HomeKarnatakaಪ್ರವಾಸಿಗರಿಗೆ ಗುಡ್ ನ್ಯೂಸ್: ಜೋಗ್‌ ಫಾಲ್ಸ್‌ ಗೆ ಕೆ.ಎಸ್‌.ಆರ್‌.ಟಿ.ಸಿ. ವಿಶೇಷ ಪ್ಯಾಕೇಜ್ ಬಸ್ ಸೇವೆ ಆರಂಭ

ಪ್ರವಾಸಿಗರಿಗೆ ಗುಡ್ ನ್ಯೂಸ್: ಜೋಗ್‌ ಫಾಲ್ಸ್‌ ಗೆ ಕೆ.ಎಸ್‌.ಆರ್‌.ಟಿ.ಸಿ. ವಿಶೇಷ ಪ್ಯಾಕೇಜ್ ಬಸ್ ಸೇವೆ ಆರಂಭ

ಶಿವಮೊಗ್ಗ: ಪ್ರಸ್ತುತ ಮಳೆಗಾಲದಲ್ಲಿ ಪ್ರವಾಸಿಗರ ನೆಚ್ಚಿನ ತಾಣವಾಗಿರುವ ವಿಶ್ವವಿಖ್ಯಾತ ಜೋಗ್‌ ಫಾಲ್ಸ್ ವೀಕ್ಷಣೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಶಿವಮೊಗ್ಗ ವಿಭಾಗವು ವಿಶೇಷ ಪ್ಯಾಕೇಜ್ ಸಾರಿಗೆ ಸೇವೆಯನ್ನು ಆರಂಭಿಸಿದೆ.

ಸಾರ್ವಜನಿಕ ಪ್ರಯಾಣಿಕರು ಮತ್ತು ಪ್ರವಾಸಿಗರ ಅನುಕೂಲಕ್ಕಾಗಿ ಪ್ರತಿ ಶನಿವಾರ ಮತ್ತು ಭಾನುವಾರ ಈ ವಿಶೇಷ ಬಸ್ ಗಳ ಕಾರ್ಯಾಚರಣೆ ನಡೆಯಲಿದೆ.

ಈ ವಿಶೇಷ ಸಾರಿಗೆಯು ಶಿವಮೊಗ್ಗ ಬಸ್ ನಿಲ್ದಾಣದಿಂದ ಹೊರಟು ಸಿಗಂದೂರು, ವರದಾಮೂಲ, ಇಕ್ಕೇರಿ ಮತ್ತು ಕೆಳದಿ ಮಾರ್ಗವಾಗಿ ಜೋಗ್‌ ಫಾಲ್ಸ್‌ ಗೆ ತಲುಪಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗದಿಂದ ಹೊರಡುವ ಸಮಯ ಬೆಳಿಗ್ಗೆ 8 ಗಂಟೆ, ಜೋಗ್‌ ಫಾಲ್ಸ್ ತಲುಪುವ ಸಮಯ ಮಧ್ಯಾಹ್ನ 2 ಗಂಟೆ.

ಜೋಗ್‌ ಫಾಲ್ಸ್‌ನಿಂದ ಹಿಂತಿರುಗುವ ಸಮಯ ಸಂಜೆ 5 ಗಂಟೆ. ಶಿವಮೊಗ್ಗ ತಲುಪುವ ಸಮಯ ರಾತ್ರಿ 7:30 ಗಂಟೆ.

ಪ್ರಯಾಣ ದರ: ವಯಸ್ಕರಿಗೆ ರೂ. 450

ಮಕ್ಕಳಿಗೆ: ರೂ.250

ಮಳೆಗಾಲದಲ್ಲಿ ಸುಂದರ ಜಲಪಾತ ಹಾಗೂ ಸುತ್ತಮುತ್ತಲಿನ ಧಾರ್ಮಿಕ ಮತ್ತು ಐತಿಹಾಸಿಕ ತಾಣಗಳನ್ನು ವೀಕ್ಷಿಸಲು ಬಯಸುವ ಸಾರ್ವಜನಿಕರು ಹಾಗೂ ಪ್ರವಾಸಿಗರು ಈ ವಿಶೇಷ ಪ್ಯಾಕೇಜ್ ಸಾರಿಗೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು ಕೆಎಸ್ಆರ್‌ಟಿಸಿ ಶಿವಮೊಗ್ಗ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular