HomeKarnatakaಹೊಸ ನ್ಯಾಯಬೆಲೆ ಅಂಗಡಿಗಳ ತೆರೆಯಲು ಅರ್ಜಿ ಆಹ್ವಾನ

ಹೊಸ ನ್ಯಾಯಬೆಲೆ ಅಂಗಡಿಗಳ ತೆರೆಯಲು ಅರ್ಜಿ ಆಹ್ವಾನ

ಬೆಂಗಳೂರು: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣದ ಆದೇಶದನ್ವಯ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಹ ಸಹಕಾರ ಸಂಘ ಸಂಸ್ಥೆಗಳು ಹಾಗೂ ವ್ಯಕ್ತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬೆಂಗಳೂರು ದಕ್ಷಿಣ ತಾಲ್ಲೂಕು ವ್ಯಾಪ್ತಿಯಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಪ್ರಸ್ತಾಪಿಸಿರುವ ಗುಳಕಮಲೆ ಪ್ರದೇಶದಲ್ಲಿ ಒಟ್ಟು ಪಡಿತರ ಚೀಟಿ- 525 ಇಲ್ಲಿ ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿಗಳನ್ನು ನಿಯೋಜಿಸಲಾಗಿದೆ.

ಅರ್ಜಿ ಸಲ್ಲಿಸಲು ನಿಗದಿತ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿದ ದಾಖಲೆಗಳೊಂದಿಗೆ ಜಂಟಿ ನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಬೆಂಗಳೂರು ನಗರ ಜಿಲ್ಲೆ ಕಚೇರಿಗೆ ಆಗಸ್ಟ್ 30 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22215594, ಇಮೇಲ್ [email protected] ಅನ್ನು ಸಂಪರ್ಕಿಸಬಹುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಕ್ಷಮ ಪ್ರಾಧಿಕಾರಿ ಹಾಗೂ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಆಹ್ವಾನ

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ  ವತಿಯಿಂದ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣದ ಆದೇಶದನ್ವಯ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಹ ಸಹಕಾರ ಸಂಘ ಸಂಸ್ಥೆಗಳು ಹಾಗೂ ವ್ಯಕ್ತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬೆಂಗಳೂರು ಪೂರ್ವ ತಾಲ್ಲೂಕು ವ್ಯಾಪ್ತಿಯಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಪ್ರಸ್ತಾಪಿಸಿರುವ ನಿಂಬೇಕಾಯಿಪುರ ಪ್ರದೇಶದಲ್ಲಿ ಒಟ್ಟು ಪಡಿತರ ಚೀಟಿ- 643 ಇಲ್ಲಿ ಹೊಸ ನ್ಯಾಯಬೆಲೆ ಅಂಗಡಿಗೆ ಪಡಿತರ ಚೀಟಿಗಳನ್ನು ನಿಯೋಜಿಸಲಾಗಿದೆ.

ಅರ್ಜಿ ಸಲ್ಲಿಸಲು ನಿಗದಿತ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿದ ದಾಖಲೆಗಳೊಂದಿಗೆ ಜಂಟಿ ನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಬೆಂಗಳೂರು ನಗರ ಜಿಲ್ಲೆ ಕಚೇರಿಗೆ ಆಗಸ್ಟ್ 30 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22215594, ಇಮೇಲ್ [email protected] ಅನ್ನು ಸಂಪರ್ಕಿಸಬಹುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಕ್ಷಮ ಪ್ರಾಧಿಕಾರಿ ಹಾಗೂ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular