HomeKarnatakaBREAKING: ಗ್ರಾಹಕರ ಸೋಗಿನಲ್ಲಿ ಬಂದ ದುಷ್ಕರ್ಮಿಗಳಿಂದ ಚಿನ್ನದಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ: ದರೋಡೆಗೆ ಯತ್ನ

BREAKING: ಗ್ರಾಹಕರ ಸೋಗಿನಲ್ಲಿ ಬಂದ ದುಷ್ಕರ್ಮಿಗಳಿಂದ ಚಿನ್ನದಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ: ದರೋಡೆಗೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಿನ್ನದಂಗಡಿ ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಡಾಬಸ್​ಪೇಟೆಯಲ್ಲಿ ನಡೆದಿದೆ.

ಇಲ್ಲಿನ ಪ್ರೇಮ್ ಶಿವ ಜ್ಯುವೆಲ್ಲರಿ ಶಾಪ್ ಗೆ ಗ್ರಾಹಕರ ಸೋಗಿನಲ್ಲಿ ಕಾರಿನಲ್ಲಿ ಬಂದ 6 ಜನ ದುಷ್ಕರ್ಮಿಗಳ ತಂಡ, ಚಿನ್ನದಂಗಡಿ ದರೋಡೆಗೆ ಯತ್ನಿಸಿದೆ. ಈ ವೇಳೆ ಚಿನ್ನದಂಗಡಿ ಮಾಲೀಕ ವಿರೋಧ ವ್ಯಕ್ತಪಡಿಸಿದಾಗ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಮಾಲೀಕನ ಕಾಲಿಗೆ ಗುಂಡೇಟು ತಗುಲಿದೆ. ಗಾಯಾಳು ಚಿನ್ನದಂಗಡಿ ಮಾಲೀಕನನ್ನು ಪುನ್ನಾರಾಮ್​ ಎಂದು ಗುರುತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬುಲೆರೋ ವಾಹನದಲ್ಲಿ ಬಂದ ಆರು ಜನ ದುಷ್ಕರ್ಮಿಗಳಿಂದ ಈ ದಾಳಿ ನಡೆದಿದೆ. ಸದ್ಯ ಗಾಯಾಳು ಪುನ್ನರಾಮ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಚಿನ್ನದಂಗಡಿಯಲ್ಲಿ 2 ಜೀವಂತ ಗುಂಡುಗಳು ಪತ್ತೆಯಾಗಿವೆ. ಘಟನಾ ಸ್ಥಳಕ್ಕೆ ಡಾಬಸ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದರೋಡೆಕೋರರ ಪತ್ತೆಗೆ ಬಲೆ ಬೀಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular