HomeKarnatakaಪ್ರಭಾವಿ ಖಾತೆಗಾಗಿ ಸಚಿವರ ನಡುವೆ ಜಿದ್ದಾಜಿದ್ದಿ: ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಸಿಎಂ ಡಿ.ಕೆ.ಶಿವಕುಮಾರ್ ಚರ್ಚೆ

ಪ್ರಭಾವಿ ಖಾತೆಗಾಗಿ ಸಚಿವರ ನಡುವೆ ಜಿದ್ದಾಜಿದ್ದಿ: ಮಾಜಿ ಸಿಎಂ ಸಿದ್ದರಾಮಯ್ಯ ಜೊತೆ ಸಿಎಂ ಡಿ.ಕೆ.ಶಿವಕುಮಾರ್ ಚರ್ಚೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಇದೀಗ ಖಾತೆ ಹಂಚಿಕೆ ಕಸರತ್ತು ಆರಂಭವಾಗಿದೆ. ನೂತನ ಸಚಿವರು ಪ್ರಭಾವಿ ಖಾತೆಗಾಗಿ ಲಾಭಿ ಆರಂಭಿಸಿದ್ದಾರೆ. ಯಾರಿಗೆ ಯಾವ ಖಾತೆ ನೀಡಬೇಕೆಂಬುದೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸವಾಲಾಗಿದೆ.

ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವ ಸ್ಥಾನ ಕೈತಪ್ಪಿದ ಶಾಸಕರ ಅಸಮಾಧಾನ ತೀವ್ರಗೊಂಡಿದ್ದು, ಜಿಲ್ಲೆ ಜಿಲ್ಲೆಗಳಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಒಂದೆಡೆ ಅಸಮಾಧಾನಗೊಂಡಿರುವ ಶಾಸಕರ ಮನವೊಲಿಸುವ ಯತ್ನ ನಡೆಯುತ್ತಿದ್ದರೆ ಮತ್ತೊಂದೆಡೆ ನೂತನ ಸಚಿವರಿಗೆ ಖಾತೆ ಹಂಚಿಕೆ ಕಸರತ್ತು ಆರಂಭವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಬಲ ಖಾತೆಗಳಿಗಾಗಿ ಸಚಿವರ ಮಧ್ಯೆ ಜಿದ್ದಾಜಿದ್ದಿ ಶುರುವಾಗಿದ್ದು, ಈ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸಿಎಂ ಡಿ.ಕೆ.ಶಿವಕುಮಾರ್‌, ಮಾತುಕತೆ ನಡೆಸಿದ್ದಾರೆ. ಸಿದ್ದರಾಮಯ್ಯ ಜತೆ ಚರ್ಚೆ ನಡೆಸಿದ ನಂತರ, ಡಿ.ಕೆ ಶಿವಕುಮಾರ್ ವರಿಷ್ಠರನ್ನು ಭೇಟಿಯಾಗಲು ದೆಹಲಿಗೆ ತೆರಳುತ್ತಿದ್ದಾರೆ.

ಹೊಸದಾಗಿ ಸಚಿವರಾದವರು ಇಂಥದ್ದೇ ಖಾತೆ ಬೇಕೆಂದು ಪಟ್ಟು ಹಿಡಿದಿದ್ದರೆ, ಮೊದಲ ಸುತ್ತಿನಲ್ಲಿ ಸಚಿವರಾದವರು ತಮ್ಮ ಖಾತೆ ಬದಲಾವಣೆಗೆ ಬೇಡಿಕೆ ಇಡುತ್ತಿದ್ದಾರೆ. ಬಸವರಾಜ್ ರಾಯರೆಡ್ಡಿ ಹಣಕಾಸು ಖಾತೆ ಕೇಳಿದ್ದರೆ, ಸಮಾಜ ಕಲ್ಯಾಣ ಇಲಾಖೆಗಾಗಿ ಕೆ.ಹೆಚ್. ಮುನಿಯಪ್ಪ, ಪಿ.ಎಂ. ನರೇಂದ್ರಸ್ವಾಮಿ, ಶಿವರಾಜ್ ತಂಗಡಗಿ ಮಧ್ಯೆ ಸ್ಪರ್ಧೆ ಏರ್ಪಟ್ಟಿದೆ. ಸಚಿವ ಮುನಿಯಪ್ಪ ರಾಹುಲ್ ಗಾಂಧಿ ಎದುರು ಆಹಾರ ಖಾತೆ ಬದಲಾಗಿ ತಮಗೆ ಸಮಾಜಕಲ್ಯಾಣ ಖಾತೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಈ ನಡುವೆ ಯಾವ ಖಾತೆ ಕೊಟ್ಟರೂ ನಿಭಾಯಿಸುವುದಾಗಿ ಸಚಿವ ಜಮೀರ್ ಅಹ್ಮದ್ ಹಾಗೂ ಹೆಚ್.ಸಿ.ಬಾಲಕೃಷ್ಣ ಹೇಳಿಕೆ ನೀಡಿದ್ದಾರೆ. ಒಟ್ಟಾರೆ ಸಿಎಂ, ಹೈಕಾಂಡ್ ಭೇಟಿ ಬಳಿಕ ಯಾವ ಸಚಿವರಿಗೆ ಯಾವ ಖಾತೆ ಎಂಬುದು ಸ್ಪಷ್ಟವಾಗಲಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular