HomeKarnatakaಮುಂಗಾರು ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ – ಸಾಲ ಪಡೆದ ರೈತರಿಗೆ ಅವಕಾಶ

ಮುಂಗಾರು ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ – ಸಾಲ ಪಡೆದ ರೈತರಿಗೆ ಅವಕಾಶ

2026ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ ಯೋಜನೆಯಡಿ ಬೆಳೆ ವಿಮೆ ನೋಂದಣಿ ಮಾಡಿಸಿಕೊಳ್ಳಲು ಸಾಲ ಪಡೆದ ರೈತರಿಗೆ ಅಂತಿಮ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಮುಸುಕಿನ ಜೋಳ (ನೀರಾವರಿ/ಮಳೆ ಆಶ್ರಿತ) ಬೆಳೆಗೆ ವಿಮೆ ನೋಂದಾಯಿಸಲು ಮುಕ್ತಾಯವಾಗಿದ್ದ ಜುಲೈ 31 ರ ಗಡುವನ್ನು, ರೈತರ ಕೋರಿಕೆಯ ಮೇರೆಗೆ ಸಾಲ ಪಡೆದ ರೈತರಿಗೆ ಮಾತ್ರ ಅನ್ವಯವಾಗುವಂತೆ ಆಗಸ್ಟ್ 10 ರವರೆಗೆ ವಿಸ್ತರಿಸಲಾಗಿದೆ.

ಆಯ್ದ ಹೋಬಳಿಗಳಲ್ಲಿ ರಾಗಿ (ಮಳೆ ಆಶ್ರಿತ) ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಭತ್ತ (ನೀರಾವರಿ/ಮಳೆ ಆಶ್ರಿತ), ಮುಸುಕಿನ ಜೋಳ (ನೀರಾವರಿ/ಮಳೆ ಆಶ್ರಿತ) ಮತ್ತು ರಾಗಿ (ಮಳೆ ಆಶ್ರಿತ) ಬೆಳೆಗಳು ಈ ಯೋಜನೆಗೆ ಆಯ್ಕೆಯಾಗಿವೆ. ಸರ್ಕಾರದ ವತಿಯಿಂದ ‘ಅಗ್ರಿಕಲ್ಚರ್ ಇನ್‌ಶ್ಯೂರೆನ್ಸ್ ಕಂಪನಿ’ ಸಹಯೋಗದೊಂದಿಗೆ ಈ ಯೋಜನೆ ಅನುಷ್ಠಾನಗೊಳ್ಳಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಲ ಪಡೆದ ರೈತರಿಗೆ ಕಡ್ಡಾಯ ನಿಯಮ: ಬೆಳೆ ಸಾಲ ಪಡೆದ ರೈತರನ್ನು ಕಡ್ಡಾಯವಾಗಿ ಬೆಳೆ ವಿಮೆ ಯೋಜನೆಯಡಿ ಒಳಪಡಿಸಲಾಗುತ್ತದೆ. ಒಂದು ವೇಳೆ ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಛಿಸದಿದ್ದರೆ, ಬೆಳೆ ನೋಂದಣಿ ಅಂತಿಮ ದಿನಾಂಕಕ್ಕೆ 7 ದಿನಗಳ ಮುಂಚಿತವಾಗಿ ಲಿಖಿತ ಮುಚ್ಚಳಿಕೆ ನೀಡುವ ಮೂಲಕ ಹೊರಗುಳಿಯಬಹುದು.

ಬೆಳೆ ಸಾಲ ಪಡೆಯದ ರೈತರು ತಮ್ಮ ಭೂಮಿಯ ದಾಖಲೆಯಾದ ಪಹಣಿ ಮತ್ತು ಆಧಾರ್ ಸಂಖ್ಯೆಯೊಂದಿಗೆ ಹತ್ತಿರದ ಬ್ಯಾಂಕ್, ಆರ್ಥಿಕ ಸಂಸ್ಥೆಗಳು ಅಥವಾ ಸಾರ್ವಜನಿಕ ಸೇವಾ ಕೇಂದ್ರಗಳಲ್ಲಿ (ಸಿಎಸ್ ಸಿ) ನೋಂದಾಯಿಸಿಕೊಳ್ಳಬಹುದು. ಬಿತ್ತನೆ ಅಥವಾ ನಾಟಿ ಮಾಡುವುದಕ್ಕಿಂತ ಮುಂಚಿತವಾಗಿಯೂ ನೋಂದಾಯಿಸಲು ಅವಕಾಶವಿರುತ್ತದೆ.

ರೈತರು ಕೃಷಿ ಇಲಾಖೆ, ಕಂದಾಯ ಇಲಾಖೆ, ಸಹಕಾರ ಇಲಾಖೆ ಹಾಗೂ ಸಮೀಪದ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಹಾಗೂ ಹೆಚ್ಚಿನ ವಿವರಗಳಿಗಾಗಿ http://samrkshane.karnataka.gov.in ವೆಬ್‌ಸೈಟ್ ಅನ್ನು ಕೂಡ ಭೇಟಿ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.

ಉಚಿತ ಅಣಬೆ ಬೇಸಾಯ ತರಬೇತಿ : ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಆ. 17 ರಿಂದ 10 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಮತ್ತು ಮಹಿಳೆಯರಿಗೆ ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರವನ್ನು ಏರ್ಪಡಿಸಿದ್ದು, ಆರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 50 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

ಆಸಕ್ತಿಯುಳ್ಳ ಅಭ್ಯರ್ಥಿಗಳು ದಿನಾಂಕ: 13/08/2026 ಗುರುವಾರ ಬೆಳಗ್ಗೆ 10 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿ ಈ ಮೂಲಕ ಸೂಚಿಸಲಾಗಿದೆ. ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ದಿನಾಂಕ: 13/08/2026 ರೊಳಗೆ ಸಂಸ್ಥೆಯನ್ನು ದೂರವಾಣಿ ಸಂಖ್ಯೆ 8970476050, 6363139123, 9591514154, 9686248369, 9886935603 ಗಳಿಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular