HomeKarnatakaಸಚಿವ ಮಧು ಬಂಗಾರಪ್ಪ ಸನ್ಮಾನ ಕಾರ್ಯಕ್ರಮದಲ್ಲಿ ಕಳ್ಳರ ಕೈಚಳಕ: ಕಾಂಗ್ರೆಸ್ ಮುಖಂಡರ ಮೊಬೈಲ್, ನಗದು ಕಳವು

ಸಚಿವ ಮಧು ಬಂಗಾರಪ್ಪ ಸನ್ಮಾನ ಕಾರ್ಯಕ್ರಮದಲ್ಲಿ ಕಳ್ಳರ ಕೈಚಳಕ: ಕಾಂಗ್ರೆಸ್ ಮುಖಂಡರ ಮೊಬೈಲ್, ನಗದು ಕಳವು

ಶಿವಮೊಗ್ಗ: ಶಿವಮೊಗ್ಗದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಶನಿವಾರ ನಡೆದ ಸಚಿವ ಮಧು ಬಂಗಾರಪ್ಪ ಅವರ ಸನ್ಮಾನ ಕಾರ್ಯಕ್ರಮದಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹೆಚ್ಚಿನ ಜನ ಸೇರಿದ್ದ ಸಂದರ್ಭದಲ್ಲಿ ಕೈಚಳಕ ತೋರಿಸಿರುವ ಕಳ್ಳರು ಮುಖಂಡರ ಮೊಬೈಲ್, ಹಣ ಕಳವು ಮಾಡಿದ್ದಾರೆ. ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಎಸ್.ಕೆ. ಮರಿಯಪ್ಪ, ಕಿರಣ್, ಹನುಮಂತು, ಉಮೇಶ್ ಸೇರಿದಂತೆ ಹಲವಾರು ಮುಖಂಡರ ಮೊಬೈಲ್ ಮತ್ತು ಲಕ್ಷಾಂತರ ರೂ. ಹಣ ದೋಚಲಾಗಿದೆ.

ಸಚಿವರಾಗಿ ಆಗಮಿಸಿದ ಮಧು ಬಂಗಾರಪ್ಪ ಅವರಿಗೆ ವೇದಿಕೆಯಲ್ಲಿ ಸನ್ಮಾನಿಸುವ ವೇಳೆ ಜನದಟ್ಟಣೆ ಉಂಟಾಗಿದ್ದು, ಈ ವೇಳೆ ಕಳ್ಳರು ಕೈಚಳಕ ತೋರಿಸಿದ್ದಾರೆ. ಜಯನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಕಳ್ಳರ ಬಂಧನಕ್ಕೆ ಬಲೆ ಬೀಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular