ಕೊಪ್ಪಳ: ಕೊಪ್ಪಳ ಜಿಲ್ಲಾ ಕಾಂಗ್ರೆಸ್ನಲ್ಲಿ ಮತ್ತೆ ಅಸಮಾಧಾನ ಸ್ಫೋಟಗೊಂಡಿದ್ದು, ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.
ಸಚಿವ ಶಿವರಾಜ್ ತಂಗಡಗಿ, ಬಸವರಾಜ ರಾಯರೆಡ್ಡಿ ಹಾಗೂ ಶಾಸಕ ರಾಘವೇಂದ್ರ ಹಿಟ್ನಾಳ ವಿರುದ್ಧ ಗಂಭೀರ ಆರೋಪ ಮಾಡಿರುವ ಇಕ್ಬಾಲ್ ಅನ್ಸಾರಿ, ಚರ್ಚೆಗೆ ಬಹಿರಂಗ ವೇದಿಕೆಗೆ ಬರುವಂತೆ ಸವಾಲು ಹಾಕಿದದರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ವಿಚಾರ ಬಹಿರಂಗಪಡಿಸುವುದಾಗಿ ಎಚ್ಚರಿಸಿದ್ದಾರೆ.
ಬೆಂಗಳೂರಿನಿಂದ ಆಡಿಯೋ ಮೂಲಕ ಮಾತನಾಡಿರುವ ಅನ್ಸಾರಿ, ತಮ್ಮ ಸೋಲಿಗೆ ಈ ನಾಯಕರೇ ಕಾರಣ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸಚಿವ ಶಿವರಾಜ್ ತಂಗಡಗಿ, ‘ಇತರರ ಬಗ್ಗೆ ಮಾತನಾಡುವ ಬದಲು ಇಕ್ಬಾಲ್ ಅನ್ಸಾರಿ ಜನರ ಮಧ್ಯೆ ಹೋಗಿ ಗೆದ್ದು ತೋರಿಸಲಿ’ ಎಂದು ನೀಡಿದ್ದ ಹೇಳಿಕೆಗೆ ಅನ್ಸಾರಿ ತಿರುಗೇಟು ನೀಡಿದ್ದಾರೆ. ಗಂಗಾವತಿಗೆ ಬಂದು ಮಾಧ್ಯಮಗೋಷ್ಠಿ ನಡೆಸಿ ತಮ್ಮ ವಿರುದ್ಧ ಮಾತನಾಡುತ್ತಿರುವುದು ಏಕೆ? ಎಂದು ಪ್ರಶ್ನಿಸಿದದರೆ. ಬಹಿರಂಗ ವೇದಿಕೆಗೆ ಬನ್ನಿ, ಯಾರು ಯಾರಿಗೆ ಮೋಸ ಮಾಡಿದ್ದಾರೆ ಎಂಬುದು ಗೊತ್ತಾಗಲಿದೆ ಎಂದು ಸವಾಲು ಹಾಕಿದ್ದಾರೆ.

