HomeKarnatakaಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ನಡೆದ ಅಪಘಾತದಲ್ಲಿ ವಿದ್ಯಾರ್ಥಿನಿ ಬಲಿ ಪ್ರಕರಣ: ಮೃತಳ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ...

ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ನಡೆದ ಅಪಘಾತದಲ್ಲಿ ವಿದ್ಯಾರ್ಥಿನಿ ಬಲಿ ಪ್ರಕರಣ: ಮೃತಳ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ನಡೆದ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ನೀಡಿದೆ.

ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಮಾನಸಾ, ಚಿಕಿತ್ಸೆ ಫಲಿಸದೇ ಆ.6ರಂದು ಮೃತಪಟ್ಟಿದ್ದಳು. ಇದೀಗ ವಿದ್ಯಾರ್ಥಿನಿ ಮಾನಸ ಅವರ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 3 ಲಕ್ಷ ರೂ. ಹಾಗೂ ಚಿಕಿತ್ಸಾ ವೆಚ್ಚವಾಗಿ ಬೆಂಗಳೂರು ವಿಶ್ವವಿದ್ಯಾಲಯದಿಂದ 7 ಲಕ್ಷ ರೂ. ಸೇರಿದಂತೆ ಒಟ್ಟು 10 ಲಕ್ಷ ರೂ. ವಿದ್ಯಾರ್ಥಿನಿಯ ಪೋಷಕರಿಗೆ ನೀಡಲಾಗಿದೆ.

ಮೈಸೂರು ಜಿಲ್ಲೆಯ ನಂಜನಗೂಡು ಮೂಲದ ಮಾನಸ (23) ಅವರು ಬೆಂಗಳೂರು ವಿಶ್ವವಿದ್ಯಾಲಯದ ದೃಶ್ಯ ಕಲಾ ವಿಭಾಗದಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದರು. ಜುಲೈ 30 ರಂದು ಜ್ಞಾನಭಾರತಿ ಕ್ಯಾಂಪಸ್‌ನ ಗಾಂಧಿ ಮಾರ್ಗದ ಕ್ಯಾಂಟೀನ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಆಟೋರಿಕ್ಷಾ ಮಾನಸ ಅವರಿಗೆ ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಅವರನ್ನು ನಾಗರಭಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು.

ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವಿನ ಬೆನ್ನಲ್ಲೇ ವಿದ್ಯಾರ್ಥಿಅಗ್ಳು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರು. ನ್ಯಾಯಕ್ಕಾಗಿ ಆಗ್ರಹಿಸಿದ್ದರು. ವಿದ್ಯಾರ್ಥಿನಿಯ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿ, ಸಂಕಷ್ಟದಲ್ಲಿರುವ ಕುಟುಂಬಕ್ಕೆ ನೆರವಾಗುವ ನಿಟ್ಟಿನಲ್ಲಿ ಸರ್ಕಾರ ಪರಿಹಾರ ನೀಡಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular