HomeKarnatakaಬೆಂಗಳೂರಿನ ಪಂಚತಾರಾ ಹೋಟೆಲ್ ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ

ಬೆಂಗಳೂರಿನ ಪಂಚತಾರಾ ಹೋಟೆಲ್ ಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ

ಬೆಂಗಳೂರು: ಬೆಂಗಳೂರಿನ ಹಲವು ಪ್ರತಿಷ್ಠಿತ ಪಂಚತಾರಾ ಹೋಟೆಲ್‌ಗಳ ಮೇಲೆ ಆರೋಗ್ಯ ಇಲಾಖೆಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ನಿಯಮಗಳ ಉಲ್ಲಂಘನೆ ದೂರುಗಳ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಚಿವ ಯು.ಟಿ.ಖಾದರ್ ಅವರ ಸೂಚನೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರಿನ ಲಲತ್ ಅಶೋಕ್ , ಶಾಂಗ್ರಿಲ್ಲಾ ಹೋಟೆಲ್ ಸೇರಿದಂತೆ ಹಲವು ಪ್ರತಿಷ್ಠಿತ ಹೋಟೆಲ್ ಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಹೋಟೆಲ್ ನ ಆಹಾರ, ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೋಟೆಲ್ ಗಳ ಅಡುಗೆ ಮನೆ, ಆಹಾರ ಉಣಬಡಿಸುವ ಸ್ಥಳ, ಸ್ಟೋರೂಮ್ ಸೇರಿದಂತೆ ಎಲ್ಲವನ್ನೂ ಸೂಕ್ಷವಾಗಿ ತಪಾಸಣೆ ನಡೆಸಲಾಗುತ್ತಿದೆ. ಲಲಿತ್ ಹೋಟೆಲ್ ನಲ್ಲಿ ಫುಡ್ ಸೇಫ್ಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ ವೇಳೆ ಹೋಟೆಲ್‌ನಲ್ಲಿ ಅವಧಿ ಮೀರಿದ 31 ಲೀಟರ್ ಹಾಲು ಪತ್ತೆಯಾಗಿದೆ.

ಹೋಟೆಲ್‌ಗಳಲ್ಲಿ ಗ್ರಾಹಕರಿಗೆ ನೀಡುವ ಆಹಾರದ ಗುಣಮಟ್ಟ ಹಾಗೂ ಬಳಸುವ ಕಚ್ಚಾ ವಸ್ತುಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ರಾಜ್ಯಾದ್ಯಂತ ಹೋಟೆಲ್‌ಗಳ ಆಹಾರ ಸುರಕ್ಷತೆ ಬಗ್ಗೆ ಪರಿಶೀಲನೆ ಮುಂದುವರಿಯಲಿದ್ದು, ನಿಯಮ ಉಲ್ಲಂಘನೆ ಕಂಡುಬಂದರೆ ಸಂಬಂಧಪಟ್ಟ ಹೋಟೆಲ್‌ಗಳ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular