HomeLatest Newsಕಾವೇರಿ ವಿಚಾರದಲ್ಲಿ ತಮ್ಮ ಸರ್ಕಾರದ ಕಾನೂನು ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ; ಮೇಕೆದಾಟು ಕುರಿತು ಸರ್ವಪಕ್ಷ...

ಕಾವೇರಿ ವಿಚಾರದಲ್ಲಿ ತಮ್ಮ ಸರ್ಕಾರದ ಕಾನೂನು ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ; ಮೇಕೆದಾಟು ಕುರಿತು ಸರ್ವಪಕ್ಷ ಸಭೆಯ ಅಗತ್ಯವಿಲ್ಲ: ಮೌನಮುರಿದ ತಮಿಳುನಾಡು ಸಿಎಂ ವಿಜಯ್

ಚೆನ್ನೈ: ಕಾವೇರಿ ನದಿ ನೀರು ಹಂಚಿಕೆ ವಿವಾದ ಹಾಗೂ ಮೇಕೆದಾಟು ಯೋಜನೆ ವಿಚಾರವಾಗಿ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ತಮಿಳುನಾಡು ವಿಧಾನಸಭೆಯಲ್ಲಿ ಮಾತನಾಡಿದ್ದಾರೆ. ಈ ಬಗ್ಗೆ ತಮ್ಮ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಕಾವೇರಿ ನದಿ ನೀರು ವಿಚಾರ ಹಾಗೂ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆ ನಿರ್ಮಾರಣಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿಯೂ ಸರ್ವಪಕ್ಷಗಳ ಸಭೆ ಕರೆಯಬೇಕು ಎಂದು ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಒತ್ತಾಯಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕರ್ನಾಟಕ ಯೋಜನೆ ಮುಂದುವರಿಸುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ಎಲ್ಲ ಪಕ್ಷಗಳು ಒಗ್ಗಟ್ಟಿನಿಂದ ನಿಲ್ಲಬೇಕು ಎಂದು ಉದಯನಿಧಿ ಸ್ಟಾಲಿನ್ ಒತ್ತಾಯಿಸಿದರು. ಮೇಕೆದಾಟು ಜಲವಿವಾದದ ಕುರಿತು ಸರ್ವಪಕ್ಷ ಸಭೆ ಕರೆಯಬೇಕು ಹಾಗೂ ತಮಿಳುನಾಡಿನ ಕೃಷಿ ಮತ್ತು ನೀರಾವರಿ ಹಕ್ಕುಗಳ ರಕ್ಷಣೆಗೆ ಒಗ್ಗಟ್ಟಿನ ಹೋರಾಟ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಅಲ್ಲದೆ, ಕರ್ನಾಟಕ ಪ್ರವಾಸ ಕೈಗೊಳ್ಳುವ ಬಗ್ಗೆ ಸಿಎಂ ವಿಜಯ್ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಜೋಸೆಫ್ ವಿಜಯ್, ಕಾವೇರಿ ವಿಚಾರದಲ್ಲಿ ತಮ್ಮ ಸರ್ಕಾರದ ಕಾನೂನು ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಆದರೆ, ಸಕಾರಾತ್ಮಕ ಫಲಿತಾಂಶ ಸಿಗುವ ಸಾಧ್ಯತೆಯನ್ನು ಪರಿಗಣಿಸಿ, ಬೆಂಗಳೂರಿಗೆ ತೆರಳಿ ಕರ್ನಾಟಕದ ನಾಯಕರೊಂದಿಗೆ ಮಾತುಕತೆ ನಡೆಸುವ ಪ್ರಯತ್ನ ಮಾಡಬೇಕು ಎಂಬ ಆಲೋಚನೆ ತಮ್ಮಲ್ಲಿತ್ತು ಎಂದು ತಿಳಿಸಿದ್ದಾರೆ.

1969ರಿಂದ ತಮಿಳುನಾಡು ಕಾವೇರಿ ವಿವಾದವನ್ನು ಹೇಗೆ ಎದುರಿಸಿದೆ ಎಂಬುದನ್ನು ವಿವರಿಸಿದರು. ಆರಂಭದಲ್ಲಿ ಮಾತುಕತೆಗೆ ಆದ್ಯತೆ ನೀಡಲಾಗಿತ್ತು. ಬಳಿಕ ಕಾನೂನು ಹೋರಾಟದ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವ ನಿಲುವು ಮುಂದುವರಿದಿದೆ ಎಂದರು.

ಇದೇ ವೇಳೆ ಮೇಕೆದಾಟು ಅಣೆಕಟ್ಟು ಯೋಜನೆ ಮತ್ತು ಕಾವೇರಿ ನೀರಿನ ವಿವಾದದ ಕುರಿತು ಸರ್ವಪಕ್ಷ ಸಭೆಯ ಅಗತ್ಯವಿಲ್ಲ. ಕೀಳುಮಟ್ಟದ ರಾಜಕೀಯ ಮಾಡಬೇಡಿ ಎಂದು ವಿಪಕ್ಷಗಳಿಗೆ ಟಾಂಗ್‌ ನೀಡಿದ್ದಾರೆ. ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲು ತಾವು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮೇಕೆದಾಟು ಅಣೆಕಟ್ಟಿನ ವಿರುದ್ಧ ವಿಧಾನಸಭೆ ನಿರ್ಣಯ ಅಂಗೀಕರಿಸಿದೆ. ಯೋಜನೆಯನ್ನು ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ. ತಮಿಳುನಾಡು ರೈತರ ಹಿತಾಸಕ್ತಿಗಳನ್ನು ಕಾಪಾಡಲು ನಾವು ಏನು ಬೇಕಾದರೂ ಮಾಡುತ್ತೇವೆ ಎಂದು ತಿಳಿಸಿದರು. ನಂತರ ಅವರು ಡಿಎಂಕೆ ವಿರುದ್ಧ ತಿರುಗಿ ಬಿದ್ದರು. 1969 ರಲ್ಲಿ ಅವರ ಸರ್ಕಾರವೇ ಕರ್ನಾಟಕ ಯೋಜನೆಗೆ ಮೊದಲು ಅನುಮತಿ ನೀಡಿತು ಎಂದರು.

ಕಾವೇರಿ ಹಾಗೂ ಮೇಕೆದಾಟು ವಿಚಾರವಾಗಿ ನಮ್ಮ ನೆರೆಯ ರಾಜ್ಯದೊಂದಿಗೆ ಮಾತುಕತೆ ನಡೆಸುವ ಬಗ್ಗೆ ನಾನು ಯೋಚಿಸಿದೆ. ಅಂತಹ ಪ್ರಯತ್ನದಿಂದ ನಮಗೆ ಅವಮಾನವಾದರೆ ಎಂದು ಕೆಲವರು ಹೇಳಿದರು. ಅದು ಸಂಭವಿಸಿದರೂ, ತಮಿಳುನಾಡಿನ ಜನರಿಗಾಗಿ ನಾನು ಅವಮಾನ ಅನುಭವಿಸಲು ಸಿದ್ಧನಿದ್ದೇನೆ ಎಂದು ಸಿಎಂ ಸ್ಪಷ್ಟಪಡಿಸಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular