ಬೆಂಗಳೂರು: ಕಾರ್ ಪಲ್ಟಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕಂಬಾಳು ಗ್ರಾಮದ ಬಳಿ ಅಪಘಾತ ಸಂಭವಿಸಿದೆ.
ನಿನ್ನೆ ರಾತ್ರಿ ಕಾರ್ ಪಲ್ಟಿಯಾಗಿದ್ದು, ಪವನ್ ಮತ್ತು ದೀಪಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ನೇಹಿತನ ಹುಟ್ಟುಹಬ್ಬ ಪಾರ್ಟಿ ಮುಗಿಸಿಕೊಂಡು ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣವೆಂದು ಹೇಳಲಾಗಿದೆ. ಸ್ಥಳಕ್ಕೆ ದಾಬಸ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

