HomeKarnatakaಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್

ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್

ಧಾರವಾಡ: ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಪಡಿತರ ಆಹಾರಧಾನ್ಯಗಳನ್ನು ಪೂರೈಸುತ್ತಿದೆ.

ಅದರಂತೆ ಅಗಸ್ಟ್-2026 ನೇ ಮಾಹೆಯಲ್ಲಿ ಅಗಸ್ಟ-2026 ಹಾಗೂ ಸೆಪ್ಟಂಬರ್-2026 ನೇ ಈ ಎರಡು ಮಾಹೆಗಳಿಗೆ ಸಂಬಂಧಿಸಿದಂತೆ, ಜಿಲ್ಲೆಯ ಅಂತ್ಯೋದಯ ಪಡಿತರ ಚೀಟಿ (ಪ್ರತಿ ಕಾರ್ಡಿಗೆ) 28 ಕೆಜಿ ಅಕ್ಕಿ ಮತ್ತು 42 ಕೆಜಿ ಜೋಳ ಒಟ್ಟು 70 ಕೆಜಿ ಆಹಾರಧಾನ್ಯ ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ ಕೇಂದ್ರ ವರ್ಗದಡಿಯ ಪಡಿತರ ಕಾರ್ಡುಗಳಿಗೆ 4 ಕೆಜಿ ಅಕ್ಕಿ ಮತ್ತು 6 ಕೆಜಿ ಜೋಳ ಒಟ್ಟು 10 ಕೆಜಿ ಆಹಾರಧಾನ್ಯ ಹಾಗೂ ರಾಜ್ಯ ಆದತ್ಯಾ (ಬಿಪಿಎಲ್) ಪಡಿತರ ಚೀಟಿಯ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ ಪಡಿತರ ಆಹಾರಧಾನ್ಯವನ್ನು ವಿತರಣೆ ಮಾಡಲಾಗುತ್ತದೆ. ಹಾಗೆಯೇ ರಾಜ್ಯ ಸರ್ಕಾರವು ತನ್ನ ಪಾಲಿನ ಎರಡು ತಿಂಗಳ ಅಕ್ಕಿಯನ್ನು ಸೆಪ್ಟಂಬರ-2026 ನೇ ಮಾಹೆಯಲ್ಲಿ ನೀಡಲಾಗುವುದು.

ಪ್ರಸ್ತುತ ಅಗಸ್ಟ್-2026 ನೇ ಮಾಹೆಯಲ್ಲಿ ಕೇಂದ್ರ ವ್ಯಾಪ್ತಿ ಅಂದರೆ ಎನ್‍ಎಫ್‍ಎಸ್‍ಎ ವರ್ಗದಡಿ ಅಗಸ್ಟ್ ಮತ್ತು ಸೆಪ್ಟಂಬರ್-2026 ಎರಡೂ ಮಾಹೆಗಳ ಪಡಿತರ ಆಹಾರಧಾನ್ಯವನ್ನು ವಿತರಿಸಲಾಗುತ್ತಿದ್ದು, ಎಲ್ಲ ಅರ್ಹ ಫಲಾನುಭವಿಗಳು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಎರಡೂ ಮಾಹೆಗಳಿಗೆ ಸಂಬಂಧಿಸಿದಂತೆ ಮಾಹೆವಾರು ಪ್ರತ್ಯೇಕವಾಗಿ ಬೆರಳಚ್ಚು ನೀಡಿ ಉಚಿತವಾಗಿ ಪಡಿತರವನ್ನು ಪಡೆಯಬೇಕು. ಹಾಗೂ ನ್ಯಾಯಬೆಲೆ ಅಂಗಡಿಗಳಲ್ಲಿ 1967 ಸಹಾಯವಾಣಿ ಸಂಖ್ಯೆಯನ್ನು ಪ್ರದರ್ಶಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular