HomeKarnatakaಮಾಡೆಲಿಂಗ್ ನಲ್ಲಿ ಗುರುತಿಸಿಕೊಂಡಿದ್ದ ಯುವತಿ ಕೃತಿ ಬಂಗೇರಾ ಆತ್ಮಹತ್ಯೆಗೆ ಶರಣು

ಮಾಡೆಲಿಂಗ್ ನಲ್ಲಿ ಗುರುತಿಸಿಕೊಂಡಿದ್ದ ಯುವತಿ ಕೃತಿ ಬಂಗೇರಾ ಆತ್ಮಹತ್ಯೆಗೆ ಶರಣು

ಉಡುಪಿ: ಮಾಡೆಲಿಂಗ್ ನಲ್ಲಿ ಗುರುತಿಸಿಕೊಂಡಿದ್ದ ಕರಾವಳಿ ಭಾಗದ ಯುವತಿಯೊಬ್ಬರು ಏಕಾಏಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ವ್ಯಾಪ್ತಿಯ ಕಲ್ಮಾಡಿಯಲ್ಲಿ ನಡೆದಿದೆ.

ಕರಾವಳಿ ಜಿಲ್ಲೆಗಳಲ್ಲಿ ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರಾಗಿದ್ದ ಮಿಸ್ ಮೊಗವೀರಾ ಖ್ಯಾತಿಯ ಪ್ರೀಲ್ಯಾನ್ಸ್ ಮಾಡೆಲ್ ಕೃತಿ ಬಂಗೇರಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾಡೆಲಿಂಗ್ ಕ್ಷೇತ್ರದಲ್ಲಿ ನೂರಾರು ಕನಸುಗಳನ್ನು ಕಂಡಿದ್ದ 27 ವರ್ಷದ ಕೃತಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ದುರಂತ ಅಂತ್ಯ ಕಂಡಿದ್ದಾರೆ.

ಕೃತಿ ಮಾಡೆಲಿಂಗ್ ಜೊತೆಗೆ ಉಡುಪಿಯ ಕಡಿಯಾಳಿ ಬಳಿಯ ಖಾಸಗಿ ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಐದು ತಿಂಗಳಿಂದ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದಳು ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಾಯಿ ರತ್ನಾ ನಿನ್ನೆ ಕೆಲಸಕ್ಕೆಂದು ಮಲ್ಪೆಗೆ ತೆರಳಿದ್ದರು. ಕೃತಿ ಸಹೋದರಿ ಕೂಡ ಕೆಲಸದ ಕಾರಣ ಉಡುಪಿಗೆ ಹೋಗಿದ್ದರು. ಮಧ್ಯಾಹ್ನ ಸುಮಾರು 1 ಗಂಟೆಗೆ ತಾಯಿ ರತ್ನಾ ಮನೆಗೆ ಬಂದಾಗ ಕೃತಿ ತನ್ನ ತಾಯಿಯನ್ನು ಮನೆಯ ಹೊರಗೆ ಕಳುಹಿಸಿ ಒಳಗಿನಿಂದ ಬಾಗಿಲು ಹಾಕಿಕೊಂಡಿದ್ದರು. ಬಾಗಿಲು ತಟ್ಟಿದರೂ ಯಾವುದೇ ಪ್ರತಿಕ್ರಿಯೆ ಬರದ ಹಿನ್ನೆಲೆಯಲ್ಲಿ ಅವರು ತಮ್ಮ ಸಹೋದರ ಚಂದ್ರ ಅವರಿಗೆ ಕರೆ ಮಾಡಿ ಸ್ಥಳಕ್ಕೆ ಕರೆಸಿದ್ದಾರೆ. ಬಳಿಕ ಬಾಗಿಲು ಒಡೆದು ಮನೆಯೊಳಗೆ ಪ್ರವೇಶಿಸಿದಾಗ, ಬೆಡ್‌ ರೂಮ್‌ನಲ್ಲಿ ಫ್ಯಾನ್‌ಗೆ ವೇಲ್ ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಕೃತಿ ಶವವಾಗಿ ಪತ್ತೆಯಾಗಿದ್ದಾರೆ.

ಕೃತಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೃತಿ ಕಳೆದ ಹಲವಾರು ದಿನಗಳಿಂದ ಒತ್ತಡದಲ್ಲಿದ್ದಳು ಎನ್ನಲಾಗಿದ್ದು, ಇದೆ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು (UDR) ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular