯಾಗಿದೆ. ನಿರಂತರ ಮಳೆ ಹಾಗೂ ಪ್ರವಾಹ ಸಂಬಂಧಿತ ಅವಘಡಗಳಿಂದ ಮೃತಪಟ್ಟವರ ಅಧಿಕೃತ ಸಂಖ್ಯೆ 87ಕ್ಕೆ ತಲುಪಿದೆ. ರಾಜ್ಯದ ಏಳು ಪ್ರಮುಖ ಜಿಲ್ಲೆಗಳಲ್ಲಿ 1.28 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೀಡಾಗಿದ್ದಾರೆ.

ತೀವ್ರ ಹಾನಿಗೀಡಾದ ಜಿಲ್ಲೆಗಳು ಮತ್ತು ನಷ್ಟದ ವಿವರ

ಶಿವಸಾಗರ್, ಚರೈಡಿಯೋ, ಧೇಮಾಜಿ, ಗೋಲಾಘಾಟ್, ಬಿಸ್ವನಾಥ್, ಜೋರ್ಹತ್ ಹಾಗೂ ಲಖಿಂಪುರ ಜಿಲ್ಲೆಗಳು ಪ್ರವಾಹದಿಂದ ತೀವ್ರವಾಗಿ ಹಾನಿಗೀಡಾಗಿವೆ.

ಪ್ರವಾಹದಿಂದ ಒಟ್ಟು 87 ಮೃತಪಟ್ಟಿದ್ದು, 1.28 ಲಕ್ಷಕ್ಕೂ ಹೆಚ್ಚು ಜನರಿಗೆ ತೊಂದರೆಯಾಗಿದೆ. ಶಿವಸಾಗರ್ ಜಿಲ್ಲೆಯಲ್ಲಿ ಅತ್ಯಧಿಕವಾಗಿ 55,200 ಜನರು ಸಂಕಷ್ಟದಲ್ಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುಮಾರು 380 ಗ್ರಾಮಗಳು ಜಲಾವೃತವಾಗಿದ್ದು, 14,230 ಹೆಕ್ಟೇರ್‌ಗಿಂತಲೂ ಹೆಚ್ಚಿನ ಕೃಷಿ ಭೂಮಿ ನೀರಿನಲ್ಲಿ ಮುಳುಗಿರುವುದರಿಂದ ರೈತರು ತೀವ್ರ ನಷ್ಟ ಅನುಭವಿಸಿದ್ದಾರೆ.

ಗೋಲಾಘಾಟ್ ಜಿಲ್ಲೆಯ ನುಮಲಿಗಢ ಪ್ರದೇಶದಲ್ಲಿ ಧನ್ಸಿರಿ ನದಿಯು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದ್ದು, ತಗ್ಗು ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ.

ಪರಿಹಾರ ಕಾರ್ಯಾಚರಣೆ ಮತ್ತು ಸರ್ಕಾರದ ನೆರವು

ಸಂತ್ರಸ್ತರಿಗೆ ನೆರವು ಒದಗಿಸಲು ರಾಜ್ಯ ಸರ್ಕಾರ ಯುದ್ಧೋಪಾದಿಯಲ್ಲಿ ಪರಿಹಾರ ಕಾರ್ಯಾಚರಣೆ ನಡೆಸುತ್ತಿದೆ. ಒಟ್ಟು 38 ಪರಿಹಾರ ಶಿಬಿರಗಳು ಹಾಗೂ 17 ಹೆಚ್ಚುವರಿ ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 11,066ಕ್ಕೂ ಅಧಿಕ ಜನರಿಗೆ ಆಶ್ರಯ, ಆಹಾರ ಮತ್ತು ವೈದ್ಯಕೀಯ ಸೌಲಭ್ಯ ಕಲ್ಪಿಸಲಾಗಿದೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಪ್ರವಾಹ ಪೀಡಿತ ಪ್ರತಿ ಕುಟುಂಬಕ್ಕೆ ರೂ. 15,000 ಮಧ್ಯಂತರ ಆರ್ಥಿಕ ಪರಿಹಾರವನ್ನು ನೇರ ಲಾಭ ವರ್ಗಾವಣೆ (DBT) ಮೂಲಕ ಬಿಡುಗಡೆ ಮಾಡಿದ್ದಾರೆ.

ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆಯಡಿ ನಾಲ್ಕು ಜಿಲ್ಲೆಗಳ ಅರ್ಹ ಫಲಾನುಭವಿಗಳಿಗೆ ಸಬ್ಸಿಡಿ ನೀಡಲು ನಿರ್ಧರಿಸಲಾಗಿದ್ದು, ಜಿಲ್ಲಾಧಿಕಾರಿಗಳ ವರದಿ ಆಧರಿಸಿ ಆಗಸ್ಟ್ 5ರೊಳಗೆ ಸಂಪೂರ್ಣ ನೆರವು ತಲುಪಿಸಲು ಸರ್ಕಾರ ಕ್ರಮ ಕೈಗೊಂಡಿದೆ.

ರಾಜ್ಯದ ಪರಿಸ್ಥಿತಿಯನ್ನು ಹದ್ದುಬಸ್ತಿಗೆ ತರಲು ವಿಪತ್ತು ನಿರ್ವಹಣಾ ಪಡೆಗಳು (ASDMA) ಹಾಗೂ ಸ್ಥಳೀಯ ಆಡಳಿತಗಳು ನಿರಂತರವಾಗಿ ಶ್ರಮಿಸುತ್ತಿವೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular