HomeLatest Newsಮತ್ತೊಂದು ಭೀಕರ ಅಪಘಾತ: ಪ್ರಪಾತಕ್ಕೆ ಉರುಳಿದ ಬಸ್: 7 ಪ್ರಯಾಣಿಕರು ದುರ್ಮರಣ

ಮತ್ತೊಂದು ಭೀಕರ ಅಪಘಾತ: ಪ್ರಪಾತಕ್ಕೆ ಉರುಳಿದ ಬಸ್: 7 ಪ್ರಯಾಣಿಕರು ದುರ್ಮರಣ

ಶಿಮ್ಲಾ: ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್ ವೊಂದು ಕಂದಕಕ್ಕೆ ಉರುಳಿ ಬಿದ್ದಿದ್ದು, ಘಟನೆಯಲ್ಲಿ 7 ಜನರು ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ನಡೆದಿದೆ.

ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿಬಿದ್ದಿದೆ. ಪರಿಣಾಮ ಏಳು ಪ್ರಯಾಣಿಕರು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈರಾಗಢ-ಚಂಬಾ ಮಾರ್ಗದ ದೇವಿಕೋಠಿ ಬಳಿ ಈ ದುರಂತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೈರಾಗಢದಿಂದ ಚಂಬಾಗೆ ತೆರಳುತ್ತಿದ್ದ ಖಾಸಗಿ ಬಸ್, ದೇವಿಕೋಠಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದಿದೆ. ಅಪಘಾತ ಸಂಭವಿಸಿದ ವೇಳೆ ಬಸ್‌ನಲ್ಲಿ ಒಟ್ಟು 22 ಪ್ರಯಾಣಿಕರಿದ್ದರು. ಈ ಪೈಕಿ 7 ಜನರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಕಂದಕದಿಂದ ಮೇಲೆತ್ತಿ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular