ರಾಮನಗರ: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿದ್ದ ಸೈನ್ ಬೋರ್ಡ್ ಗೆ ಕೇರಳ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಪಲ್ಟಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಾಮನಗರ ತಾಲೂಕಿನ ಆವರಗೆರೆ ಗೇಟ್ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಬಸ್ ನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇರಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೇರಳ ಸಾರಿಗೆ ಬಸ್ ಅಪಘಾತಕ್ಕೀಡಾಗಿದೆ. ಅಪಘಾತದಿಂದ ಕೆಲಕಾಲ ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸಂಚಾರಕ್ಕೆ ಅಡಚಣೆಯಾಗಿತ್ತು, ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

