ಬೆಂಗಳೂರು: ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ಶಾಸಕ ಬಿ.ಆರ್.ಪಾಟೀಲ್ ನೀತಿ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಬಿ.ಆರ್.ಪಾಟೀ, ಮಂತ್ರಿ ಸ್ಥಾನ ಸಿಗದಿದ್ದಕ್ಕೆ ಸಹಜವಾಗಿಯೇ ನನಗೆ ನೋವಾಗಿದೆ. ಐದು ದಶಕಗಳ ರಾಜಕೀಯ ಜೀವನದಲ್ಲಿ ಹುದ್ದೆ, ವ್ಯಕ್ತಿ ಹಾಗೂ ವೈಯಕ್ತಿಕ ಹಿತಾಸಕ್ತಿಗಿಂತ ಸಿದ್ಧಾಂತವೇ ಮೇಲೆಂದು ನಾನು ನಂಬಿದ್ದೇನೆ. ಕಾಂಗ್ರೆಸ್ ಪಕ್ಷದ ಮೇಲಿನ ನನ್ನ ನಿಷ್ಠೆ ಅಚಲ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಅನ್ನೋದು ಸುಳ್ಳು. ಶಾಸಕ ಸ್ಥಾನ ನನಗೆ ದೊರೆತಿರುವ ಹುದ್ದೆಯಲ್ಲ. ಬದಲಾಗಿ ಜನರು ನನ್ನ ಮೇಲೆ ನಂಬಿ ಕೊಟ್ಟಿರುವ ಜವಾಬ್ದಾರಿ. ಆ ಜನಾದೇಶಕ್ಕೆ ದ್ರೋಹ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಸಚಿವ ಸ್ಥಾನ ಇರಲಿ, ಇಲ್ಲದಿರಲಿ ಕ್ಷೇತ್ರದ ಜನರ ಸೇವೆಗೆ ಬದ್ಧನಿದ್ದೇನೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡ್ತೇನೆ ಎಂಬ ಸುಳ್ಳು ಸುದ್ದಿ. ನೀತಿ ಆಯೊಗದ ಉಪಾದ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ.

