ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆಗೆ ಕೌಶಲ್ಯ ತರಬೇತಿ ನೀಡಲಾಗುವುದು.
80 ಸರ್ಕಾರಿ ಪದವಿ ಕಾಲೇಜುಗಳಲ್ಲಿ ವಿವಿಧ ಸೆಮಿಸ್ಟರ್ ನಲ್ಲಿ ವ್ಯಾಸಂಗ ಮಾಡುತ್ತಿರುವ 18 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ 2026 -27 ನೇ ಸಾಲಿನಲ್ಲಿ ಕಲಿಕೆಯ ಜೊತೆ ಕೌಶಲ್ಯ 4.0 ತರಬೇತಿ ಕಾರ್ಯಕ್ರಮ ಅನುಷ್ಠಾನಗೊಳಿಸಲು ಸರ್ಕಾರ ಅನುಮೋದನೆ ನೀಡಿದೆ.
ಇದಕ್ಕಾಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಒದಗಿಸಿದ 7.59 ಕೋಟಿ ರೂ. ಅನುದಾನ ಬಳಕೆ ಮಾಡಿಕೊಳ್ಳಲು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಉನ್ನತ ಶಿಕ್ಷಣ ಇಲಾಖೆ ಅನುಮತಿ ನೀಡಿದೆ. ಕಲ್ಯಾಣ ಕರ್ನಾಟಕ ಭಾಗದ ಸಾರ್ವಜನಿಕ ವಿವಿಗಳಿಗೆ ಸಂಯೋಜನೆ ಪಡೆದಿರುವ 80 ಪದವಿ ಕಾಲೇಜುಗಳಲ್ಲಿನ ಬಿಎ. ಬಿಬಿಎ, ಬಿಎಸ್ಸಿ, ಬಿಕಾಂ ಮತ್ತು ಇತರೆ ಪದವಿ ಕೋರ್ಸ್ ಗಳ ಐದು ಮತ್ತು ಆರನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿರುವ 18,1991 ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ಉಪಯೋಗ ದೊರೆಯಲಿದೆ ಎಂದು ಹೇಳಲಾಗಿದೆ.

