HomeLatest Newsಪ್ರಚೋದನಕಾರಿ ಭಾಷಣ: SDPI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಿಯಾಜ್ ಪರಂಗೀಪೇಟೆಗೆ 6 ತಿಂಗಳು ಜೈಲು ಶಿಕ್ಷೆ...

ಪ್ರಚೋದನಕಾರಿ ಭಾಷಣ: SDPI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಿಯಾಜ್ ಪರಂಗೀಪೇಟೆಗೆ 6 ತಿಂಗಳು ಜೈಲು ಶಿಕ್ಷೆ ಪ್ರಕಟ

ಮಂಗಳೂರು: ಪ್ರಚೋದನಕಾರಿ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಿಯಾಜ್ ಪರಂಗೀಪೇಟೆಗೆ ಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ.

ಸುಮಾರು 11 ವರ್ಷಗಳ ಹಳೆಯ ಪ್ರಚೋದನಕಾರಿ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಯಾಜ್ ಪರಂಗೀಪೇಟೆಗೆ ನ್ಯಾಯಾಲಯ 6 ತಿಂಗಳು ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರೋಪಿ ರಿಯಾಜ್ ವಿರುದ್ಧ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಬೆಳ್ತಂಗಡಿಯ ಪ್ರಿನ್ಸಿಪಲ್ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ರಾಮಲಿಂಗಪ್ಪ ಅವರು ಈ ಮಹತ್ವದ ತೀರ್ಪು ಪ್ರಕಟಿಸಿದ್ದಾರೆ.

ರಿಯಾಜ್ ಪರಂಗಿಪೇಟೆ 2015ರ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಕಚೇರಿ ಬಳಿ ನಿಷೇಧಿತ ಪಿಎಫ್‌ಐ (PFI) ಸಂಘಟನೆಯ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಪ್ರಚೋದನಕಾರಿ ಭಾಷಣ ಮಾಡಿದ್ದರು. ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಹಾಗೂ ಸಮಾಜದಲ್ಲಿ ಪ್ರಚೋದನೆ ಸೃಷ್ಟಿಸುವ ರೀತಿಯಲ್ಲಿ ಮಾತುಗಳನ್ನಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು ಆಗಿನ ಐಪಿಸಿ ಕಾಯ್ದೆಯ ಕಲಂ 153(A) (ಕೋಮು ಸೌಹಾರ್ದತೆಗೆ ಧಕ್ಕೆ ತರುವುದು) ಹಾಗೂ 295(A) (ಧಾರ್ಮಿಕ ಭಾವನೆಗಳಿಗೆ ಧಕ್ಕೆ) ಅಡಿಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ ಅಂದಿನ ಬೆಳ್ತಂಗಡಿ ಠಾಣೆಯ ಪಿಎಸ್ ಐ ಗೂ ತನಿಖಾಧಿಕಾರಿ ರವಿ ಬಿ.ಎಸ್. ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಸಾಕ್ಷ್ಯಧಾರಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕಿ ಆಶೀತಾ ಅವರು ವಾದ ಮಂಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ರಿಯಾಜ್ ಗೆ 6 ತಿಂಗಳು ಜೈಲು ಶಿಕ್ಷೆ 10,000 ರೂ ದಂಡ ವಿಧಿಸಿ ತೀರ್ಪು ಪ್ರಕಟಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular