HomeLatest Newsಆರ್ಟಿಕಲ್ 370 ರದ್ದುಗೊಳಿಸಿ 7 ವರ್ಷ; ಜಮ್ಮು- ಕಾಶ್ಮೀರದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ ಎಂದ ಪ್ರಧಾನಿ...

ಆರ್ಟಿಕಲ್ 370 ರದ್ದುಗೊಳಿಸಿ 7 ವರ್ಷ; ಜಮ್ಮು- ಕಾಶ್ಮೀರದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ ಎಂದ ಪ್ರಧಾನಿ ಮೋದಿ

ನವದೆಹಲಿ: ಆರ್ಟಿಕಲ್ 370 ರದ್ದುಗೊಳಿಸಿದ 7ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು, ಈ ನಿರ್ಧಾರವನ್ನು ಜಮ್ಮು-ಕಾಶ್ಮೀರ ಹಾಗೂ ಲಡಾಖ್‌ನ ಪಯಣದಲ್ಲಿ ನಿರ್ಣಾಯಕ ಹೊಸ ಅಧ್ಯಾಯ ಎಂದು ಬಣ್ಣಿಸಿದ್ದಾರೆ.

2019ರ ಆಗಸ್ಟ್ 5ರಂದು, ಕೇಂದ್ರ ಸರ್ಕಾರ ಆರ್ಟಿಕಲ್ 370 ಮತ್ತು 35(ಎ) ಅನ್ನು ರದ್ದುಗೊಳಿಸಿ, ಜಮ್ಮು-ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನವನ್ನು ಅಂತ್ಯಗೊಳಿಸಿತ್ತು. ಈ ಕ್ರಮದ ಮೂಲಕ ಜಮ್ಮು-ಕಾಶ್ಮೀರವನ್ನು ಸಂಪೂರ್ಣವಾಗಿ ಭಾರತದ ಸಾಂವಿಧಾನಿಕ ಚೌಕಟ್ಟಿನೊಳಗೆ ತರಲಾಯಿತು.

‘ಎಕ್ಸ್’ (X) ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ,”ಏಳು ವರ್ಷಗಳ ಹಿಂದೆ ಇದೇ ದಿನ ಆರ್ಟಿಕಲ್ 370 ಮತ್ತು 35(ಎ) ಇತಿಹಾಸದ ಪುಟ ಸೇರಿತು. ಇದು ಜಮ್ಮು-ಕಾಶ್ಮೀರ ಹಾಗೂ ಲಡಾಖ್‌ನ ಪಯಣದಲ್ಲಿ ನಿರ್ಣಾಯಕ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿತು. ಅಂದಿನಿಂದ ಅಲ್ಲಿನ ಜನರ ಬದುಕಿನಲ್ಲಿ ವ್ಯಾಪಕ ಬದಲಾವಣೆಗಳಾಗಿವೆ. ಮೂಲಸೌಕರ್ಯ ಅಭಿವೃದ್ಧಿಯಾಗಿದೆ. ಶಿಕ್ಷಣ, ಆರೋಗ್ಯ, ಉದ್ಯಮಶೀಲತೆ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಹೊಸ ಅವಕಾಶಗಳು ಸೃಷ್ಟಿಯಾಗಿವೆ” ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಹಿಳೆಯರು ಹಾಗೂ ಸಮಾಜದ ಅಂಚಿನಲ್ಲಿದ್ದ ಸಮುದಾಯಗಳಿಗೆ ದಶಕಗಳ ಕಾಲ ಸಿಗದಿದ್ದ ಸಾಂವಿಧಾನಿಕ ಹಕ್ಕುಗಳು ಈಗ ಸಂಪೂರ್ಣವಾಗಿ ದೊರೆತಿವೆ ಎಂದು ಅವರು ಹೇಳಿದ್ದಾರೆ.ಪ್ರಧಾನಿ ಮೋದಿ ಅವರು ಭಾರತೀಯ ಜನಸಂಘದ ಸಂಸ್ಥಾಪಕ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರನ್ನು ಸ್ಮರಿಸಿ, ಅವರ ರಾಷ್ಟ್ರೀಯ ಏಕತೆಗಾಗಿ ಮಾಡಿದ ಹೋರಾಟ ಇಂದಿಗೂ ದೇಶಕ್ಕೆ ಸ್ಫೂರ್ತಿಯಾಗಿದೆ ಎಂದು ಹೇಳಿದರು.

“ಈ ವರ್ಷದ ಆಗಸ್ಟ್ 5ಕ್ಕೆ ಮತ್ತಷ್ಟು ವಿಶೇಷ ಮಹತ್ವವಿದೆ. ಏಕೆಂದರೆ ಈ ವರ್ಷ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರ 125ನೇ ಜನ್ಮ ವಾರ್ಷಿಕೋತ್ಸವವನ್ನು ದೇಶ ಆಚರಿಸುತ್ತಿದೆ. ರಾಷ್ಟ್ರೀಯ ಏಕತೆಗಾಗಿ ಅವರ ಜೀವನಪರ್ಯಂತದ ಬದ್ಧತೆ ಇಂದಿಗೂ ಹಲವು ತಲೆಮಾರುಗಳಿಗೆ ಪ್ರೇರಣೆಯಾಗಿದೆ” ಎಂದು ಮೋದಿ ತಿಳಿಸಿದ್ದಾರೆ. ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಅವರು ಆರ್ಟಿಕಲ್ 370ಗೆ ಆರಂಭದಿಂದಲೇ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದರು. ಜಮ್ಮು-ಕಾಶ್ಮೀರಕ್ಕೆ ಪ್ರತ್ಯೇಕ ಸಂವಿಧಾನ ಮತ್ತು ಧ್ವಜ ನೀಡುವುದನ್ನು ಅವರು ರಾಷ್ಟ್ರೀಯ ಏಕತೆಗೆ ವಿರುದ್ಧ ಎಂದು ವಾದಿಸಿದ್ದರು.

ಪ್ರಧಾನಿ ಮೋದಿ ಅವರು ತಮ್ಮ ಸರ್ಕಾರವು ಜಮ್ಮು-ಕಾಶ್ಮೀರ ಹಾಗೂ ಲಡಾಖ್‌ನ ಸಮಗ್ರ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಪುನರುಚ್ಚರಿಸಿದರು. “ದಶಕಗಳ ಹಿಂದೆ ಡಾ. ಮುಖರ್ಜಿ ಕಂಡಿದ್ದ ಕನಸು 2019ರ ಆಗಸ್ಟ್ 5ರಂದು ಸಾಕಾರಗೊಂಡಿತು. ಜಮ್ಮು-ಕಾಶ್ಮೀರ ಹಾಗೂ ಲಡಾಖ್‌ನ ಅಭಿವೃದ್ಧಿಗೆ ನಮ್ಮ ಬದ್ಧತೆ ಮುಂದುವರಿಯಲಿದೆ. ಪ್ರತಿಯೊಬ್ಬ ನಾಗರಿಕನಿಗೂ ದೊಡ್ಡ ಕನಸು ಕಾಣಲು, ಸಾಧನೆ ಮಾಡಲು ಹಾಗೂ ವಿಕಸಿತ ಭಾರತದ ನಿರ್ಮಾಣಕ್ಕೆ ಕೊಡುಗೆ ನೀಡಲು ಅವಕಾಶ ಕಲ್ಪಿಸಲಾಗುವುದು” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular