HomeKarnatakaBIG NEWS: ರಾಜ್ಯಾದ್ಯಂತ ಪಿಒಪಿ, ರಾಸಾಯನಿಕ ಬಳಕೆ ಗಣೇಶ ಮೂರ್ತಿ ತಯಾರಿಕೆ, ಸಂಗ್ರಹ, ಮಾರಾಟ ನಿಷೇಧ:...

BIG NEWS: ರಾಜ್ಯಾದ್ಯಂತ ಪಿಒಪಿ, ರಾಸಾಯನಿಕ ಬಳಕೆ ಗಣೇಶ ಮೂರ್ತಿ ತಯಾರಿಕೆ, ಸಂಗ್ರಹ, ಮಾರಾಟ ನಿಷೇಧ: ಕಠಿಣ ಕ್ರಮದ ಎಚ್ಚರಿಕೆ

ಬೆಂಗಳೂರು: 2026ನೇ ಸಾಲಿನ ಪರಿಸರ ಸ್ನೇಹಿ ಗಣೇಶ ಹಬ್ಬದ ಅಂಗವಾಗಿ ಕರ್ನಾಟಕ ರಾಜ್ಯಾದಾದ್ಯಂತ ಪ್ಲಾಸ್ಟರ್ ಆಫ್ ಪ್ಯಾರೀಸ್(ಪಿಒಪಿ ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ವಿಗ್ರಹಗಳ ಉತ್ಪಾದನೆ. ಸಂಗ್ರಹ, ಮಾರಾಟ ಮತ್ತು ವಿಸರ್ಜನೆಯನ್ನು ನಿಷೇಧಿಸುವ ಬಗ್ಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಎಚ್ಚರಿಕೆ ನೀಡಿದೆ.

ಪರಿಸರ ಸ್ನೇಹಿ ಗಣೇಶ ಹಬ್ಬವನ್ನು ರಾಜ್ಯದಾದ್ಯಂತ ಭಕ್ತಿ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (POP) ಹಾಗೂ ವಿವಿಧ ರಾಸಾಯನಿಕ ಬಣ್ಣಗಳಿಂದ ತಯಾರಿಸಲಾದ ಗಣೇಶ ಮೂರ್ತಿಗಳ ಬಳಕೆಯಿಂದ ಕೆರೆ, ನದಿ ಹಾಗೂ ಇತರೆ ಜಲಮೂಲಗಳಲ್ಲಿ ನೀರಿನ ಗುಣಮಟ್ಟ ಕುಸಿಯುತ್ತಿರುವುದು ಹಾಗೂ ಜಲಚರ ಜೀವಿಗಳ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದು ಕಂಡುಬಂದಿದೆ.

ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ರಾಜ್ಯ ವ್ಯಾಪ್ತಿಯೊಳಗಿನ ಕಡಲು ಅಥವಾ ಸಮುದ್ರ ಮತ್ತು ರಾಜ್ಯದ ನೀರಿನ ಇತರೆ ಮೂಲಗಳಾದ ನದಿ, ತೊರೆ, ಹಳ್ಳ, ಕೆರೆ, ಬಾವಿ, ಇವುಗಳ ನೀರು ಮಾಲಿನ್ಯಗೊಳಗಾಗದಂತೆ ಸಂರಕ್ಷಿಸುವ ಉದ್ದೇಶದಿಂದ ಭಾರಲೋಹ ಮಿಶ್ರಿತ ರಾಸಾಯನಿಕಯುಕ್ತ ತ್ಯಾಜ್ಯ ಉತ್ಪಾದನೆಯನ್ನು ತಗ್ಗಿಸಿ ನೈಸರ್ಗಿಕ ಸಂಪನ್ಮೂಲಗಳ ವಿವೇಚನಾಯುಕ್ತ ಬಳಕೆಯ ಮೂಲಕ ತ್ಯಾಜ್ಯ ಉತ್ಪಾದನೆಯನ್ನು ಕಡಿಮೆ ಮಾಡುವುದು ನಮ್ಮ ಧ್ಯೇಯವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಣ್ಣದಿಂದ ಅಲಂಕೃತಗೊಂಡಂತಹ ಯಾವುದೇ ರೀತಿಯ ಪ್ಲಾಸ್ಟರ್ ಆಫ್ ಪ್ಯಾರಿಸ್‌ ನಿಂದ ತಯಾರಿಸಿದ ಗಣೇಶ ವಿಗ್ರಹಗಳು ಹಾಗೂ ಅದೇ ಭಾರಲೋಹ ಮಿಶ್ರಿತ ರಾಸಾಯನಿಕಯುಕ್ತ ಬಣ್ಣದಿಂದ ಅಲಂಕೃತಗೊಂಡಂತಹ ಯಾವುದೇ ರೀತಿಯ ಇತರ ವಿಗ್ರಹಗಳ ಉತ್ಪಾದನೆ. ಮಾರಾಟ ಹಾಗೂ ಅವುಗಳನ್ನು ಮೇಲೆ ತಿಳಿಸಿದ ಯಾವುದೇ ನೀರಿನ ಮೂಲಗಳಲ್ಲಿ ವಿಸರ್ಜಿಸುವುದನ್ನು ರಾಜ್ಯಾದಾದ್ಯಂತ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಪರಿಸರ ಸಂರಕ್ಷಣೆ. ಸಾರ್ವಜನಿಕ ಆರೋಗ್ಯ ಹಾಗೂ ಜಲಮೂಲಗಳ ರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು, 2026ನೇ ಸಾಲಿನ ಗಣೇಶ ಹಬ್ಬದ ಸಂದರ್ಭದಲ್ಲಿ ರಾಜ್ಯದಾದ್ಯಂತ ಪರಿಸರ ಸ್ನೇಹಿ ಆಚರಣೆಯನ್ನು ಉತ್ತೇಜಿಸುವ ಉದ್ದೇಶದಿಂದ ಕೆಳಕಂಡ ನಿರ್ದೇಶನಗಳನ್ನು ಹೊರಡಿಸಲಾಗುತ್ತಿದೆ.

ನಿರ್ದೇಶನಗಳು

1) ಪ್ಲಾಸ್ಟರ್ ಆಫ್ ಪ್ಯಾರಿಸ್ (POP) ಅಥವಾ ಯಾವುದೇ ರಾಸಾಯನಿಕ ವಸ್ತುಗಳಿಂದ ತಯಾರಿಸಲಾದ ಗಣೇಶ ಮೂರ್ತಿಗಳ ತಯಾರಿಕೆಯನ್ನು ರಾಜ್ಯದಾದ್ಯಂತ ನಿಷೇಧಿಸಲಾಗಿದೆ.

2) POP ಗಣೇಶ ಮೂರ್ತಿಗಳ ಸಂಗ್ರಹಣೆ, ಮಾರಾಟ, ವಿತರಣೆ ಹಾಗೂ ಸಾರ್ವಜನಿಕ ಪ್ರದರ್ಶನವನ್ನು ಅನುಮತಿಸಲಾಗುವುದಿಲ್ಲ.

3) ವಿಷಕಾರಿ ಅಥವಾ ಭಾರ ಲೋಹಗಳನ್ನು ಒಳಗೊಂಡಿರುವ ರಾಸಾಯನಿಕ ಬಣ್ಣಗಳಿಂದ ತಯಾರಿಸಲಾದ ಮೂರ್ತಿಗಳ ಉತ್ಪಾದನೆ ಹಾಗೂ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

4) ಸಾರ್ವಜನಿಕರು ಹಾಗೂ ಗಣೇಶೋತ್ಸವ ಸಮಿತಿಗಳು ನೈಸರ್ಗಿಕ ಮಣ್ಣು (Clay) ಹಾಗೂ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಲಾದ ಗಣೇಶ ಮೂರ್ತಿಗಳನ್ನು ಮಾತ್ರ ಬಳಸುವುದು.

5) ನೈಸರ್ಗಿಕ ಹಾಗೂ ವಿಷರಹಿತ ಬಣ್ಣಗಳಿಂದ ಅಲಂಕರಿಸಲಾದ ಮೂರ್ತಿಗಳಿಗೆ ಮಾತ್ರ ಆದ್ಯತೆ ನೀಡುವುದು.

6) ಯಾವುದೇ ಪರಿಸ್ಥಿತಿಯಲ್ಲಿಯೂ POP ಮೂರ್ತಿಗಳನ್ನು ಕೆರೆ. ನದಿ, ಕಾಲುವೆ, ಜಲಾಶಯ ಅಥವಾ ಇತರೆ ಜಲಮೂಲಗಳಲ್ಲಿ ವಿಸರ್ಜಿಸಬಾರದು.

7) ಸ್ಥಳೀಯ ಸಂಸ್ಥೆಗಳು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಬಳಕೆಯ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುವುದು.

8) ಜಿಲ್ಲಾಧಿಕಾರಿಗಳು, ಪೊಲೀಸ್ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಅಧಿಕಾರಿಗಳು ಜಂಟಿಯಾಗಿ ಈ ಆದೇಶದ ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡುವುದು.

9) ನಿಷೇಧಿತ ಮೂರ್ತಿಗಳ ಉತ್ಪಾದನೆ ಅಥವಾ ಮಾರಾಟ ಕಂಡುಬಂದಲ್ಲಿ ಸಂಬಂಧಿತ ಕಾನೂನುಗಳಡಿ ವಶಪಡಿಸಿಕೊಳ್ಳುವ ಹಾಗೂ ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು.

10) ವ್ಯಾಪಾರಿಗಳು. ತಯಾರಕರು ಹಾಗೂ ಗಣೇಶೋತ್ಸವ ಸಮಿತಿಗಳು ಈ ಸುತ್ತೋಲೆಯಲ್ಲಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.

11) ಪರಿಸರ ಸ್ನೇಹಿ ಗಣೇಶ ಹಬ್ಬದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸ್ಥಳೀಯ ಸಂಸ್ಥೆಗಳು, ಶಾಲೆಗಳು, ಕಾಲೇಜುಗಳು ಹಾಗೂ ಸ್ವಯಂಸೇವಾ ಸಂಘಟನೆಗಳು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು.

ಈ ಸುತ್ತೋಲೆಯ ಅನುಷ್ಠಾನದ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಿತ ಇಲಾಖೆಗಳು ಗಣೇಶ ಹಬ್ಬದ ನಂತರ ಸಮಗ್ರ ವರದಿಯನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸಲ್ಲಿಸುವುದು.

ಮೇಲ್ಕಂಡ ನಿರ್ದೇಶನಗಳನ್ನು ರಾಜ್ಯದ ಎಲ್ಲಾ ಸಂಬಂಧಿತ ಇಲಾಖೆಗಳು, ಸ್ಥಳೀಯ ಸಂಸ್ಥೆಗಳು, ತಯಾರಕರು, ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸುವುದು. ಆದೇಶ ಉಲ್ಲಂಘಿಸುವವರ ವಿರುದ್ಧ ಜಾರಿಯಲ್ಲಿರುವ ಪರಿಸರ ಕಾನೂನುಗಳು ಹಾಗೂ ಸಂಬಂಧಿತ ನಿಯಮಗಳ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular