HomeKarnatakaಸ್ವಾತಂತ್ರ್ಯ ದಿನಾಚರಣೆ: ಸಾರ್ವಜನಿಕರಿಗೆ ಇ-ಪಾಸ್ ವ್ಯವಸ್ಥೆ

ಸ್ವಾತಂತ್ರ್ಯ ದಿನಾಚರಣೆ: ಸಾರ್ವಜನಿಕರಿಗೆ ಇ-ಪಾಸ್ ವ್ಯವಸ್ಥೆ

ಬೆಂಗಳೂರು: ಬೆಂಗಳೂರು ನಗರದಲ್ಲಿ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆಗಸ್ಟ್ 15 ರಂದು ನಡೆಯಲಿರುವ ರಾಜ್ಯ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ವೀಕ್ಷಿಸಿಸಲು ಆಸಕ್ತಿ ಹೊಂದಿರುವ ಸಾರ್ವಜನಿಕರಿಗೆ ಇ-ಪಾಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕಾಂತರಾಜು ಪಿ.ಎಸ್ ಅವರು ತಿಳಿಸಿದ್ದಾರೆ.

ಆಸಕ್ತರು ಸೇವಾ ಸಿಂಧು ವೆಬ್ ಸೈಟ್ (www.sevasindhu.karnataka.gov.in)  ನಲ್ಲಿ ಆಗಸ್ಟ್ 5 2026 ರಿಂದ ಆಗಸ್ಟ್ 13 2026 ರ ಸಂಜೆ 5 ಗಂಟೆಯೊಳಗೆ ಸೇವಾ ಸಿಂಧು ವೆಬ್ ಸೈಟ್ ನಲ್ಲಿ ಅಗತ್ಯವಿರುವ ಎಲ್ಲಾ ವೈಯಕ್ತಿಕ ವಿವರಗಳನ್ನು ನಮೂದಿಸಿ ಇ-ಪಾಸ್ ಗಳನ್ನು ಪಡೆಯಬಹುದು.

ಇ-ಪಾಸ್ ಗಳನ್ನು ಹೊಂದಿರುವವರು ಪರೇಡ್ ಮೈದಾನದ ಪ್ರವೇಶ ದ್ವಾರ ಸಂಖ್ಯೆ : 05 ರಲ್ಲಿ ಪರಿಶೀಲನೆಗಾಗಿ ಇ-ಪಾಸ್ ನ ಮುದ್ರಿತ ಪ್ರತಿಯನ್ನು ಅಥವಾ ಡಿಜಿಟಲ್ (ಮೊಬೈಲ್ ) ಪ್ರತಿಯನ್ನು ಕಡ್ಡಾಯವಾಗಿ ಹೊಂದಿರಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇ-ಪಾಸ್ ನೋಂದಣಿ ಪ್ರಕ್ರಿಯೆ ಕುರಿತು ಸಹಾಯಕ್ಕಾಗಿ ಸೇವಾ ಸಿಂಧು ವೈಬ್ ಸೈಟ್ ನಲ್ಲಿ ಸಹಾಯ ವಿಭಾಗವನ್ನು ವೀಕ್ಷಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular