HomeKarnatakaಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ ಆರೋಪ: ಗೋಪಾಲ್ ಜೋಶಿ ವಿರುದ್ಧ ಎಫ್ಐಆರ್

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ ಆರೋಪ: ಗೋಪಾಲ್ ಜೋಶಿ ವಿರುದ್ಧ ಎಫ್ಐಆರ್

ಧಾರವಾಡ: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಕೊಲೆ ಮಾಡಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ ಗೋಪಾಲ್ ಜೋಶಿ ವಿರುದ್ಧ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.

ಆ.6ರಂದು ವಿದ್ಯಾಗಿರಿ ಪೊಲೀಸ್‌ ಠಾಣೆಯಲ್ಲಿ ಸಂತ್ರಸ್ತ ಮಹಿಳೆ ದೂರ ದಾಖಲಿಸಿದ್ದು, ಅವರ ದೂರಿನ ಆಧಾರದ ಗೋಪಾಲ್ ಜೋಶಿ ವಿರುದ್ಧ ಕೇಸ್ ದಾಖಲಿಸಲಾಗಿದೆ.

ನನಗೆ ದೀರ್ಘಕಾಲದಿಂದ ಮಾನಸಿಕವಾಗಿ ಮತ್ತು ಆರ್ಥಿಕವಾಗಿ ಕಿರುಕುಳ ನೀಡುತ್ತಿದ್ದು, ತಮ್ಮ ಕುಟುಂಬಕ್ಕೂ ತೊಂದರೆ ಉಂಟು ಮಾಡಿದ್ದಾಗಿ ಮಹಿಳೆ ಗೋಪಾಲ್ ಜೋಶಿ ವಿರುದ್ಧ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2022ರ ಮೇ 29ರಂದು ಧಾರವಾಡದ ಮಾಳಮಡ್ಡಿಯ ಅಪಾರ್ಟೆಂಟ್ ವೊಂದರಲ್ಲಿ ನನ್ನ ಮೇಲೆ ಆರೋಪಿ ಜೋಶಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಘಟನೆಯ ಕುರಿತು ಎಲ್ಲಾದರೂ ಬಾಯಿಬಿಟ್ಟರೆ ಕೊಲೆ ಮಾಡಿಸುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿದ್ದಾರೆ. ತಮ್ಮ ಮೇಲಾದ ದೌರ್ಜನ್ಯ ಬಗ್ಗೆ ಕುಟುಂಬದವರಿಗೆ ತಿಳಿಸಿದಾಗ, ದೂರು ದಾಖಲಿಸಲು ಕುಟುಂಬಸ್ಥರು ಸೂಚಿಸಿದ್ದು, ಅದರಂತೆ ತಡವಾಗಿ ದೂರು ದಾಖಲಿಸಿರುವುದಾಗಿ ಎಂದು ಮಹಿಳೆ ದೂರು ನೀಡಿದ್ದಾರೆ.

https://www.instagram.com/p/DbvrkftDZfc/?igsh=b3cyY2RhdGo3Y3Rk

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular