HomeKarnatakaನೂತನ ಸಚಿವರ ಪ್ರಮಾಣವಚನವಾಗಿ 3 ದಿನ ಕಳೆದರೂ ಖಾತೆ ಹಂಚಿಕೆ ಇಲ್ಲ; 'ಡಮ್ಮಿ ಸಿಎಂ' ಎಂದು...

ನೂತನ ಸಚಿವರ ಪ್ರಮಾಣವಚನವಾಗಿ 3 ದಿನ ಕಳೆದರೂ ಖಾತೆ ಹಂಚಿಕೆ ಇಲ್ಲ; ‘ಡಮ್ಮಿ ಸಿಎಂ’ ಎಂದು ಆರ್. ಅಶೋಕ್ ವ್ಯಂಗ್ಯ

ಬೆಂಗಳೂರು :   ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿ ಮೂರು ದಿನಗಳು ಕಳೆದರೂ ಇನ್ನೂ ಖಾತೆ ಹಂಚಿಕೆ ಆಗದಿರುವ ವಿಚಾರ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಬೆಳವಣಿಗೆಯನ್ನು ತೀವ್ರವಾಗಿ ಟೀಕಿಸಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್, ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ನಡೆಸಿದ್ದು, “ಇದು ಡಮ್ಮಿ ಸಿಎಂ ಸರ್ಕಾರ” ಎಂದು ವ್ಯಂಗ್ಯವಾಡಿದ್ದಾರೆ. ಸರ್ಕಾರದ ನಿರ್ಧಾರ ವಿಳಂಬದ ಬಗ್ಗೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಮುಗಿದು ಮೂರು ದಿನಗಳೇ ಕಳೆದಿವೆ… ಆದರೆ ‘ಖಾತೆ’ಗಳ ಸುಳಿವೇ ಇಲ್ಲ, ಪೇಮೆಂಟ್ ಕೋಟಾ ಸಚಿವರಿಗೆ ಖಾತೆ ಹಂಚಲು ಹೈಕಮಾಂಡ್‌ ಅನುಮತಿಗಾಗಿ ಕಾಯುತ್ತಿದ್ದೀರೋ ಅಥವಾ ನಿಗದಿಯಾದ ಪೇಮೆಂಟ್ ಇನ್ನೂ ‘ಖಾತೆ’ಗೆ (Account) ಜಮಾ ಆಗಿಲ್ಲವೆಂದು ತಡೆ ಹಿಡಿದಿದ್ದೀರೋ ಎಂದು ಅಶೋಕ್ ಲೇವಡಿ ಮಾಡಿದ್ದಾರೆ.

ಈ ಕುರಿತು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಆರ್. ಅಶೋಕ್ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಮುಗಿದು ಮೂರು ದಿನಗಳೇ ಕಳೆದಿವೆ… ಆದರೆ ‘ಖಾತೆ’ಗಳ ಸುಳಿವೇ ಇಲ್ಲ! ಡಮ್ಮಿ ಸಿಎಂ @DKShivakumar ಅವರೇ, ಪೇಮೆಂಟ್ ಕೋಟಾ ಸಚಿವರಿಗೆ ಖಾತೆ ಹಂಚಲು ಹೈಕಮಾಂಡ್‌ ಅನುಮತಿಗಾಗಿ ಕಾಯುತ್ತಿದ್ದೀರೋ ಅಥವಾ ನಿಗದಿಯಾದ ಪೇಮೆಂಟ್ ಇನ್ನೂ ‘ಖಾತೆ’ಗೆ (Account) ಜಮಾ ಆಗಿಲ್ಲವೆಂದು ತಡೆ ಹಿಡಿದಿದ್ದೀರೋ? ಇತ್ತ ದೆಹಲಿಯ ‘ಕಲೆಕ್ಷನ್‌ ಏಜೆಂಟ್‌’ ರಣದೀಪ್ ಸುರ್ಜೇವಾಲಾ ಸಾಹೇಬರು, ಅಸಮಾಧಾನಗೊಂಡ ಶಾಸಕರ ಮನೆ ಮನೆಗೆ ತೆರಳಿ ತೇಪೆ ಹಚ್ಚುವುದರಲ್ಲಿ ಹಾಗೂ ಕುಸಿಯುತ್ತಿರುವ ಸರ್ಕಾರಕ್ಕೆ ‘ಪ್ಯಾಚ್‌ ವರ್ಕ್‌’ ಹಾಕುವುದರಲ್ಲೇ ಬ್ಯುಸಿ! ಅಂದಹಾಗೆ, ಇನ್ನುಮುಂದೆ ಪ್ರತಿಯೊಂದು ಕಡತಕ್ಕೂ ಸಹಿ ಹಾಕಲು ಸುರ್ಜೇವಾಲಾ ಅವರೇ ಬೆಂಗಳೂರಿಗೆ ಬರಬೇಕಾ? ವಿಧಾನಸೌಧದಲ್ಲಿ ಅವರಿಗೆ ಒಂದು ಕೊಠಡಿ ಮೀಸಲಿಟ್ಟಿದ್ದೀರಾ? ಅಥವಾ ಎಲ್ಲಾ ಫೈಲ್‌ಗಳನ್ನ ದೆಹಲಿಗೆ ಸ್ಪೀಡ್‌ ಪೋಸ್ಟ್‌ನಲ್ಲಿ ಕಳುಹಿಸಿಕೊಡುವ ವ್ಯವಸ್ಥೆ ಮಾಡಿದ್ದೀರಾ ‘ರಬ್ಬರ್ ಸ್ಟ್ಯಾಂಪ್’ ಮುಖ್ಯಮಂತ್ರಿಗಳೇ? ರಾಜ್ಯದಲ್ಲಿ ನಿಜವಾದ ಸರ್ಕಾರ ನಡೀತಾ ಇದೆಯೋ ಅಥವಾ ದೆಹಲಿಯ ಹೈಕಮಾಂಡ್‌ನ ‘ರಿಮೋಟ್‌ ಕಂಟ್ರೋಲ್’ ಹೈಜಾಕ್ ನಾಟಕ ನಡೀತಾ ಇದೆಯೋ ಜನತೆಗಂತೂ ಸ್ಪಷ್ಟವಾಗಿ ಅರ್ಥವಾಗುತ್ತಿದೆ! ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular