HomeLatest Newsವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ ಆಯ್ಕೆ ಸಾಧ್ಯತೆ

ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ ಆಯ್ಕೆ ಸಾಧ್ಯತೆ

ಬೆಂಗಳೂರು- ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ತೀರ್ಮಾನಕ್ಕೆ ಬಂದಿದ್ದಾರೆ.

ಕಳೆದ ರಾತ್ರಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿರುವ ಕೊರಟ್ಟಿ ಅವರು ತಾವು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತವನ್ನು

ವ್ಯಕ್ತಪಡಿಸಿದ್ದಾರೆ ಎಂದು ಗೊತ್ತಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಸಚಿವರಾದ ಚೆಲುವರಾಯಸ್ವಾಮಿ, ಜಮೀರ್ ಅಹ್ಮದ್ ಖಾನ್, ಸತೀಶ್ ಜಾರಕಿಹೊಳಿ ಸೇರಿದಂತೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹಾಗೂ ಶಾಸಕರಾದ ಎನ್.ಎ. ಹರೀಸ್, ಡಾ. ರಂಗನಾಥ್, ಶರತ್ ಬಚ್ಚೇಗೌಡ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಉಪಸ್ಥಿತರಿದ್ದರು.

ಈ ಭೇಟಿಯಲ್ಲಿ ವಿಧಾನ ಪರಿಷತ್ ಸಭಾಪತಿ ಹುದ್ದೆಗೆ ಸಂಬಂಧಿಸಿದಂತೆ ಅಂತಿಮ ಹಂತದ ಚರ್ಚೆ ನಡೆದಿರುವುದು ತಿಳಿದುಬಂದಿದೆ.

ಮೂಲಗಳ ಪ್ರಕಾರ, ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ಗೆ ಈಗ ಸ್ಪಷ್ಟ ಬಹುಮತ ಇರುವ ಹಿನ್ನೆಲೆಯಲ್ಲಿ ಸಭಾಪತಿ ಹುದ್ದೆಯೂ ಆಡಳಿತ ಪಕ್ಷದ ಪಾಲಾಗಬೇಕೆಂಬ ಅಭಿಪ್ರಾಯವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಸವರಾಜ ಹೊರಟ್ಟಿ ಅವರ ಮುಂದೆ ವ್ಯಕ್ತಪಡಿಸಿದ್ದರು.

ರಾಜಕೀಯ ಪರಿಸ್ಥಿತಿಯನ್ನು ಮನಗಂಡ ಹೊರಟ್ಟಿ ಅವರು ಯಾವುದೇ ವಿವಾದಕ್ಕೆ ಅವಕಾಶ ನೀಡದೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಹೊಸ ಆಯ್ಕೆಗೆ ದಾರಿ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಒತ್ತಡ ಹೆಚ್ಚಾದ ಹಿನ್ನೆಲೆ

ಬಸವರಾಜ ಹೊರಟ್ಟಿ ಅವರು ಹಲವು ದಶಕಗಳಿಂದ ವಿಧಾನ ಪರಿಷತ್ ರಾಜಕೀಯದಲ್ಲಿ ಪ್ರಭಾವಿ ನಾಯಕರಾಗಿದ್ದು, ವಿವಿಧ ರಾಜಕೀಯ ಬೆಳವಣಿಗೆಗಳ ನಡುವೆಯೂ ಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದರು. ಆದರೆ ಕಳೆದ ಕೆಲ ತಿಂಗಳುಗಳಲ್ಲಿ ವಿಧಾನ ಪರಿಷತ್‌ನ ಸಂಖ್ಯಾಬಲ ಕಾಂಗ್ರೆಸ್ ಪರವಾಗಿ ಬದಲಾಗಿದ್ದರಿಂದ ಸಭಾಪತಿ ಹುದ್ದೆಯನ್ನು ತಮ್ಮ ಪಕ್ಷದ ಸದಸ್ಯರಿಗೆ ನೀಡುವ ಪ್ರಯತ್ನವನ್ನು ಕಾಂಗ್ರೆಸ್ ನಾಯಕತ್ವ ತೀವ್ರಗೊಳಿಸಿತ್ತು.

ಇತ್ತೀಚಿನ ಸಚಿವ ಸಂಪುಟ ವಿಸ್ತರಣೆ ಹಾಗೂ ಪಕ್ಷದೊಳಗಿನ ಅಸಮಾಧಾನವನ್ನು ಸಮತೋಲನಗೊಳಿಸಿದ ಬಳಿಕ, ಸರ್ಕಾರ ಮತ್ತು ಪಕ್ಷದ ಪ್ರಮುಖ ಹುದ್ದೆಗಳ ಮೇಲೂ ಕಾಂಗ್ರೆಸ್ ನಾಯಕತ್ವ ಗಮನ ಹರಿಸಿದೆ. ಅದರ ಭಾಗವಾಗಿಯೇ ವಿಧಾನ ಪರಿಷತ್ ಸಭಾಪತಿ ಸ್ಥಾನ ಬದಲಾವಣೆಯ ಪ್ರಕ್ರಿಯೆ ವೇಗ ಪಡೆದುಕೊಂಡಿದೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

ಸಲೀಂ ಸಭಾಪತಿ ಆಯ್ಕೆ ಸಾಧ್ಯತೆ

ಈ ನಡುವೆ, ಕಾಂಗ್ರೆಸ್ ಹಿರಿಯ ಸದಸ್ಯ ಸಲೀಂ ಅವರು ನೂತನ ವಿಧಾನ ಪರಿಷತ್ ಸಭಾಪತಿಯಾಗಿ ಆಯ್ಕೆಯಾಗುವ ಸಾಧ್ಯತೆಗಳು ಹೆಚ್ಚಿವೆ. ಪಕ್ಷದೊಳಗೆ ಅವರ ಹೆಸರಿನ ಬಗ್ಗೆ ವ್ಯಾಪಕ ಒಮ್ಮತ ಮೂಡಿರುವುದಾಗಿ ಮೂಲಗಳು ತಿಳಿಸಿವೆ. ಮುಂದಿನ ವಿಧಾನ ಪರಿಷತ್ ಕಲಾಪಕ್ಕೂ ಮುನ್ನವೇ ಹೊಸ ಸಭಾಪತಿಯ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳುವ ಸಾಧ್ಯತೆಯಿದೆ.

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ತನ್ನ ಸಂಖ್ಯಾಬಲಕ್ಕೆ ಅನುಗುಣವಾಗಿ ಸಭಾಪತಿ ಹುದ್ದೆಯನ್ನೂ ತನ್ನ ವಶಕ್ಕೆ ಪಡೆಯುವ ಮೂಲಕ ಸದನದ ಕಾರ್ಯನಿರ್ವಹಣೆಯಲ್ಲಿ ಮತ್ತಷ್ಟು ಬಲಿಷ್ಠ ಸ್ಥಾನವನ್ನು ಪಡೆದುಕೊಳ್ಳುವ ನಿರೀಕ್ಷೆ ಇದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್‌ನ ಸಂಘಟನಾ ಹಾಗೂ ಶಾಸನಾತ್ಮಕ ಹಿಡಿತವನ್ನು ಇನ್ನಷ್ಟು ಗಟ್ಟಿಗೊಳಿಸುವ ಹೆಜ್ಜೆಯಾಗಿ ಪರಿಗಣಿಸಲಾಗುತ್ತಿದೆ.

ಆದಾಗ್ಯೂ, ಬಸವರಾಜ ಹೊರಟ್ಟಿ ಅವರ ರಾಜೀನಾಮೆ ಹಾಗೂ ನೂತನ ಸಭಾಪತಿ ಆಯ್ಕೆ ಕುರಿತು ಸರ್ಕಾರ ಅಥವಾ ಕಾಂಗ್ರೆಸ್ ಪಕ್ಷದಿಂದ ಅಧಿಕೃತ ಪ್ರಕಟಣೆ ಹೊರಬರಬೇಕಿದ್ದು, ಅದರ ಬಳಿಕವೇ ಈ ರಾಜಕೀಯ ಬೆಳವಣಿಗೆಗೆ ಅಧಿಕೃತ ಮುದ್ರೆ ಬೀಳಲಿದೆ.

*ಸಲೀಂ ದಾರಿ ಸುಗಮ*

ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಕಾಂಗ್ರೆಸ್ಸಿಗೆ ನಾಯಕ ಸಲೀಂ ಹಾದಿ ಬಹುತೇಕ ಸುಗಮವಾಗಿದೆ. ಈಗಾಗಲೇ ಪಕ್ಷವು ಅವರನ್ನು ಮುಂದಿನ ವಿಧಾನ ಪರಿಷತ್ ಸಭಾಪತಿ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ.

ಮುಂದಿನ ಪ್ರಕ್ರಿಯೆ ಹೇಗೆ?

ಬಸವರಾಜ ಹೊರಟ್ಟಿ ಅವರು ವಿಧಾನ ಪರಿಷತ್ ಕಾರ್ಯದರ್ಶಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ ಬಳಿಕ ತರವಾಗಲಿರುವ ಸ್ಥಾನಕ್ಕೆ ಹಂಗಾಮಿ ಸಭಾಪತಿಯಾಗಿ ಹಿರಿಯ ಸದಸ್ಯರೊಬ್ಬರನ್ನು ನೇಮಕ ಮಾಡಲಾಗುತ್ತದೆ ಬಳಿಕ ವಿಧಾನಸಭಾ ಕಾರ್ಯದರ್ಶಿಗಳು ಚುನಾವಣಾ ಆಧಿ ಸೂಚನೆ ಹೊರಡಿಸುತ್ತಾರೆ

ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಹೊಂದಿರುವ ಕಾರಣ ಸಲೀಂ ಅಭ್ಯರ್ಥಿಯಾಗಿ ಕಣಕ್ಕಿಳಿದರೆ ಬಹುತೇಕ ಅವರೇ ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಗಳು ನಿಚ್ಚಳವಾಗಿದೆ.

ಉಮಾಶ್ರೀ ಉಪಸಭಾಪತಿ ಆಗಲಿದ್ದಾರೆಯೇ?

ಇದೆ ವೇಳೆ ಕಾಂಗ್ರೆಸ್ ನಾಯಕರು ಉಮಾಶ್ರೀ ಅವರು ಉಪಸಭಾಪತಿಯಾಗಿ ಆಯ್ಕೆಯಾಗುವ ಸಂಭವವಿದೆ.

ರಾಜಕೀಯ ಸಮೀಕರಣಗಳು ಬದಲಾಗದಿದ್ದರೆ ಉಮಾಶ್ರೀ ವಿಧಾನ ಪರಿಷತ್ನ ಉಪ ಸಭಾಪತಿ ಆಗಲಿದ್ದಾರೆ.

ಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿರುವ ಅವರು ಕೊನೆ ಕ್ಷಣದವರೆಗೂ ಸಚಿವ ಸ್ಥಾನ ಪಡೆಯಲು ಇನ್ನಿಲ್ಲದೆ

ಕಸರತ್ತು ನಡೆಸುತ್ತಿದ್ದಾರೆ ಆದರೆ ಪಕ್ಷವು ಅವರನ್ನು ಈಗಾಗಲೇ ಉಪ ಸಭಾಪತಿ ಸ್ಥಾನಕ್ಕೆ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ.

ಒಟ್ಟು ಸದಸ್ಯರು- 75

ಕಾಂಗ್ರೆಸ್ – 44

ಬಿಜೆಪಿ-24

ಜೆಡಿಎಸ್– 6

ಪಕ್ಷೇತರ- 1 ಸದಸ್ಯರು

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular