ದೆಹಲಿ: ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳು ಅನೇಕ ನಾಯಕರಿಗೆ ಕೊಟ್ಟಿದ್ದ ಭರವಸೆಗಳನ್ನು ಈಡೇರಿಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಪಕ್ಷದ ಹಿರಿಯ ಮತ್ತು ಕಿರಿಯ ನಾಯಕರಲ್ಲಿ ತೀವ್ರ ಅಸಮಾಧಾನ ಹೊಗೆಯಾಡುತ್ತಿದೆ ಎಂದು ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.
ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸರ್ಕಾರ ಮತ್ತು ಪಕ್ಷದ ಮೇಲಿದ್ದ ನಿರೀಕ್ಷೆಗಳು ಹೆಚ್ಚಾಗಿದ್ದವು. ಆದರೆ ಈಗಿನ ಪರಿಸ್ಠಿತಿಯಲ್ಲಿ ಹಿರಿಯ ನಾಯಕರಾಗಲಿ ಅಥವಾ ಕಿರಿಯ ನಾಯಕರಾಗಲಿ ಯಾರೂ ಸಂತುಷ್ಟರಾಗಿಲ್ಲ. ಪ್ರಾತಿನಿಧ್ಯದ ವಿಚಾರದಲ್ಲಿ ಮಹಿಳೆಯರಿಗೂ ಸರಿಯಾದ ಸ್ಥಾನಮಾನ ಸಿಕ್ಕಿಲ್ಲ ಹಾಗೂ ಹಲವು ಜಿಲ್ಲೆಗಳಿಗೆ ಸೂಕ್ತ ಪ್ರಾತಿನಿಧ್ಯ ನೀಡದೆ ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಕಾಂಗ್ರೆಸ್ ಹೈಕಮಾಂಡ್ ಅನುಕೂಲಕ್ಕಾಗಿ ಸಂಪುಟ ವಿಸ್ತರಣೆ ಮಾಡಲಾಗಿದೆ. ಹೀಗಾಗಿ ಬಹಳ ಜನರು ಬೇಸರಗೊಂಡಿದ್ದಾರೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

