ಕೊಪ್ಪಳ: ಕೊಪ್ಪಳ ವಿಶ್ವವಿದ್ಯಾಲಯದ ವತಿಯಿಂದ ಗೌರವಧನ ಆಧಾರದ ಮೇಲೆ ಅತಿಥಿ ಸಹಾಯಕ ಗ್ರಂಥಪಾಲಕರು ಹಾಗೂ ತಾಂತ್ರಿಕ ಸಹಾಯಕರ ತಾತ್ಕಾಲಿಕ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಗೌರವಧನ ಆಧಾರದ ಮೇಲೆ 2 ಅತಿಥಿ ಸಹಾಯಕ ಗ್ರಂಥಪಾಲಕರು ಹಾಗೂ 1 ತಾಂತ್ರಿಕ ಸಹಾಯಕ ಗ್ರಂಥಪಾಲಕರ ತಾತ್ಕಾಲಿಕ ಹುದ್ದೆಗಳಿಗೆ ಆಗಸ್ಟ್ 6 ರ ಗುರುವಾರದಂದು ಬೆಳಗ್ಗೆ 11.30 ಗಂಟೆಗೆ ನೇರ ಸಂದರ್ಶನವನ್ನು ಏರ್ಪಡಿಸಲಾಗಿದ್ದು, ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳು ಮೂಲ ದಾಖಲಾತಿಗಳೊಂದಿಗೆ ಒಂದು ನಕಲು ಪ್ರತಿಯನ್ನು ನಿಗದಿತ ಸಮಯಕ್ಕೆ ಹಾಜರಾಗಬೇಕು.
ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ವಿಶ್ವವಿದ್ಯಾನಿಲಯದ ವೆಬ್ಸೈಟ್ www.koppaluniversity.ac.in ಅನ್ನು ವೀಕ್ಷಿಸಬಹುದು. ಸಂದರ್ಶನಕ್ಕಾಗಿ ಹಾಜರಾಗುವ ಅಭ್ಯರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಯಾವುದೇ ಭತ್ಯೆಗಳನ್ನು ನೀಡಲಾಗುವುದಿಲ್ಲ ಎಂದು ಕೊಪ್ಪಳ ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

