ಬಳ್ಳಾರಿ: ಹಳೇ ಲವರ್ ಕಾಟಕ್ಕೆ ಬೇಸತ್ತು ಯುವತಿಯೊಬ್ಬಳು ವಿಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬಳ್ಳಾರಿಯ ಕೌಲ್ ಬಜಾರ್ ನಲ್ಲಿ ನಡೆದಿದೆ.
ಆತ್ಮಹತ್ಯೆಗೂ ಮುನ್ನ ಹೊಸ ಲವರ್ ಗೆ ಕರೆ ಮಾಡಿ ಘಟನೆ ಬಗ್ಗೆ ವಿವರಿಸಿರುವ ಯುವತಿ, ಬಳ್ಳಾರಿ ನಗರದ ಕೌಲ್ ಬಜಾರ್ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುವತಿ ಬೆಂಗಳೂರಿನಲ್ಲಿ ಐಟಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದರು.
ಈ ವೇಳೆ ಕೌಲ್ ಬಜಾರ್ ನಿವಾಸಿ ಅಜೀಂ ಜೊತೆ ಪ್ರೀತಿಯಲ್ಲಿದ್ದಳು. ಕೆಲ ದಿನಗಳ ಬಳಿಕ ಅಜಿಂ ವರ್ತನೆಯಿಂದ ನೊಂದಿದ್ದಳು. ಆತನಿಂದ ದೂರಾಗಿ ಅಜೀಂ ಸ್ನೇಹಿತ ಸೋಹೈಲ್ ನನ್ನು ಮದುವೆಯಾಗಲು ಮುಂದಾಗಿದ್ದಳು.
ಮದುವೆ ವಿಚಾರ ಗೊತ್ತಾಗುತ್ತಿದ್ದಂತೆ ತನ್ನ ಜೊತೆಗಿರುವ ಖಾಸಗಿ ಫೋಟೊ ವೈರಲ್ ಮಾಡುವುದಾಗಿ ಅಜೀಂ ಬೆದರಿಕೆ ಹಾಕಿದ್ದ. ಇದರಿಂದ ಬೇಸತ್ತ ಯುವತಿ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರನಾಗಿದ್ದಾಳೆ. ಆತ್ಮಹತ್ಯೆಗೆ ಕಾರಣರಾದವರಿಗೆ ಶಿಕ್ಷೆ ನೀಡುವಂತೆ ಮನವಿ ಮಾಡಿದ್ದಾಳೆ.
ಇಬ್ಬರು ಲವರ್ ಗಳ ಕಾಟದಿಂದ ಮನನೊಂದು ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರೀತಿ ಹೆಸರಲ್ಲಿ ತಲೆ ಕೆಡಿಸಿ ಮಗಳನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಇದರಿಂದ ಬೇಸತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಯುವತಿ ಪೋಷಕರು ಕೌಲ್ ಬಜಾರ್ ಠಾಣೆಯಲ್ಲಿ ದೂರು ನೀಡಿದ್ದಾರೆ.

