ಬೆಂಗಳೂರು: DCET-26 ಎಂಜಿನಿಯರಿಂಗ್ ಎರಡನೇ ವರ್ಷಕ್ಕೆ ಲ್ಯಾಟರಲ್ ಪ್ರವೇಶ ಪಡೆಯುವ ಡಿಪ್ಲೊಮಾ ಅಭ್ಯರ್ಥಿಗಳಿಗೆ ತಮ್ಮ ಅರ್ಜಿಯಲ್ಲಿನ ಮೀಸಲಾತಿ ವಿವರಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಆಗಸ್ಟ್ 11ರವರೆಗೆ ಅವಕಾಶ ನೀಡಲಾಗಿದೆ.
ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಪ್ರಕಾರ ಪಡೆದ ಆರ್ ಡಿ ಸಂಖ್ಯೆ ಹಾಗೂ ಪ್ರವರ್ಗ ಗಳ/ಆದಾಯ ಪ್ರಮಾಣ ಪತ್ರದ ಆರ್ ಡಿ ಸಂಖ್ಯೆಯನ್ನು ಕೂಡ ದಾಖಲಿಸಲು ಅವಕಾಶ ನೀಡಲಾಗಿದೆ.
ಅಭ್ಯರ್ಥಿಗಳ ಕೋರಿಕೆ ಮೇರೆಗೆ ಈ ಅವಕಾಶ ಕಲ್ಪಿಸಿದ್ದು, ಇದರ ಉಪಯೋಗ ಪಡೆದುಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

