HomeKarnatakaBREAKING: ಆ. 8, 9ರಂದು ನಿಗದಿಯಾಗಿದ್ದ ಕೃಷಿ ಅಧಿಕಾರಿಗಳ ಹುದ್ದೆ ನೇಮಕಾತಿ ಪರೀಕ್ಷೆ ಮುಂದೂಡಿಕೆ: ಸಚಿವ...

BREAKING: ಆ. 8, 9ರಂದು ನಿಗದಿಯಾಗಿದ್ದ ಕೃಷಿ ಅಧಿಕಾರಿಗಳ ಹುದ್ದೆ ನೇಮಕಾತಿ ಪರೀಕ್ಷೆ ಮುಂದೂಡಿಕೆ: ಸಚಿವ ಪ್ರಿಯಾಂಕ್ ಖರ್ಗೆ

ಆಗಸ್ಟ್ 8 ಮತ್ತು 9 ರಂದು ನಿಗದಿಪಡಿಸಲಾಗಿದ್ದ ಕೃಷಿ ಅಧಿಕಾರಿಗಳ ಹುದ್ದೆ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ವರದಿ ಬಂದ ಬಳಿಕ ಅದನ್ನು ಪರಾಮರ್ಶಿಸಿ, ಶೀಘ್ರದಲ್ಲಿಯೇ ಹೊಸ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಇದು ಆಳುವ ಸರ್ಕಾರವಲ್ಲ ಆಲಿಸುವ ಸರ್ಕಾರ. ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಹಿತಾಸಕ್ತಿ ರಕ್ಷಣೆ ಗ್ಯಾರಂಟಿ ಸರ್ಕಾರದ ಆದ್ಯತೆಯಾಗಿದೆ. ವಿದ್ಯಾರ್ಥಿಗಳು ಫ್ರೀಡಂ ಪಾರ್ಕ್‌ಗೆ ಬಂದು ಪ್ರತಿಭಟನೆ ಮಾಡಬಾರದು. ಅವರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರಬೇಕು, ಗ್ರಂಥಾಲಯಗಳಲ್ಲಿ ಇರಬೇಕು ಎಂಬುವುದು ನನ್ನ ವೈಯಕ್ತಿಕ ಆಶಯ ಎಂದು ತಿಳಿಸಿದ್ದಾರೆ.

ಈ ಹಿಂದಿನ ಸರ್ಕಾರದ ಯಾವುದೇ ಸ್ಪರ್ಧಾತ್ಮಕ ನೇಮಕಾತಿ ಪರೀಕ್ಷೆಗಳಲ್ಲಿ ಭ್ರಷ್ಟಾಚಾರ, ಅವ್ಯವಹಾರ ಹಾಗೂ ಪರೀಕ್ಷಾ ಅಕ್ರಮಗಳಿಂದ ನೇರ ಪರಿಣಾಮ ಅನುಭವಿಸಿದ್ದು ನಮ್ಮ ನಾಡಿನ ಲಕ್ಷಾಂತರ ಉದ್ಯೋಗಾಕಾಂಕ್ಷಿ ಯುವಜನತೆ. ಇದನ್ನು ತಡೆಗಟ್ಟಲು, ರಾಜಕೀಯವಾಗಿ ಮತ್ತು ಕಾನೂನಾತ್ಮಕ ಕ್ರಮಗಳ ಅನಿವಾರ್ಯತೆಯಿಂದ ನೇಮಕಾತಿ ಪರೀಕ್ಷೆಗಳಲ್ಲಿನ ಭ್ರಷ್ಟಾಚಾರವನ್ನು ತಡೆಯಲು ಸದನದ ಖಾಸಗಿ ಮಸೂದೆಯನ್ನು ಮಂಡಿಸಲಾಗಿತ್ತು. ಇದು ಯುವಜನತೆಯ ಕನಸುಗಳನ್ನು ರಕ್ಷಿಸುವ ಪ್ರಬಲ ಅಸ್ತ್ರವಾಗಿತ್ತು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ವಾಗ್ದಾನ ನೀಡಿದ್ದೆವು. ಅದರಂತೆ ಹಂತ ಹಂತವಾಗಿ ನೇಮಕಾತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ.

ಕಳೆದ 2021-22 ರ ಬಿಜೆಪಿ ಆಡಳಿತಾವಧಿಯಲ್ಲಿ ನೇಮಕಾತಿಗೆ ಆದೇಶ ಹೊರಡಿಸಲಾಗಿತ್ತು. ಅಂದು ನಿಯಮಗಳನ್ನು ಬದಲಾವಣೆ ಮಾಡಿದ ಪರಿಣಾಮ ಸಾವಿರಾರು ಕೃಷಿ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದು, ನಿರಂತರವಾಗಿ ಪ್ರತಿಭಟನೆ ನಡೆಸುತ್ತಾ ಬಂದಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿದ್ಯಾರ್ಥಿಗಳ ನಾಲ್ಕು ಬೇಡಿಕೆಗಳನ್ನು ಪೂರೈಸುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.

ಮುಖ್ಯಮಂತ್ರಿಗಳ ಸೂಚನೆಯಂತೆ ತಜ್ಞರ ವಿಶೇಷ ಸಮಿತಿಯನ್ನು ರಚಿಸಿ, 15 ದಿನಗಳ ಒಳಗೆ ವರದಿ ಪಡೆದು ಸಿ ಆಂಡ್ ಆರ್ ಕುರಿತು ನಿಯಮಾನುಸಾರ ಅಗತ್ಯ ಬದಲಾವಣೆಗಳನ್ನು ತಂದು, ಪ್ರಸ್ತುತದ ನೇಮಕಾತಿಗೆ ಅಳವಡಿಸಿ ಆದೇಶ ಹೊರಡಿಸಲಾಗುವುದು. ಈ ಸಲುವಾಗಿ ಆಗಸ್ಟ್ 8 ಮತ್ತು 9 ರಂದು ನಿಗದಿಪಡಿಸಲಾಗಿದ್ದ ಕೃಷಿ ಅಧಿಕಾರಿಗಳ ಹುದ್ದೆಯ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ವರದಿ ಬಂದ ಬಳಿಕ ಅದನ್ನು ಪರಾಮರ್ಶಿಸಿ, ಶೀಘ್ರದಲ್ಲಿಯೇ ಹೊಸ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗುವುದು. ಉದ್ಯೋಗಾಕಾಂಕ್ಷಿಗಳ ಭವಿಷ್ಯವನ್ನು ನಿರ್ಮಾಣ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಅದಕ್ಕಾಗಿ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇವೆ.  ಯುವಜನತೆಯ ಆಶೋತ್ತರಗಳನ್ನು ಪೂರೈಸುವುದು ನಮ್ಮ ಗ್ಯಾರಂಟಿ ಸರ್ಕಾರದ ಆದ್ಯತೆಯಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular