ಬಳ್ಳಾರಿ: ಮೈನಿಂಗ್ ಲಾರಿ ಹರಿದು ಇಬ್ಬರು ಪಾದಚಾರಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವೆಂಕಟಗಿರಿಯಲ್ಲಿ ನಡೆದಿದೆ.
ಹೊಸಪೇಟೆ ನಿವಾಸಿಗಳಾದ ಕುಮಾರ್ (34) ಹಾಗೂ ಮಂಜುನಾಥ್ (38) ಮೃತ ದುರ್ದೈವಿಗಳು. ರಸ್ತೆ ಬದಿ ನಡೆದು ಹೋಗುತ್ತಿದ್ದ ವೇಳೆ ಮೈನಿಂಗ್ ಲಾರಿ ಡಿಕ್ಕಿ ಹೊಡೆದಿದೆ. ಹಿಂಬದಿಯಿಂದ ಬಂದ ಮೈನಿಂಗ್ ಲಾರಿ ಇಬ್ಬರು ಪಾದಚಾರಿಗಳ ಮೇಲೆಯೇ ಹರಿದು ಹೋಗಿದೆ.
ಅಪಘಾತದ ಭೀಕರತೆಗೆ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಲಾರಿ ಚಾಲಕನ ಅಜಾಗರೂಕತೆಯೇ ದುರಂತಕ್ಕೆ ಕಾರಣವಾಗಿದೆ. ಸಂಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

