HomeLive Newsಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ನಲ್ಲಿದ್ದ 20ಕ್ಕೂ ಹೆಚ್ಚು ಲ್ಯಾಪ್ ಟಾಪ್ ಗಳು, 6 ಎಸಿ...

ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ನಲ್ಲಿದ್ದ 20ಕ್ಕೂ ಹೆಚ್ಚು ಲ್ಯಾಪ್ ಟಾಪ್ ಗಳು, 6 ಎಸಿ ನಾಪತ್ತೆ: ಅಧಿಕಾರಿಗಳದ್ದೇ ಕೈವಾಡ ಶಂಕೆ

ಗದಗ: ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸರ್ಕಾರಿ ಸ್ವತ್ತುಗಳು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದು, ಅನುಮಾನಕ್ಕೆ ಕಾರಣವಾಗಿರುವ ಘಟನೆ ಗದಗ ಜಿಲ್ಲೆಯ ಸೂರ್ಯ ನಗರದಲ್ಲಿ ನಡೆದಿದೆ.

ಹಾಸ್ಟೆಲ್‌ನಲ್ಲಿ ಸೂಕ್ತ ಸ್ಥಿತಿಯಲ್ಲಿದ್ದ 20ಕ್ಕೂ ಹೆಚ್ಚು ಕಂಪ್ಯೂಟರ್‌ಗಳು ಹಾಗೂ 6 ಏರ್‌ ಕಂಡೀಷನರ್‌ಗಳು (AC) ನಾಪತ್ತೆಯಾಗಿದ್ದು, ಇಲಾಖೆಯ ಅಧಿಕಾರಿಗಳೇ ಇದನ್ನು ಲೂಟಿ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಗಂಭೀರ ಆರೋಪ ಮಾಡಿದ್ದಾರೆ.

ಬಡ ಮತ್ತು ದಲಿತ ವಿದ್ಯಾರ್ಥಿಗಳ ಡಿಜಿಟಲ್ ಶಿಕ್ಷಣಕ್ಕೆ ಅನುಕೂಲವಾಗಲೆಂದು ಸರ್ಕಾರ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಹೈಟೆಕ್ ಕಂಪ್ಯೂಟರ್ ಲ್ಯಾಬ್ ನಿರ್ಮಿಸಿತ್ತು. ಆದರೆ, ಈಗ ಲ್ಯಾಬ್‌ನಲ್ಲಿದ್ದ 20ಕ್ಕೂ ಹೆಚ್ಚು ಸುಸ್ಥಿತಿಯಲ್ಲಿದ್ದ ಕಂಪ್ಯೂಟರ್‌ಗಳು ಹಾಗೂ 6 ಎಸಿಗಳು ಮಾಯವಾಗಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾರ್ವಜನಿಕರ ತೆರಿಗೆ ಹಣದಲ್ಲಿ ಖರೀದಿಸಿದ ವಸ್ತುಗಳನ್ನು ಸ್ವತಃ ಅಧಿಕಾರಿಗಳೇ ತೆಗೆದುಕೊಂಡು ಹೋಗಿದ್ದಾರೆ ಎಂದು ಹಾಸ್ಟೆಲ್ ವಿದ್ಯಾರ್ಥಿಗಳು ದೂರಿದ್ದಾರೆ. ಅಭ್ಯಾಸ ಮಾಡಲು ಹಾಗೂ ಆನ್‌ಲೈನ್ ಕಲಿಕೆಗೆ ಕಂಪ್ಯೂಟರ್‌ಗಳೇ ಇಲ್ಲದೆ ವಸತಿ ನಿಲಯದ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಅಧಿಕಾರಿಗಳ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಆರೋಪಿ ಅಧಿಕಾರಿಗಳ ವಿರುದ್ಧ ತಕ್ಷಣವೇ ತನಿಖೆ ನಡೆಸಿ, ನಾಪತ್ತೆಯಾಗಿರುವ ಕಂಪ್ಯೂಟರ್ ಹಾಗೂ ಎಸಿಗಳನ್ನು ಮರಳಿ ಹಾಸ್ಟೆಲ್‌ಗೆ ತಂದು ಕೊಡುವಂತೆ ವಿದ್ಯಾರ್ಥಿಗಳು ಒತ್ತಾಯಿಸಿವೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular